ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೆ ಭೇಟಿ: ನಾದ್
ಚಿತ್ತಾಪುರ: ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಗ್ರಾಮ ಹಾಗೂ ತಾಂಡಾಕ್ಕೆ ಭೇಟಿ ನೀಡುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರದ ಸಾಧನೆಗಳು ಹಾಗೂ ಯೋಜನೆಗಳ ಬಗ್ಗೆ ಜನರಲ್ಲಿ ತಿಳಿಸುವ ಮೂಲಕ ಪಕ್ಷದ ಸಂಘಟನೆಗೆ ಮುಂದಾಗಿದ್ದೇನೆ ಎಂದು ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷ ದೇವಿಂದ್ರನಾಥ ನಾದ್ ಹೇಳಿದರು.
ಮತಕ್ಷೇತ್ರದ ಅಲ್ಲೂರ.ಬಿ, ಅಳ್ಳೋಳ್ಳಿ, ಅಲ್ಲೂರ.ಕೆ, ರಾಮತೀರ್ಥ, ಭೀಮನಳ್ಳಿ, ಹಲಕಟ್ಟಿ, ರಾವೂರ, ರಾಂಪೂರಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರಿಂದ ಉತ್ತಮ ಅಭಿಪ್ರಾಯ ಹಾಗೂ ಬೆಂಬಲ ವ್ಯಕ್ತವಾಗಿದೆ ಹಾಗೂ ಭಾರತೀಯ ಜನತಾ ಪಕ್ಷದ ಪರ ಉತ್ತಮ ವಾತಾವರಣವಿದೆ ಎಂದು ಹೇಳಿದರು.
ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ದಿ ನಿಗಮದಡಿ ಅರ್ಹ ಫಲಾನುಭವಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ನಿಗಮದಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದ್ದೇನೆ ಎಂದರು.
ನಗರ ಯೋಜನಾ ಪ್ರಾಧಿಕಾರ ಸದಸ್ಯ ಶಾಂತಕುಮಾರ ಮಳಖೇಡ, ಬಿಜೆಪಿ ಮುಖಂಡರಾದ ಚಂದ್ರಶೇಖರ ಕಡೇಸೂರ, ಹಂಪಣ್ಣ ಹುಳಾಗಡ್ಡಿ, ನಾಗಪ್ಪ ದೊಡ್ಡಮನಿ, ಈಶ್ವರ ಚಂದಣ್ಣನವರ್, ಭಾಸ್ಕರ್ ಭೀಮನಳ್ಳಿ, ಹಣಮಂತ ಹೆಡಗಿಮುದ್ರಿ, ಮಾರುತಿ ಮುಗುಳಕರ್, ಪರಶುರಾಮ ಭಾರ್ಗವ್ ಇತರರು ಇದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ