ಭಾಗೋಡಿ- ಮುಡಬೂಳ ರಸ್ತೆ ದುರಸ್ತಿಗೆ ಆಗ್ರಹ.

ಚಿತ್ತಾಪುರ: ಭಾಗೋಡಿ ಮತ್ತು ಮುಡಬೂಳ ರಸ್ತೆ ಯು ಸಂಪೂರ್ಣವಾಗಿ ಹದಗೆಟ್ಟಿದ್ದು, ಜನ, ವಾಹನ ಸಂಚಾರಕ್ಕೆ ತೊಂದರೆಯಾಗಿದ್ದರಿಂದ ತಕ್ಷಣ ದುರಸ್ತಿ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ. ತಾಲೂಕಿನ ಭಾಗೋಡಿ ಗ್ರಾಮದಿಂದ ಮುಡಬೂಳ ಗ್ರಾಮ 8 ಕಿಲೋ ಮೀಟರ್ ರಸ್ತೆ ಡಾಂಬರೀಕರಣ ಮಾಡಿ ಎರಡು/ಮೂರು ವರ್ಷಗಳು ಕಳೆದಿಲ್ಲ ರಸ್ತೆಯ ಸ್ಥಿತಿಗತಿ ಬದಲಾಗಿ ರಸ್ತೆಯಲ್ಲಿ ಗುಂಡಿ, ತಗ್ಗುಗಳು ಬಿದ್ದಿರುವದರಿಂದ ವಾಹನ ಸಂಚಾರ ಕಷ್ಟಕರವಾಗುತ್ತಿದೆ. ಅದಲ್ಲದೇ, ದಿನಾಲು ಒಂದಲ್ಲ ಒಂದು ಅಪಘಾತಗಳು ನಡೆಯುತ್ತಿರುವುದರಿಂದ ಜನರು ತಮ್ಮ ಪ್ರಾಣವನ್ನು ಕೈಯಲ್ಲಿ ಹಿಡಿದಿಟ್ಟುಕೊಂಡು ಸಂಚರಿಸಬೇಕಾದ ಪರಿಸ್ಥಿತಿ ಬಂದಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಪ್ರತಿನಿತ್ಯ ನೂರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಿದ್ದು ರಸ್ತೆಯ ಅವ್ಯವಸ್ಥೆಯಿಂದಾಗಿ ಸಕಾಲಕ್ಕೆ ಪ್ರಯಾಣಿಕರು, ವಿದ್ಯಾರ್ಥಿಗಳು, ಸಾರ್ವಜನಿಕರು ತಮ್ಮ ತಮ್ಮ ಕೆಲಸಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಪ್ರತಿನಿತ್ಯ ಸಾವಿರಾರು ಜನ ಈ ಮಾರ್ಗದಲ್ಲಿ ಪ್ರಯಾಣ ಮಾಡುತ್ತಿದ್ದು ರಸ್ತೆ ದುರಸ್ತಿ ಮಾಡದಿರುವ ಬಗ್ಗೆ ಸಾರ್ವಜನಿಕರು ಇಲಾಖೆ ಆಧಿಕಾರಿಗಳ ಮೇಲೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತದ್ದಾರೆ. ಕೂಡಲೇ ಈ ರಸ್ತೆ ದುರಸ್ತಿ ಕೆಲಸ ಪ್ರಾರಂಭಿಸಿ ಸಾರ್ವಜನಿಕರಿಗೆ ಆನುಕೂಲ ಮಾಡಿಕೊಡುವಂತೆ ಸುತ್ತಮುತ್ತಲಿನ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಭಾಗೋಡಿ-ಮುಡ...