ಜ.4ಕ್ಕೆ ಅಂಬಿಗರ ಚೌಡಯ್ಯ ಜಯಂತಿ ಪೂರ್ವಸಿದ್ಧತಾ ಸಭೆ.

ಚಿತ್ತಾಪೂರ: ಪಟ್ಟಣದ ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಕಲ್ಯಾಣ ಮಂಟಪದಲ್ಲಿ ಜನವರಿ 4 ಬೆಳಿಗ್ಗೆ 10:30ಕ್ಕೆ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಜಯಂತೋತ್ಸವದ ಪೂರ್ವ ಸಿದ್ಧತಾ ಸಭೆ ಕರೆಯಲಾಗಿದೆ ಎಂದು ಕೋಲಿ ಸಮಾಜದ ಯುವ ಘಟಕ ನಗರ ಅಧ್ಯಕ್ಷ ರಾಜು ಹೋಳಿಕಟ್ಟಿ ತಿಳಿಸಿದ್ದಾರೆ. ಜನೆವರಿ 21 ರಂದು ಸರ್ಕಾರದಿಂದ ಆಚರಣೆ ಮಾಡುವ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಜಯಂತಿ ಕುರಿತು ಚರ್ಚೆ ಮಾಡಲು ಹಾಗೂ ಸಮಾಜದ ಸಂಘಟನೆ ಕುರಿತು ಚರ್ಚೆ ನಡೆಸಲು ತಾಲ್ಲೂಕು ಕೋಲಿ ಸಮಾಜದ ಅಧ್ಯಕ್ಷ ರಾಮಲಿಂಗ ಬಾನರ್, ಗೌರವಾಧ್ಯಕ್ಷ ಹಣಮಂತ ಸಂಕನೂರು, ಪ್ರಧಾನ ಕಾರ್ಯದರ್ಶಿ ದೇವಿಂದ್ರ ಅರಣಕಲ್ ನಗರ ಕೋಲಿ ಸಮಾಜದ ಅಧ್ಯಕ್ಷ ಭೀಮಣ್ಣ ಹೋತಿನಮಡು, ತಾಲ್ಲೂಕು ಯುವ ಕೋಲಿ ಸಮಾಜದ ಅಧ್ಯಕ್ಷ ಗುಂಡು ಐನಾಪುರ, ಉಪಸ್ಥಿತಿಯಲ್ಲಿ ಸಭೆ ನಡೆಯಲಿದ್ದು ಸಮಾಜದ ಸರ್ವ ಪದಾಧಿಕಾರಿಗಳು, ಯುವ ಘಟಕದ ಪದಾಧಿಕಾರಿಗಳು, ಸಲಹಾ ಸಮಿತಿಯ ಸರ್ವ ಮುಖಂಡರು ತಪ್ಪದೆ ಸಭೆಗೆ ಆಗಮಿಸಿ ಜಯಂತಿ ಆಚರಣೆ ಬಗ್ಗೆ ಸಲಹೆ, ಸೂಚನೆ ನೀಡುವ ಮೂಲಕ ಮಾರ್ಗದರ್ಶನ ಮಾಡಿ ಸಭೆ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.