ಮಕ್ಕಳ ಪ್ರತಿಭೆಗೆ ಪ್ರತಿಭಾ ಕಾರಂಜಿ ಸಹಾಯಕ.

ಚಿತ್ತಾಪುರ: ಮಕ್ಕಳಲ್ಲಿರುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಸಹಾಯಕವಾಗಲಿದ್ದು ಶಿಕ್ಷಕರು ಮಕ್ಕಳಲ್ಲಿ ಅಡಗಿರುವ ವಿವಿದ ಪ್ರತಿಭೆಗಳನ್ನು ಕಾರಂಜಿಗಳನ್ನಾಗಿ ಪರಿವರ್ತಿಸುವಲ್ಲಿ ಪ್ರಯತ್ನಿಸುತ್ತಿರುವದು ಶ್ಲಾಂಘನೀಯ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಾನಂದ ನಾಲವಾರ ಹೇಳಿದರು

ಪಟ್ಟಣದ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಚಿತ್ತಾಪುರ ಇವರ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ 2024-25ನೇ ಸಾಲಿನ ಪಶ್ಚಿಮ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರತರುವ ಹಾಗೂ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ 2002ರಲ್ಲಿ ಸರಕಾರ ಪ್ರತಿಭಾ ಕಾರಂಜಿ ಕಾರ್ಯಕ್ರಮ ಜಾರಿಗೆ ತಂದಿದೆ ಆದ್ದರಿಂದ ಮಕ್ಕಳು ಸಹಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಸಮಗ್ರ ವ್ಯಕ್ತಿತ್ವ ವಿಕಸನವನ್ನು ಸಾಧಿಸುತ್ತಾರೆ ಎಂದು ಹೇಳಿದರು.
ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಕವಿತಾ ದೊಡಮನಿ ಪ್ರಾಸ್ತಾವಿಕವಾಗಿ ಮಾತನಾಡಿ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಮುಖ್ಯ ಹೀಗಾಗಿ ಮಕ್ಕಳು ಯಾವುದಕ್ಕೂ ಹೆದರಬಾರದು ತಮ್ಮಲ್ಲಿನ ಪ್ರತಿಭೆಗಳನ್ನು ಹೊರಹಾಕಬೇಕು ಎಂದು ಹೇಳಿದರು.

ಬಸವೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಸಜ್ಜನಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು,ದೈಹಿಕ ಶಿಕ್ಷಣಾಧಿಕಾರಿ ಶಿವಶರಣಪ್ಪ ಮಂಠಾಳೆ, ಕಾರ್ಯದರ್ಶಿ ಚಂದ್ರಶೇಖರ ಅವಂಟಿ, ಬಿಆರ್.ಪಿ ಜಾಫರ್, ಪತ್ರಕರ್ತ ಕಾಶಿನಾಥ ಗುತ್ತೇದಾರ ಮಾತನಾಡಿದರು.

ಮುಖ್ಯಗುರುಗಳಾದ ಶರಣಬಸಪ್ಪ ಬೊಮ್ಮನಹಳ್ಳಿ ದೇವಿಂದ್ರಪ್ಪ ಇಮಡಾಪೂರ, ದೇವಿಂದ್ರಪ್ಪ ಶಹಾಬಾದಕರ್, ಎಲ್ಎಲ್ಎಫ್ ಸಂಯೋಜಕ ಸಂತೋಷ, ಮಲ್ಲಿನಾಥ, ಶೈಲಜಾ ಹಲಸೂರು, ದೇವಿಂದ್ರಪ್ಪ, ನರಸಪ್ಪ ಚಿನ್ನಾ ಕಟ್ಟಿ, ವಿಷ್ಣುವರ್ಧನ್ ರೆಡ್ಡಿ, ನಾಗರಾಜ ಕುಲಕರ್ಣಿ, ವಿರೇಶ ಕರದಾಳ, ಜಗದೇವ ಕುಂಬಾರ, ಸೇರಿದಂತೆ ಇತರರು ಇದ್ದರು. ವೀರಸಂಗಪ್ಪ ಸುಲೇಗಾಂವ ಸ್ವಾಗತಿಸಿದರು, ಮುಖ್ಯಗುರು ಆದಪ್ಪ ಬಗಲಿ ನಿರೂಪಿಸಿ ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.