ತೋಟೇಂದ್ರ ಸ್ವಾಮೀಜಿ ಅಳಿಯ ಆತ್ಮಹತ್ಯೆ.
ಚಿತ್ತಾಪುರ: ತಾಲೂಕಿನ ನಾಲವಾರದ ಶ್ರೀ ಕೋರಿಸಿದ್ದೇಶ್ವರ ಸಂಸ್ಥಾನ ಮಠದಲ್ಲಿ ಭಕ್ತನೋರ್ವ ಹಾಡಹಗಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಗುಂಡು ಹಿರೇಮಠ ಆತ್ಮಹತ್ಯೆಗೆ ಒಳಗಾದ ವ್ಯಕ್ತಿ (34) ಮಠದಲ್ಲಿನ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಮೃತ ಗುಂಡು ಮಠದ ಪೀಠಾಧಿಪತಿ ಪೂಜ್ಯ ಶ್ರೀ ತೋಟೇಂದ್ರ ಶಿವಾಚಾರ್ಯ ಅವರ ತಂಗಿಯ ಪುತ್ರ ಎನ್ನಲಾಗಿದ್ದು, ಒಂದು ವರ್ಷದ ಹಿಂದೆ ಇವರ ಮದುವೆಯಾಗಿತ್ತು. ಪೂಜ್ಯರ ಸೇವೆ ಮಾಡುತ್ತ ಮಠದಲ್ಲೇ ವಾಸವಿದ್ದರು ಎಂಬುದು ಸಾರ್ವಜನಿಕರ ಮೂಲಗಳಿಂದ ತಿಳಿದುಬಂದಿದೆ. ಇನ್ನೊಂದು ಕಡೆ ಶ್ರೀ ಕೋರಿಸಿದ್ದೇಶ್ವರರ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಮುಗಿದು ಒಂದು ವಾರ ಕಳೆದಿಲ್ಲ ಮಠದಲ್ಲಿ ಆತ್ಮಹತ್ಯೆ ಘಟನೆ ತಿಳಿದು ಭಕ್ತರಲ್ಲಿ ದು:ಖದ ವಾತಾವರಣ ನಿರ್ಮಾಣವಾಗಿದೆ ಎನ್ನಲಾಗುತ್ತಿದೆ.
ಸ್ಥಳಕ್ಕೆ ಸಿಪಿಐ ಚಂದ್ರಶೇಖರ ತಿಗಡಿ ಹಾಗೂ ವಾಡಿ ಠಾಣೆ ಪಿಎಸ್‌ಐ ತಿರುಮಲೇಶ ಕುಂಬಾರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಪೊಲೀಸರ ತನಿಖೆಯಿಂದ ಹೊರಬರಬೇಕಿದೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ