ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ-ಎಸ್ಟಿ ಅನುದಾನ ಬಳಕೆ ಬೇಡ: ಡಿವಿಪಿ.
ಚಿತ್ತಾಪೂರ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ-ಎಸ್ಟಿ ಸಮುದಾಯಗಳಿಗೆ ಮೀಸಲು ಇರುವ 11 ಸಾವಿರ ಕೋಟಿ ಅನುದಾನವನ್ನು ಬಳಕೆ ಮಾಡದೇ ಸಮುದಾಯದ ಅಭಿವೃದ್ಧಿಗೆ ಬಳಸುವಂತೆ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ಧರಾಮಯ್ಯರವರಿಗೆ ಬರೆದ ಮನವಿ ಪತ್ರವನ್ನು ಮಾನ್ಯ ತಹಶೀಲ್ದಾರ ರವರ ಮೂಲಕ ಸಲ್ಲಿಸಿದರು.
ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಜಗದೇವ ಎಸ್ ಕುಂಬಾರ ಮಾತನಾಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಅಭಿವೃದ್ಧಿಗೆ ಬಳಕೆ ಆಗಬೇಕಿದ್ದ ಈ ಸಾಲಿನ ಅನುದಾನದಲ್ಲಿನ 11 ಸಾವಿರ ಕೋಟಿ ರೂಪಾಯಿ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗೆ ಬಳಸುತ್ತಿರುವುದನ್ನು ದಲಿತ ವಿದ್ಯಾರ್ಥಿ ಪರಿಷತ್ ವಿರೋಧಿಸುತ್ತದೆ. ಕೂಡಲೇ ಈ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಮೀಸಲಿರಬೇಕಾಗಿದ್ದ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗಾಗಿ ಬಳಸುತ್ತಿರುವುದನ್ನು ಖಂಡನೀಯ. ಶೋಷಿತ ಸಮುದಾಯಗಳ ಹಕ್ಕು ಕಿತ್ತುಕೊಂಡು, ತಮ್ಮ ಘೋಷಣೆ ಯೋಜನೆಗಳಿಗಾಗಿ ನಮ್ಮ ಹಣಬಳಸದೆ ಈ ಸಮುದಾಯಗಳ ವಿದ್ಯಾರ್ಥಿ ಯುವಜನರ ಹಾಗೂ ನಿರುದ್ಯೋಗ ಯುವಕರ, ಮಹಿಳೆಯರ ಮಕ್ಕಳ, ರೈತ ಕೂಲಿ ಕಾರ್ಮಿಕರ, ಒಟ್ಟಾರೆ ಈ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಅನುದಾನ ಮೀಸಲಿಡಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಒತ್ತಾಯಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ತಾಲ್ಲೂಕು ಸಂಚಾಲಕ ಪೃಥ್ವಿರಾಜ್ ಸಾಗರ, ಕುಮಾರ ಜಾಧವ್, ಶರಣು ದಂಡೋತಿ, ಸುನಿಲ್ ಜಿತುರೆ, ಸೇರಿದಂತೆ ಇತರರು ಇದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ