ಬೀದಿ ನಾಯಿಗಳ ಹಾವಳಿ

ಪಟ್ಟಣದ ಮಾರ್ಕೆಟ್ ನಲ್ಲಿ ಬೀದಿ ನಾಯಿಗಳ ಓಡಾಟ, ಜಗಳ, ಜನರಲ್ಲಿ ಭಯದ ವಾತಾವರಣ ನಿರ್ಮಾಣ.

ಚಿತ್ತಾಪುರ: ಮಾರ್ಕೆಟ್ ನಲ್ಲಿ  ಬೀದಿ ನಾಯಿಗಳದ್ದೇ ಕಾರುಬಾರು. ಪಟ್ಟಣದ ಬಹುತೇಕ ರಸ್ತೆಗಳನ್ನು ಆಕ್ರಮಿಸಿಕೊಂಡಿರುವ ಬೀದಿ ನಾಯಿಗಳಿಗೆ ರಸ್ತೆಗಳೇ ಆಶ್ರಯ ತಾಣಗಳಾಗಿವೆ. ಇದರಿಂದ ನಗರದಲ್ಲಿ ಸಂಚರಿಸುವ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ರಸ್ತೆ ಮಧ್ಯೆದಲ್ಲಿಯೇ ದಿನನಿತ್ಯ ಅಡ್ಡಾಡುವ ನಾಯಿಗಳ ಹಾವಳಿಯಿಂದ ವಾಹನ ಸವಾರರು ನೆಮ್ಮದಿಯಿಂದ ವಾಹನ ಚಾಲನೆ ಮಾಡಲು ಆಗದ ಸ್ಥಿತಿ ನಿರ್ಮಾಣವಾಗಿದೆ. ಆದರೆ, ಪುರಸಭೆ ಮಾತ್ರ ಈ ವಿಷಯದಲ್ಲಿ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ಈಗಲಾದರೂ ಪುರಸಭೆ ಎಚ್ಚೆತ್ತುಕೊಂಡು ಪಟ್ಟಣದಲ್ಲಿನ ನಾಯಿಗಳ ಹಾವಳಿ ತಡೆಗಟ್ಟುವಂತೆ ಕ್ರಮವಹಿಸುತ್ತಾರೆ ಎಂಬುದು ಕಾದು ನೋಡಬೇಕಾಗಿದೆ.

ಮಾರ್ಕೆಟ್ ರಸ್ತೆಯಲ್ಲಿ ನಾಯಿಗಳ ಹಾವಳಿ ಮಿತಿ ಮೀರಿದೆ. ಬೆಳಗಿನ ಸಮಯದಲ್ಲಿ ವಾಯುವಿಹಾರಕ್ಕಾಗಿ ಹೋಗುವರಿಗೂ ಹಾಗೂ ಮಕ್ಕಳು ಈ ರಸ್ತೆಯಲ್ಲಿ ಸಂಚರಿಸಲು ಭಯ ಪಡುವಂತಹ ವಾತಾವರಣ ನಿರ್ಮಾಣ ಆಗಿದೆ ಎನ್ನುತ್ತಾರೆ.

             -ಮಂಜುನಾಥ್ ಸ್ವಾಮಿ
ತಾಲೂಕಾಧ್ಯಕ್ಷ, ಕರವೇ ಕಾವಲು ಪಡೆ ಚಿತ್ತಾಪುರ.
==================================

ಪಟ್ಟಣದಲ್ಲಿ ಅನೇಕ ಕಡೆಗಳಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಕಚ್ಚಿಸಿಕೊಂಡು ತೊಂದರೆ ಅನುಭವಿಸಿದ್ದೇವೆ. ವಾಹನಕ್ಕೆ ಅಡ್ಡವಾದಾಗ ತಪ್ಪಿಸಲು ಹೋಗಿ ಕೈಕಾಲು ಪೆಟ್ಟು ಮಾಡಿಕೊಂಡಿದ್ದೇವೆ ಎನ್ನುತ್ತಾರೆ.

                  - ವೀರಣ್ಣ ಸುಲ್ತಾನಪುರ್
 ಮಾಜಿ ಅಧ್ಯಕ್ಷ, ನೇತಾಜಿ ಯುವಕ ಸಂಘ ಚಿತ್ತಾಪುರ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.