ಭಾಷೆಗೆ ಆದ್ಯತೆ ನೀಡಿ, ಉಳಿಸಿ, ಬೆಳೆಸಿ: ಸಿದ್ದುಗೌಡ
ಚಿತ್ತಾಪುರ: ರಾಜ್ಯದಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಿ, ಕನ್ನಡವನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕನ್ನಡಿಗರೆಲ್ಲರೂ ಮಾಡಲು ಮುಂದಾಗಬೇಕು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಸಿದ್ದುಗೌಡ ಅಫಜಲಪೂರಕರ್ ಹೇಳಿದರು.
ಪಟ್ಟಣದ ತಹಸೀಲ್ ಕಾರ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ನಿಮಿತ್ಯ ಕನ್ನಡಾಂಬೆ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ, ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ತಹಸೀಲ್ ಕಚೇರಿಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕನ್ನಡ ಭಾಷೆಗೆ ಮೊದಲ ಆದ್ಯತೆಯನ್ನು ನೀಡಬೇಕು. ಹಾಗೆಂದು ಬದುಕಿನ ಭಾಷೆಯಾದ ಇಂಗ್ಲಿಷ್ ಅನ್ನು ಕಡೆಗಣಿಸಬಾರದು.
ಕನ್ನಡ ಭಾಷೆ ಕೇವಲ ಒಂದೆರಡು ದಿನದಿಂದ ನಿರ್ಮಾಣವಾದದ್ದು ಅಲ್ಲ. ಕನ್ನಡ ಭಾಷೆಗೆ ತನ್ನದೇ ಆದ ಇತಿಹಾಸವಿದೆ. ಕೇವಲ ಭಾಷಣ ಮಾಡುವುದರಿಂದ ಭಾಷೆಯ ಅಭಿವೃದ್ಧಿ ಸಾಧ್ಯವಿಲ್ಲ. ಭಾಷೆ ಬಗ್ಗೆ ಚರ್ಚೆ ನಡೆದಾಗ ಮಹತ್ವದ ಅಂಶಗಳನ್ನು ದಾಖಲೀಕರಣ ಮಾಡುವ ಅಗತ್ಯ ಇದೆ ಎಂದರು.
ಕರವೇ ತಾಲೂಕು ಅಧ್ಯಕ್ಷ ನರಹರಿ ಕುಲಕರ್ಣಿ ಮಾತನಾಡಿ ನಾವು ಕನ್ನಡ ಉಳಿಸಿ ಬೆಳೆಸುವ ಜೊತೆಗೆ ನಮ್ಮ ಸುತ್ತಲೂ ವಾಸವಾಗಿರುವ ಬೇರೆ ರಾಜ್ಯದ ಜನರಿಗೂ ಕನ್ನಡ ಕಲಿಸುವ ಮೂಲಕ ನಮ್ಮ ಭಾಷೆಯ ರಕ್ಷಣೆಗೆ ಮುಂದಾಗಬೇಕಿದೆ. ಆ ಮೂಲಕ ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸುವ ಬದ್ಧತೆಯನ್ನು ನಾವು ಮೆರೆಯಬೇಕಿದೆ ಎಂದರು.
ತಹಸೀಲ್ದಾರ್ ಉಮಾಕಾಂತ್ ಹಳ್ಳೆ, ಪುರಸಭೆ ಅಧ್ಯಕ್ಷ ಚಂದ್ರಶೇಖರ್ ಕಾಶಿ,ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ದೀಪಕ್ ಹೊಸ್ಸೂರಕರ್, ಸರ್ಕಾರಿ ನೌಕರರ ಸಂಘ ಅಧ್ಯಕ್ಷ ಬಸವರಾಜ ಬಳ್ಳೂಂಡಗಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಶ್ರೀಮತಿ ನೀಲಗಂಗಾ ಬಬಲಾದ್, ಸಿಪಿಐ ಕೃಷ್ಣಪ್ಪ ಕಲ್ಲದೇವರ, ವೇದಿಕೆಯ ಮೇಲಿದ್ದರು. ಸೇರಿದಂತೆ ತಾಲೂಕ ಅಧಿಕಾರಿಗಳು ಸಿಬ್ಬಂದಿ ವರ್ಗ ಹಾಗೂ ಇತರರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ