ಕ್ಷೇತ್ರವ್ಯಾಪ್ತಿಯಲ್ಲಿ ಮಣಿಕಂಠ ರಾಠೋಡ ಬಿರುಸಿನ ಪ್ರಚಾರ.
ಚಿತ್ತಾಪೂರ: ಮೀಸಲು ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅಇವರು ಪಟ್ಟಣದ 23 ವಾರ್ಡ್ ಗಳ ಮನೆ ಮನೆಗೆ ಹೋಗಿ ಮತ ಕೇಳುವ ಮೂಲಕ ಬಿರುಸಿನ ಪ್ರಚಾರ ನಡೆಸಿದರು.
ರಾಜ್ಯದಲ್ಲಿ ಮತ್ತೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ತಾಲೂಕಿನಲ್ಲಿ ಸಾಕಾಷ್ಟು ಅಭಿವೃದ್ಧಿಗೆ ಸಾದ್ಯವಾಗುತ್ತದೆ. ನಾನು ನಿಮ್ಮ ಮನೆಯ ಮಗನಾಗಿ ನಿಮ್ಮೆಲ್ಲರ ಸೇವೆ ಮಾಡುವ ಭಾಗ್ಯ ನನ್ನಗೆ ಒದಗಿ ಬಂದಿದೆ. ಹೀಗಾಗಿ ಮೇ,10ಕ್ಕೆ ಬಿಜೆಪಿ ಪಕ್ಷಕ್ಕೆ ಮತ ನೀಡಿ ನನ್ನಗೆ ಗೆಲ್ಲಿಸಿ ಎಂದು ಮತದಾರರಲ್ಲಿ ಕೈ ಮುಗಿದು ಬೇಡಿಕೊಂಡರು.
ಯಾವುದೇ ಪ್ರತಿಫಲಾ ಪೇಕ್ಷೆ ಇಲ್ಲದೆ ಕಾರ್ಯಕರ್ತರು ಪಣತೊಟ್ಟು ಮನೆಮನೆಗೂ ಪ್ರಚಾರದಲ್ಲಿ ತೊಡಗಿದ್ದಾರೆ. ಕಾರ್ಯಕರ್ತರ ಪ್ರೀತಿಗೆ ಚಿರಋಣಿ ಎಂದು ಹೇಳಿದರು.
ಕೇಂದ್ರದಿಂದ ಬಿಡುಗಡೆಯಾಗುವ ಒಂದು ಪೈಸೆ ಹಣವೂ ನಿರ್ದಿಷ್ಟ ಫಲಾನುಭವಿ ಯನ್ನು ತಲುಪಲು ಹಾಗೂ ನಿರ್ದಿಷ್ಟ ಯೋಜನೆಗೆ ಬಳಕೆ ಯಾಗಲು ಡಬಲ್ ಎಂಜಿನ್ ಸರ್ಕಾರ ಮುಖ್ಯ. ನಾಲ್ಕು ವರ್ಷಗಳ ಕರ್ನಾಟಕದ ಬಿಜೆಪಿ ಆಡಳಿತದಲ್ಲಿ ಇದು ಸಾಬೀತಾಗಿದೆ
ಬಿಜೆಪಿಯ ಜನಕಲ್ಯಾಣ ಕಾರ್ಯಕ್ರಮಗಳೇ ಗೆಲುವಿಗೆ ಸ್ಪೂರ್ತಿಯಾಗಿದ್ದು, ಜನರ ಬದುಕು ಸುಧಾರಣೆಯತ್ತ ಸಾಗುತ್ತಿದೆ. ಸಮೃದ್ಧ ಕರ್ನಾಟಕ ಪ್ರತಿ ನಿರ್ಮಾಣಕ್ಕಾಗಿ ಮತ್ತೊಮ್ಮೆ ಬಿಜೆಪಿಗೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಾಗರಾಜ ಬಂಕಲಗಿ, ಮಲ್ಲಿಕಾರ್ಜುನ ಎಮ್ಮೆನೋರ, ಪ್ರಭು ಗಂಗಾಣಿ, ಕೋಟೇಶ್ವರ ರೇಷ್ಮೆ, ನಾಗರಾಜ ಹೂಗಾರ, ಮಲ್ಲಿಕಾರ್ಜುನ ಪೂಜಾರಿ, ಸೇರಿದಂತೆ ನೂರಾರು ಕಾರ್ಯಕರ್ತರು ಪ್ರಚಾರದಲ್ಲಿ ಭಾಗಿಯಾಗಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ