ಕೆಟ್ಬ ಹಾಗೂ ಭ್ರಷ್ಟ ಸರ್ಕಾರ‌ ರಾಜ್ಯದಲ್ಲಿದೆ: ಖರ್ಗೆ ಆರೋಪ.

ಚಿತ್ತಾಪೂರ: ರಾಜ್ಯದ ಇತಿಹಾಸದಲ್ಲಿಯೇ ಬಿಜೆಪಿ ಸರ್ಕಾರವು ಅತ್ಯಂತ ಕೆಟ್ಟ ಹಾಗೂ ಭ್ರಷ್ಟ ಸರ್ಕಾರವಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಆರೋಪಿಸಿದರು.

ತಾಲ್ಲೂಕಿನ ದಿಗ್ಗಾಂವ,
ಅಲ್ಲೂರು(ಬಿ), ಅಲ್ಲೂರ(ಕೆ), ಇಟಗಿ 
ಗ್ರಾಮದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರ ಇದೆ ಎನಿಸುವುದಿಲ್ಲ. 40% ಸರ್ಕಾರ ಇದೆ ಎನ್ನುವುದು ಜನರ ಅಭಿಪ್ರಾಯವಾಗಿದೆ. ಈ ಸರ್ಕಾರ ಹುದ್ದೆಗಳನ್ನು ಮಾರಾಟ ಮಾಡಿಕೊಂಡು ನಿರುದ್ಯೋಗಿ ಯುವಕರ ಪಾಲಿಗೆ ಕರಾಳವಾಗಿ ಪರಿಣಮಿಸಿದೆ.

 ತಾಲೂಕಿನಲ್ಲಿ ರಾಜಕೀಯ ವಾತಾವರಣ ಕಲುಷಿತಗೊಳ್ಳುತ್ತಿದೆ. ತತ್ವ ಸಿದ್ದಾಂತದ ಬಗ್ಗೆ ಮಾತನಾಡುವ ಬಿಜೆಪಿ ಕ್ರಿಮಿನಲ್ ಹಿನ್ನೆಲೆಯಿರುವ ವ್ಯಕ್ತಿಗೆ ಟಿಕೇಟ್ ನೀಡಿದೆ. ಅಕ್ರಮ ಅಕ್ಕಿ ಹಾಗೂ ಹಾಲಿನ‌ಪುಡಿ‌ ಕಳ್ಳತನ ಮಾಡಿ ಮಾರಾಟ‌ ಮಾಡಿದ ಆರೋಪದ ಮೇಲೆ ಕರ್ನಾಟಕ, ಆಂಧ್ರ, ತೆಲಂಗಾಣ ಹಾಗೂ ಮಹಾರಾಷ್ಟ್ರದ ವಿವಿಧ ಠಾಣೆಗಳಲ್ಲಿ 40 ಕೇಸುಗಳು ದಾಖಲಾಗಿವೆ. ಇದನ್ನೆಲ್ಲ ನಾನು ಹೇಳುತ್ತಿಲ್ಲ. ಚುನಾವಣೆ ನಾಮ ಪತ್ರದ ಜೊತೆಗೆ ಅವನು ತಹಸೀಲ್ದಾರರಿಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ವಿವರವಾಗಿ ಹೇಳಿಕೊಂಡಿದ್ದಾನೆ. ಅಂತವನಿಗೆ ಟಿಕೇಟ್ ನೀಡಿರುವ ಬಿಜೆಪಿಗರು ಚಿತ್ತಾಪುರದ ಘನತೆಗೆ ಧಕ್ಕೆ ತಂದಿದ್ದಾರೆ. ಹಾಗಾಗಿ ನೀವು ನಿಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಿ ಎಂದರು.

ಈ ಸಲದ ಚುನಾವಣೆ ಯುವಕರ ಭವಿಷ್ಯದ ಮಹಿಳೆಯ‌ ಸುಭದ್ರತೆಯ ಹಾಗೂ‌ ವಿದ್ಯಾರ್ಥಿಗಳ‌ ಶೈಕ್ಷಣಿಕ ಅಭಿವೃದ್ದಿಗೆ ಸಂಬಂಧಿಸಿದ್ದು ಕಾನೂನು ಬಾಹಿರ ಕೆಲಸ ಮಾಡುವ ವ್ಯಕ್ತಿಗಳಿಗೆ ಮತ ನೀಡುವ ಬದಲು ಅಭಿವೃದ್ದಿ ಪರವಾಗಿರುವ ನನ್ನಗೆ ಮತ ನೀಡಿ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ನಾಗರೆಡ್ಡಿ ಪಾಟೀಲ ಕರದಾಳ, ಹಣಮಂತ ಸಂಕನೂರ, ಶರಣಪ್ಪ ನಾಟೀಕಾರ್, ರಾಮಲಿಂಗ ಬಾನರ್, ಬಸವರಾಜ ಚಿಮ್ಮನ್ನಳ್ಳಿ, ಸೇರಿದಂತೆ ಹಲವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.