ಸಚಿವರ ಮಾತಿಗೆ ಬೆಲೆ ಕೊಡದ ಅಬಕಾರಿ ಇಲಾಖೆ.


ಹಳ್ಳಿ-ಗಲ್ಲಿಗಳಲ್ಲಿ ಮದ್ಯ ದಂಧೆ ಜೋರು. 

ಚಿತ್ತಾಪುರ: ತಾಲೂಕಿನ ಬಹುತೇಕ ಹಳ್ಳಿಗಳ ಗಲ್ಲಿ ಗಲ್ಲಿಗಳಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಬೇಕಾಬಿಟ್ಟಿ ಅಕ್ರಮ ಸರಾಯಿ ಮಾರಾಟ ಹಾಗೂ ಸಾಗಾಟ ಜೋರಾಗಿ ನಡೆಯುತ್ತಿದೆ. ಇದನ್ನೆಲ್ಲ ನೋಡಿದರೆ ಈ ಅಕ್ರಮ ಸರಾಯಿ ಮಾರಾಟಕ್ಕೆ ಅಬಕಾರಿ ಇಲಾಖೆಯ ಅಧಿಕಾರಿಗಳು ಸಾಥ್ ನೀಡುತ್ತಿರುವುದು ಕಂಡುಬರುತ್ತಿದೆ. 
ಸಚಿವ ಪ್ರಿಯಾಂಕ್ ಖರ್ಗೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ.

ಅಗಸ್ಟ್ 4ರಂದು ತಾಲ್ಲೂಕು ಪಂಚಾಯಿತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಪಟ್ಟಣದಲ್ಲಿ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಕಿರಾಣ ಅಂಗಡಿಗಳಲ್ಲಿ ದಾಭಾಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಅವಧಿಗೆ ಮೀರಿದ ಸಮಯದವರೆಗೆ ದಾಭಾಗಳು ತೆಗೆದಿರುತ್ತವೆ.‌ಈ ಬಗ್ಗೆ ಅಬಕಾರಿ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ ಸಚಿವರು ಬೇರೆ ಜಿಲ್ಲೆಯವರು ಎಷ್ಟಾದರೂ ಮದ್ಯ ಮಾರಾಟ ಮಾಡಲಿ, ಚಿತ್ತಾಪುರ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣ ಮಾರಾಟ ಮಾಡಲು ಅನುವು ಮಾಡಿಕೊಡಬೇಡಿ ಎಂದು 
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಬಕಾರಿ ಅಧಿಕಾರಿಗಳಿಗೆ ಹೇಳಿದರು ಅಬಕಾರಿ ಇಲಾಖೆ ಅಧಿಕಾರಿಗಳು ಸಚಿವರ ಮಾತಿಗೆ ಬೆಲೆ ಕೊಡದೆ ಅಕ್ರಮ ಸರಾಯಿ ಮಾರಾಟಕ್ಕೆ ಸಾಥ್ ನೀಡುವುದು ಕಂಡುಬರುತ್ತಿದೆ.
ಅಕ್ರಮ ಸರಾಯಿ ಮಾರಾಟಕ್ಕೆ ಅಧಿಕಾರಿಗಳ ಸಾಥ್.

ಪಟ್ಟಣದ  ಬಾರ್ ಗಳು, ವೈನ್‌ಶಾಪ್ ಮಳಿಗೆಗಳಿಂದ ಬೆಳಿಗ್ಗಿನ ಜಾವ 4/5 ಗಂಟೆಗೆ ಆಟೋಗಳ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ವ್ಯವಸ್ಥಿತ  ಸರಾಯಿ ಸಾಗಾಟ ಮಾಡುವ ಜಾಲ ಬೇರುಬಿಟ್ಟಿದೆ. ಮದ್ಯ ದಂಧೆ ಹೆಚ್ಚಳವಾಗಲು ಅಧಿಕಾರಿಗಳು ಮುಖ್ಯ ಕಾರಣ. ಅಧಿಕಾರಿಗಳ ಕಣ್ಣೆದುರಲ್ಲೇ ಈ ದಂಧೆ ನಡೆಯುತ್ತಿದ್ದರೂ, ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ಯಾವುದೇ ಕ್ರಮ ಕೈಗೊಳ್ಳದೆ ಪರೋಕ್ಷವಾಗಿ ಸಾರಾಯಿ ದಂಧೆ ಬೆಂಗಾವಲಾಗಿ ನಿಂತಿದ್ದಾರೆ. ಇನ್ನಾದರೂ ಅಧಿಕಾರಿಗಳು ಎಚ್ಚರವಹಿಸಿ ಮಾರಾಟಗಾರರ ಮೇಲೆ ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವರೇ ಎಂಬ ಪ್ರಶ್ನೆ   ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.