ಪ್ರಿಯಾಂಕ್ ಖರ್ಗೆ ಹ್ಯಾಟ್ರಿಕ್ ಗೆಲುವು.

ಚಿತ್ತಾಪೂರ: ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರು ಭರ್ಜರಿ ಜಯಭೇರಿಯೊಂದಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. 

ಪ್ರಿಯಾಂಕ್ ಖರ್ಗೆ ಅವರು 13640 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರನ್ನು ಮಣಿಸಿದ್ದಾರೆ. ಪ್ರಿಯಾಂಕ್ ಅವರಿಗೆ 81,323 ಮತಗಳು ದೊರಕಿದ್ದರೆ, ಅವರ ನೇರ ಎದುರಾಳಿ ಮಣಿಕಂಠ 67,683 ಮತಗಳನ್ನು ಪಡೆದಿದ್ದಾರೆ. ಇವರಿಬ್ಬರ ಮಧ್ಯೆಯೇ ತೀವ್ರ ಪೈಪೋಟಿ ನಡೆಸಿದ್ದು, ಕ್ಷೇತ್ರದಲ್ಲಿದ್ದ ಇತರೆ ಯಾವ ಅಭ್ಯರ್ಥಿಯೂ ಸಾವಿರ ಮತಗಳ ಗಡಿ ದಾಟುವುದಕ್ಕೂ ಸಾಧ್ಯವಾಗಿಲ್ಲ. ಒಟ್ಟು 1,53,195 ಮತಗಳು ಚಲಾವಣೆಯಾಗಿದೆ. 962 ಮತಗಳನ್ನು ಪಡೆದ ಆಮ್ ಆದ್ಮಿ ಪಕ್ಷದ ಜಗದೀಶ್ ಎಸ್ ಸಾಗರ್ ಮೂರನೇ ಸ್ಥಾನಕ್ಕೆ ತೃಪ್ತರಾಗಿದ್ದಾರೆ. ಬಹುಜನ ಸಮಾಜ ಪಾರ್ಟಿ ಅಭ್ಯರ್ಥಿ ಶರಣು ಸೂಗುರ 878 ಮತಗಳು, ಜೆಡಿಎಸ್ ಅಭ್ಯರ್ಥಿ ಡಾ. ಸುಭಾಶ್ಚಂದ್ರ ರಾಠೋಡ್ 643 ಮತಗಳು, ಕೆಆರ್ ಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಪೂಜಾರಿ 485 ಮತಗಳು, ಸ್ವತಂತ್ರ ಅಭ್ಯರ್ಥಿ ರಾಜು ಹುದನೂರ 505 ಮತಗಳು ಪಡೆದಿದ್ದಾರೆ.
ಇನ್ನು ನೋಟಾಕ್ಕೆ 816 ಮತಗಳು ಬಿದ್ದಿವೆ.
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೈ ಅನ್ನುವ ಜಯ ಘೋಷಗಳು ಕೇಳಿ ಬಂದವು. ಸರ್ವ ಕಾಂಗ್ರೆಸ್ ಕಾರ್ಯಕರ್ತರು ಜಯ ಘೋಷಗಳೊಂದಿಗೆ ಗುಲಾಲ್ ಎರಚಿ ಸಂತಸ  ಪಡುತ್ತಿದ್ದಾರೆ.

ಬಿಜೆಪಿಯವರು ಚಿತ್ತಾಪುರ ಜನತೆಗೆ ಇಷ್ಟ ಇಲ್ಲದಿದ್ದರೂ ರೌಡಿಶೀಟರ್ ನಲ್ಲಿ ಹೆಸರಿದ್ದ ಮಣಿಕಂಠ ರಾಠೋಡ ಅವರನ್ನು ಕಣಕ್ಕಿಳಿಸಿದರು. ಅವರ ಪರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಪ್ರಚಾರ ನಡೆಸಿದ್ದು ಪ್ರಯೋಜನಕ್ಕೆ ಬರಲಿಲ್ಲ. ಅಂತೂ ಸತ್ಯಕ್ಕೆ ಜಯವಾಗಿದೆ ಎಂದರು.
                    - ಪ್ರಿಯಾಂಕ್ ಖರ್ಗೆ
                ಶಾಸಕರು, ಮತಕ್ಷೇತ್ರ ಚಿತ್ತಾಪೂರ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.