ತಾಲ್ಲೂಕು ಅಧಿಕಾರಿಗಳ ವಿರುದ್ಧ ಸಚಿವರ ಅಸಮಾಧಾನ.

ಚಿತ್ತಾಪುರ: ತಾಲೂಕನ್ನು ಸಮಗ್ರ ಅಭಿವೃದ್ದಿಗೊಳಿಸಲು ಮುಂದಿನ ಐದು ವರ್ಷಗಳ ಅವಧಿಗಾಗಿ ನೂತನ ಯೋಜನೆಗಳ ಬಗ್ಗೆ ಪರಿಕಲ್ಪನೆ ಹೊಂದಿ ಆ ಬಗ್ಗೆ ವರದಿ ತಯಾರಿಸುವಂತೆ ಕಳೆದ ಸಭೆಯಲ್ಲಿ ಸೂಚಿಸಿದ್ದೆ, ಆದರೆ ಸರ್ಕಾರದ ಬಹುತೇಕ ಇಲಾಖೆಗಳ ಅಧಿಕಾರಿಗಳು ಆ ಬಗ್ಗೆ ಗಮನ ಹರಿಸಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಹಳೆ ಕಲ್ಯಾಣಿಗಳ ಪುನಶ್ಚೇತನಗೊಳಿಸುವುದು ಸೇರಿದಂತೆ ತಾಲೂಕಿನ ಜಲಮೂಲಗಳ ಸಂರಕ್ಷಣೆಗಾಗಿ ಯೋಜನೆ ಹಾಕಿಕೊಳ್ಳಲಾಗಿದ್ದು, ಸಣ್ಣ, ಬೃಹತ್ ನೀರಾವರಿ ಇಲಾಖೆ, ಕೆಬಿಜೆಎನ್‌ಎಲ್, ಕೆಎನ್ ಎನ್ ಎಲ್ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಗಳಯ ಜಂಟಿಯಾಗಿ ನೀಲನಕ್ಷೆ ತಯಾರಿಸಿ ಎಂದು ಸಚಿವರು ಸೂಚಿಸಿದರು. ಸನ್ನತಿ ಏತ ನೀರಾವರಿ ಯೋಜನೆಯಡಿಯಲ್ಲಿ 16,000 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದ್ದು, ಈವರೆಗೆ 11,830 ಹೆಕ್ಟರ್ ನೀರಾವರಿ ಹೊಂದಲಾಗಿದ್ದು ಸ್ಥಳೀಯ ರೈತರ ಸಹಕಾರದಿಂದಾಗಿ ಬಾಕಿ ಇರುವ ಪ್ರದೇಶಕ್ಕೆ ನೀರಾವರಿ ಕಲ್ಪಿಸಲಾಗಿಲ್ಲ ಎಂದು ಕೆಎನ್ ಎನ್ ಎಲ್ ಅಧಿಕಾರಿಗಳು ತಿಳಿಸಿದರು. ಪುನರ್ವಸತಿ ಕುರಿತಂತೆ ಯಾವ ಕ್ರಮಕೈಗೊಳ್ಳಲಾಗಿ...