ಪೋಸ್ಟ್‌ಗಳು

ಮಾರ್ಚ್, 2025 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಅಪ್ಪು 50ನೇ ಹುಟ್ಟುಹಬ್ಬ ಆಚರಣೆ.

ಇಮೇಜ್
ಚಿತ್ತಾಪುರ: ನಟ ದಿವಂಗತ ಪುನೀತ್ ರಾಜ್ ಕುಮಾರ್ ಅವರ 50ನೇ ಹುಟ್ಟು ಹಬ್ಬವನ್ನು ಅಪ್ಪು ಅಭಿಮಾನಿಗಳು ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಲಾಡ್ಡಿಂಗ್ ಕ್ರಾಸ್ ಹತ್ತಿರ ಕರ್ನಾಟಕ ರಾಜ್ಯ ಭೋವಿ ವಡ್ಡರ ಮಹಾಸಭಾ ತಾಲೂಕ ಅಧ್ಯಕ್ಷ ವೆಂಕಟೇಶ್ ಹರವಾಳ ನೇತೃತ್ವದಲ್ಲಿ ಅಪ್ಪು ಅಭಿಮಾನಿಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರತ್ನ ಪುನೀತ್ ರಾಜಕುಮಾ‌ರ್ ಅವರ ಜನ್ಮ ದಿನದ ಸಮಾರಂಭದಲ್ಲಿ ಕಲಾವಿದ ಬಾಬು ಕಾಶಿ ಮಾತನಾಡಿ, ಚಿಕ್ಕ ವಯಸ್ಸಿನಲ್ಲೇ ಬಾಲ ನಟನಾಗಿ ಅಭಿನಯಿಸಿ ನಂತರ ನಾಯಕ ನಟನಾಗಿ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವಂತಹ ಸಿನೇಮಾ ಮಾಡಿದ ಪುನೀತ್ ರಾಜಕುಮಾ‌ರ್ ಅವರು ಚಿತ್ರರಂಗಕ್ಕೆ ಸಲ್ಲಿಸಿದ ಸೇವೆ ಅಮೋಘವಾಗಿದೆ ಹಾಗೂ ಎಲೆಮರೆ ಕಾಯಿಯಂತೆ ಸಲ್ಲಿಸಿದ ಸಮಾಜ ಸೇವೆ ಮೆಚ್ಚುವಂಥದ್ದು ಇಂತಹ ಅಪರೂಪದ ಚಿತ್ರನಟ ಪುನೀತ್ ರಾಜಕುಮಾ‌ರ್ ಅವರ ಹೆಸರನ್ನು ಪಟ್ಟಣದ ಲಾಡ್ಡಿಂಗ್ ಕ್ರಾಸ್ ಗೆ ನಾಮಕರಣ ಮಾಡಬೇಕು ಎಂದು ಒತ್ತಾಯಿಸಿದರು. ಮುಖ್ಯ ಅತಿಥಿಗಳಾಗಿ ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಕಲ್ಲಕ್ ಕೇಕ್ ಕತ್ತರಿಸಿದರು. ಮಾಜಿ ಅಧ್ಯಕ್ಷ ಚಂದ್ರಶೇಖರ ಕಾಶಿ, ಪುರಸಭೆ ಸದಸ್ಯ ವಿನೋದ ಗುತ್ತೇದಾರ, ರವಿ ವಿಟ್ಕರ್, ರಮೇಶ ಬೋಸಗಿ, ಬಾಬು ಜೆಸಿಬಿ, ತಿಮ್ಮಯ್ಯ ಪವಾರ್, ರಾಜೇಶ್ ಕಾಶಿ, ರಾಮು ಹರವಾಳ, ವಿಠಲ್ ಕಟ್ಟಿಮನಿ, ರವಿ ಇವಣಿ, ಕಾಶಿನಾಥ ಗುತ್ತೇದಾರ, ಆನಂದ್ ಗುತ್ತೇದಾರ, ನಾಗು ಕಲ್ಲಕ್, ಮಧುಸೂದನ್ ಕಾಶಿ, ಚಂದ್ರಶೇಖರ್ ಬಿಎಸ್‌ಎನ್‌ಎಲ್, ವೆಂಕಟ...

ಚಿತ್ತಾಪುರ: ಅಕ್ರಮ ಮದ್ಯ ವಶ.

ಇಮೇಜ್
ಚಿತ್ತಾಪುರ: ಪಟ್ಟಣದದಲ್ಲಿ ಅಕ್ರಮವಾಗಿ ಮದ್ಯ ಸಾಗಾಣೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ರೂ.75045 ಮೌಲ್ಯದ ಮದ್ಯ ಹಾಗೂ ಒಂದು ಆಟೋ ವಶಕ್ಕೆ ಪಡೆದ ಘಟನೆ ನಡೆದಿದೆ. ಪಿಎಸ್‌ಐ ಶ್ರೀಶೈಲ ಅಂಬಾಟಿ ಬುಧವಾರ ರಾತ್ರಿ ದಾಳಿ ಮಾಡಿ 650ಎಂಎಲ್ ಪವರ್ ಕೂಲ್ ಸ್ಟ್ರಾಂಗ್ ಬೀರ್ 6 ಬಾಕ್ಸ್ 10800 ರೂಪಾಯಿ, 650ಎಂಎಲ್ ಕಿಂಗ್ ಫಿಶರ್ ಸ್ಟ್ರಾಂಗ್ ಬೀರ್ 5 ಬಾಕ್ಸ್ 11250ರೂಪಾಯಿ, 90ಎಂಎಲ್ ಒರಿಜಿನಲ್ ಚಾಯ್ಸ್ ವಿಸ್ಕಿ 10 ಬಾಕ್ಸ್ 36480 ರೂಪಾಯಿ, 180ಎಂಎಲ್ ಬ್ಯಾಗ ಪೇಪರ್ ವಿಸ್ಕಿ 1 ಬಾಕ್ಸ್ 6912 ರೂಪಾಯಿ, 330 ಎಂಎಲ್ ಕಿಂಗ್ ಫಿಶರ್ ಸ್ಟ್ರಾಂಗ್ ಬೀರ್ 4 ಬಾಕ್ಸ್ 9600 ರೂಪಾಯಿ ಒಟ್ಟು 75045 ರೂಪಾಯಿ ಮೌಲ್ಯದ ಆಕ್ರಮ ಮದ್ಯ ವಶಕ್ಕೆ ಪಡೆಯುವುದರ ಜೊತೆಗೆ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಹಾಗೂ ಒಂದು ಆಟೋ ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಬಂಧಿಸಿದ ತನಿಖೆ ಮುಂದುವರೆದಿದೆ ಎನ್ನಲಾಗಿದೆ.

ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ.

ಇಮೇಜ್
ಚಿತ್ತಾಪುರ: ಕಾಂಗ್ರೆಸ್ ಪಕ್ಷದ ಪುರಸಭೆ ಸದಸ್ಯೆಯರಾದ ಶ್ರೀಮತಿ ಅನ್ನಪೂರ್ಣ ನಾಗಪ್ಪ ಕಲ್ಲಕ್ ನೂತನ ಅಧ್ಯಕ್ಷೆಯಾಗಿ ಮತ್ತು ಶ್ರೀಮತಿ ಆತೀಯಾ ಬೇಗಂ ನಜಮೋದ್ದಿನ್ ಉಪಾಧ್ಯಕ್ಷೆಯಾಗಿ ಆಯ್ಕೆಯಾಗುವ ಮೂಲಕ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳು ಕಾಂಗ್ರೆಸ್ ತಿಕ್ಕೆಗೆ ಹೋಗಿದೆ. ಪಟ್ಟಣದ ಪುರಸಭೆ ಕಾರ್ಯಲಯದಲ್ಲಿ ಶುಕ್ರವಾರ ನಡೆದ ಪುರಸಭೆ ಚುನಾವಣೆಗೆ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಅನ್ನಪೂರ್ಣ ಕಲ್ಲಕ್, ಬಿಜೆಪಿ ಪಕ್ಷದಿಂದ ಸುಶೀಲಾ ದೇವಸುಂಧರ ನಾಮಪತ್ರ ಸಲ್ಲಿಸಿದರು. ಒಟ್ಟು 23 ಸದಸ್ಯರ ಪೈಕಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಕಲ್ಲಕ್ ಅವರು 18 ಮತಗಳು ಪಡೆಯುವ ಮೂಲಕ ಗೆಲವು ಸಾಧಿಸಿದ್ದಾರೆ. ಬಿಜೆಪಿಯ ಸುಶೀಲಾ ದೇವಸುಂಧರ ಅವರು 5 ಮತಗಳು ಪಡೆದು ಸೋಲು ಅನುಭವಿಸಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಆತೀಯಾ ಬೇಗಂ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನಾಗಯ್ಯ ಹಿರೇಮಠ ಅವರು ಘೋಷಣೆ ಮಾಡಿದರು. ಇದೇ ವೇಳೆ ತಹಶೀಲ್ದಾರ್ ನಾಗಯ್ಯ ಹಿರೇಮಠ, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾ‌ರ್ ಅವರು ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸನ್ಮಾನಿಸಿ ಗೌರವಿಸಿದರು. ಪುರಸಭೆ ಸದಸ್ಯರಾದ ಚಂದ್ರಶೇಖರ ಕಾಶಿ, ಶೀಲಾ ಕಾಶಿ, ಮಲ್ಲಿಕಾರ್ಜುನ ಕಾಳಗಿ, ಪಾಶಾ ಖುರೇಶಿ, ಸುಮಂಗಲಾ ಸಣ್ಣೂರಕರ್, ಬೇಬಿಬಾಯಿ ಜಾಧವ, ವಿನೋದ ಗುತ್ತೇದಾರ, ಕಾಶಿಬಾಯಿ ಬ...

ಅಭಿವೃದ್ಧಿಗೆ ಶ್ರಮಿಸಿ, ಸಚಿವರ ಹೆಸರು ತನ್ನಿ: ನಾಗರೆಡ್ಡಿ ಪಾಟೀಲ.

ಇಮೇಜ್
ಚಿತ್ತಾಪುರ: ನೂತನವಾಗಿ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಸದಸ್ಯರು ಪಟ್ಟಣದ ಅಭಿವೃದ್ಧಿಗೆ ಶ್ರಮಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರು ತರಬೇಕು ಎಂದು ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಕಿವಿಮಾತು ಹೇಳಿದರು. ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು ಒಂದೇ ಸ್ಥಾನಕ್ಕೆ ಹಲವರು ಆಕಾಂಕ್ಷಿಗಳು ಇದ್ದಾಗ ಸ್ವಲ್ಪ ಅಸಮಾಧಾನ ಇದ್ದೆ ಇರುತ್ತದೆ ಹೀಗಾಗಿ ಸ್ವಲ್ಪ ತಾಳ್ಮೆಯಿಂದ ಇರಬೇಕು ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ಸಿಗಲಿದೆ, ಹೀಗಾಗಿ ಅಸಮಾಧಾನ ಬದಿಗಿಟ್ಟು ಎಲ್ಲರೂ ಒಗ್ಗೂಡಿ ಸರ್ವ ಸದಸ್ಯರ ಅಭಿಪ್ರಾಯ ಪಡೆದು ಅಭಿವೃದ್ಧಿಗೆ ಶ್ರಮವಹಿಸಬೇಕು ಎಂದು ಹೇಳಿದರು. ನನ್ನ ಮೇಲೆ ವಿಶ್ವಾಸವಿಟ್ಟು ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರಿಗೂ ಮತ್ತು ಪುರಸಭೆ ಸದಸ್ಯರಿಗೂ ಯಾವುದೇ ದಕ್ಕೆ ಯಾಗದಂತೆ ಎಲ್ಲರ ನಂಬಿಕೆ ಉಳಿಸಿಕೊಳ್ಳುತ್ತೇನೆ ಎಂದರು. - ಶ್ರೀಮತಿ ಅನ್ನಪೂರ್ಣ ಕಲ್ಲಕ್ ನೂತನ ಅಧ್ಯಕ್ಷೆ ಪುರಸಭೆ ಚಿತ್ತಾಪೂರ. ವೀಕ್ಷಕರಾಗಿ ಕಲಬುರಗಿ ಜಿಡಿಎ ಅಧ್ಯಕ್ಷ ಮಜ‌ರ್ ಅಲ್ಲಾಂಖಾನ್, ಜಿಪಂ ಮಾಜಿ ಸದಸ್ಯ ಶರಣಗೌಡ ಪಾಟೀಲ ಚಿಂಚನಸೂರ, ಈರಣ್ಣ ಝಳಕಿ, ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ, ಕೆಪಿಸಿಸಿ ಕಾರ್ಯದರ್ಶಿ ರಮೇಶ್ ಮರಗೋಳ...