ಅಪೌಷ್ಟಿಕತೆ ನಿವಾರಣೆಗೆ ಪೋಷಣ್ ಮಾಸಾಚರಣೆ ಅಗತ್ಯ.
ಚಿತ್ತಾಪುರ: ಮಹಿಳೆ ಹಾಗೂ ಮಕ್ಕಳನ್ನು ಅಪೌಷ್ಟಿಕತೆಯಿಂದ ಮುಕ್ತಗೊಳಿಸಿ ಆರೋಗ್ಯವಂತರಾಗಿ ಮಾಡುವಲ್ಲಿ ಪೋಷಣ್ ಮಾಸಾಚರಣೆ ಅಗತ್ಯವಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಆರತಿ ತುಪ್ಪದ್ ಹೇಳಿದರು.
ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಆಡಳಿತ ಮತ್ತು ಶಿಶು ಅಭಿವೃದ್ಧಿ ಯೋಜನೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಷೋಷಣ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಕ್ಕಳಿಗೆ ಅನ್ನಪ್ರಾಸನ, ಮೊದಲ ಗರ್ಬಿಣಿಗೆ ಸಿಮ್ಮಂತ, ಹಾಗೂ ಸ್ವಚ್ಛತಾ ಕುರಿತು ಮಾತನಾಡಿದ ಅವರು ಪೋಷಣ್ ಅಭಿಯಾನ ಮಾಸಾಚರಣೆ ಮೂಲಕ ಗ್ರಾಮೀಣ ಭಾಗಗಳಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಹಿಳೆಯರು ಹಾಗೂ ಮಕ್ಕಳನ್ನು ಗುರುತಿಸಿ ಅವರಿಗೆ ಸೂಕ್ತ ಚಿಕಿತ್ಸಾ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ಆರೋಗ್ಯ ಕ್ರಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.
ಗ್ರಾಮೀಣ ಭಾಗದ ಮಹಿಳೆಯರು ಪೌಷ್ಠಿಕ ಆಹಾರ ಪದ್ಧತಿಗೆ ಹೆಚ್ಚಿನ ಒತ್ತು ನೀಡಬೇಕು, ಮಾತೃವಂದನಾ ಯೋಜನೆ ಅಡಿಯಲ್ಲಿ ಮೊದಲ ಗಂಡು ಮಗುವಿಗೆ 5 ಸಾವಿರ, ಹಾಗೂ ಎರಡನೇ ಮಗು ಹೆಣ್ಣು ಹುಟ್ಟಿದರೆ 6 ಸಾವಿರ ರೂಪಾಯಿ ನೀಡಲಾಗುತ್ತಿದೆ. ಹೀಗೆ ಅನೇಕ ಸರ್ಕಾರ ನೀಡುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಪಂ ಇಓ ಆಕ್ರಂ ಮಹ್ಮದ್ ಪಾಶಾ, ತಾಲೂಕು ಆರೋಗ್ಯಾಧಿಕಾರಿಗಳಾದ ಡಾ, ಸೈಯದ್ ಖಾದ್ರಿ, ಪುರಸಭೆ ಕಂದಾಯ ಅಧಿಕಾರಿ ಶರಣಪ್ಪ, ಕೆನರಾ ಬ್ಯಾಂಕ್ ವ್ಯವಸ್ಥಾಪಕ ಕಿರಣ್ ಜಾಧವ್, ಸೇರಿದಂತೆ ಅಂಗನವಾಡಿ ಮೇಲ್ವಿಚಾರಕರಾದ ಗೀತಾ ಯಡ್ರಾಮಿ, ಶಶಿಕಲಾ ಪಾಟೀಲ್, ಸುನೀತಾ, ಅಂಗನವಾಡಿ ಕಾರ್ಯಕರ್ತೆಯರು ಇದ್ದರು ಸ್ವಾಗತ ರಮಾಬಾಯಿ ಸ್ವಾಗತಿಸಿದರು ಕವಿತಾ ರವರು ನಿರೂಪಿಸಿ ವಂದಿಸಿದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ