ಈಡಿಗ ಸಮಾಜದ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ.

ಚಿತ್ತಾಪುರ:ತಾಲೂಕು ಆರ್ಯ ಈಡಿಗ ಸಮಾಜದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ವಇಚ್ಛೆಯಿಂದ ನಾನು ರಾಜೀನಾಮೆ ನೀಡಿದ್ದೇನೆ ಎಂದು ಕಾಶಿನಾಥ ಗುತ್ತೇದಾರ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಸಮಾಜದ ಮುಖಂಡರಿಂದ ಕಾಶಿನಾಥ ಗುತ್ತೇದಾರ್ ಅವರಿಗೆ ಸನ್ಮಾನ.

ತಾಲೂಕಿನಲ್ಲಿ ಕಳೆದ ೨೦೦೬ ರಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮ ಮಾಡುತ್ತಾ ಈ ಭಾಗದ ಜನರಲ್ಲಿ ಗುರುಗಳ ವಿಚಾರಗಳನ್ನು ಪರಿಚಯಿಸುವ ಕೆಲಸ ಪ್ರಾಮಾಣಿಕವಾಗಿ ಮಾಡಿದ್ದೇನೆ. ಆಗಿನ ಸೋಲೂರಿನ ಶ್ರೀ ರೇಣುಕಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ ಕಳೆದ ೨೦೧೦ ರಲ್ಲಿ ಈಡಿಗ ಸಮಾಜದ ಸಂಘಟನೆಗಾಗಿ ತಾಲೂಕು ಪದಾಧಿಕಾರಿಗಳಾಗಿ ಆಯ್ಕೆ ಮಾಡಿದ್ದರು. ನನ್ನ ಸಂಘಟನಾ ಕಾರ್ಯಚಟುವಿಕೆ ಗಮನಿಸಿ ಪ್ರಧಾನ ಕಾರ್ಯದರ್ಶಿಯ ಜವಾಬ್ದಾರಿ ವಹಿಸಿದ್ದರು. ಅಂದಿನಿಂದ ಇಲ್ಲಿವರೆಗೆ ತಾಲೂಕಿನಲ್ಲಿ ಈಡಿಗ ಸಮಾಜದ ಸಂಘಟನೆ ಬಲ ಪಡಿಸುವಲ್ಲಿ ಮತ್ತು ಗ್ರಾಮೀಣ ಭಾಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರಗಳನ್ನು ತಿಳಿಸುವ ನಿಟ್ಟಿನಲ್ಲಿ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ ಆತ್ಮತೃಪ್ತಿ ನನಗಿದೆ ಎಂದರು.

ಸಮಾಜದ ಸೋಲೂರ ಮಠದ ಆರ್ಯ ಶ್ರೀ ರೇಣುಕಾನಂದ ಮಹಾಸ್ವಾಮಿಗಳು ಕಾಶಿನಾಥ ಗುತ್ತೇದಾರ ಅವರ ಮನೆಗೆ ಭೇಟಿ ನೀಡಿದ ಸಂದರ್ಭ.
 
ತಾಲೂಕಿನಲ್ಲಿ ಸಮಾಜದ ಸಂಘಟನೆ ಹಾಗೂ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮಕ್ಕಾಗಿ ಹಗಲಿರಳು ನಿಷ್ಠೆಯಿಂದ ಸೇವೆ ಸಲ್ಲಿಸಿದ್ದೇನೆ. ೧೩ ವರ್ಷಗಳ ಕಾಲ ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿದ್ದುಕೊಂಡು ಸಮಾಜದ ಸಂಘಟನೆ ಮಾಡುವುದಕ್ಕೆ ಸಹಕರಿಸಿದ ಸಮಾಜದ ಮುಖಂಡರಿಗೂ,ಯುವಕರಿಗೂ ಹಾಗೂ ನನ್ನ ಅಭಿಮಾನಿಗಳಿಗೂ ಕೃತಜ್ಞತೆಗಳು ಸಲ್ಲಿಸುತ್ತೇನೆ.ಇನ್ನೂ ಮುಂದೆ ಸಮಾಜದ ಯಾವುದೇ ಜವಾಬ್ದಾರಿ ವಹಿಸುವುದಿಲ್ಲ ಕೇವಲ ಸಾಮಾನ್ಯ ಕಾರ್ಯಕರ್ತನಾಗಿರುವೆ, ಕಾಲಕಾಲಕ್ಕೆ ಸೂಕ್ತ ಸಲಹೆ ಸೂಚನೆಗಳು ಹಾಗೂ ಮಾರ್ಗದರ್ಶನ ನೀಡುವುದಾಗಿ ತಿಳಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.

ಮನೆಗಳ ಹಂಚಿಕೆ ಪ್ರಕ್ರಿಯೆ ಮುಂದೂಡಲಾಗಿದೆ

ರಾಜ್ಯೋತ್ಸವ ಪ್ರಶಸ್ತಿಗೆ ಏಳು ಜನ ಸಾಧಕರ ಆಯ್ಕೆ.

ಬಜಾಜ್ ಕಾಂಪ್ಲೆಕ್ಸ್ ನಲ್ಲಿ ಅನೈತಿಕ ಚಟುವಟಿಕೆ.

ತಾಲ್ಲೂಕು ಅಧಿಕಾರಿಗಳ ವಿರುದ್ಧ ಸಚಿವರ ಅಸಮಾಧಾನ.

ಪ್ರಯಾಗರಾಜ್ ಪವಿತ್ರ ತೀರ್ಥಸ್ಥಳ: ಕಂಬಳೇಶ್ವರ ಶ್ರೀ.

ತಹಸೀಲ್ ಕಛೇರಿಯಲ್ಲಿ ಪೋಲೀಸ ಪೇದೆ ಸಾವು.

ಮಗನ ಸಾಧನೆಗೆ ತಂದೆ-ತಾಯಿ ಮೆಚ್ಚುಗೆ.