ಹರಿಯಾಣ ಗೆಲುವು: ಬಿಜೆಪಿ ವಿಜಯೋತ್ಸವ.
ಚಿತ್ತಾಪೂರ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ್ದಕ್ಕೆ ಪಟ್ಟಣದ ಬಿಜೆಪಿ ಕಾರ್ಯಾಲಯದ ಮುಂದೆ ಕಾರ್ಯಕರ್ತರು ಬುಧವಾರ ಪಾಟಾಕಿ ಸಿಡಿಸಿ ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡು ಮುಖಂಡರು, ಕಾರ್ಯಕರ್ತರು, ಜಯಘೋಷ ಹಾಕುವ ಮೂಲಕ ವಿಜಯೋತ್ಸವ ಆಚರಿಸಿದರು.
ಪುರಸಭೆ ವಿರೋಧ ಪಕ್ಷದ ನಾಯಕ ನಾಗರಾಜ ಭಂಕಲಗಿ ಮಾತನಾಡಿ ಹರಿಯಾಣ ರಾಜ್ಯದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಮತ್ತೋಮ್ಮೆ ದೇಶದ ಪ್ರಧಾನಿಯ ಕೈ ಬಲಪಡಿಸಿದೆ. ಇದು ಪಕ್ಷದ ಕಾರ್ಯಕರ್ತರ ಶ್ರಮಕ್ಕೆ ಸಿಕ್ಕ ಗೆಲುವು. ಇದರಿಂದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಾಗಿದೆ’ ಎಂದರು.
ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಮಾತನಾಡಿ ರಾಜ್ಯದಲ್ಲಿ ಆಡಳಿತ ಇರುವ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಮತ್ತು ಆಮಿಷಗಳಿಗೆ ಒಳಗಾಗದೆ, ಪ್ರಧಾನಿ ಮೋದಿಯವರು ದೇಶದಲ್ಲಿ ಕಳೆದ ಹತ್ತು ವರ್ಷಗಳಿಂದ ಮಾಡುತ್ತಿರುವ ಅಭಿವೃದ್ಧಿ ಹಾಗೂ ಜನಪರ ಯೋಜನೆಗಳಿಗೆ ಹರಿಯಾಣ ಜನ ಆಶಿರ್ವಾದ ಮಾಡಿದ್ದಾರೆ ಮುಂದಿನ ದಿನಗಳಲ್ಲಿ ವಿವಿಧ ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಸಹ ಬಿಜೆಪಿ ಜಯ ಸಾಧಿಸಲಿದೆ ಎಂದ ಭವಿಷ್ಯ ನುಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರಕರ್, ಮಂಡಳ ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಾಗರಾಜ ಹೂಗಾರ, ಮಹಿಳಾ ಮೋರ್ಚಾ ಅಧ್ಯಕ್ಷ ಶ್ರೀಮತಿ ನಾಗುಬಾಯಿ ಜಿತುರೆ, ಶ್ರಿಮತಿ ಅಕ್ಕಮ್ಮ, ನಗರ ಅಧ್ಯಕ್ಷ ಆನಂದ ಪಾಟೀಲ್ ನರಬೂಳ್, ಕಾರ್ಯದರ್ಶಿ ಮೇಘರಾಜ ಗುತ್ತೇದಾರ್, ಸುರೇಶ ಬೆನಕನಳ್ಳಿ, ಕೋಟೇಶ್ವರ ರೇಶ್ಮಿ, ಮಹ್ಮದ್ ಯೂನುಸ್, ಶಾಮಮೇಧಾ, ಪ್ರಭು ಗಂಗಾಣಿ, ಪಂಕಜಾಗೌಡ ಗುತ್ತೇದಾರ್, ಸೇರಿದಂತೆ ಇತರರು ಇದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ