ಮನೆಗಳ ಹಂಚಿಕೆ ಪ್ರಕ್ರಿಯೆ ಮುಂದೂಡಲಾಗಿದೆ
ಚಿತ್ತಾಪುರ: ಪಟ್ಟಣದ ನಾಗಾವಿ ಎಜುಕೇಷನ್ ಹಬ್ ಪ್ರದೇಶದಲ್ಲಿ ನಿರ್ಮಿಸಲಾದ 1000 ಜಿ+1 ಮನೆಗಳ ಹಂಚಿಕೆಯು ಮಂಗಳವಾರ ನಡೆಯಬೇಕಿದ್ದ ಪ್ರಕ್ರಿಯೆ ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಕೊಳಚೆ ನಿರ್ಮೂಲನೆ ಮಂಡಳಿಯ ಎಇಇ ಶ್ರೀಧರ್ ಸಾರವಾಡ ತಿಳಿಸಿದ್ದಾರೆ.
ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ದಿನಾಂಕ 9 ಸೆಪ್ಟೆಂಬರ್ ಮಂಗಳವಾರ ಮಧ್ಯಾಹ್ನ 1ಕ್ಕೆ ನಡೆಯಲಿರುವ ಸಮಾರಂಭ ರದ್ದಾಗಿದ್ದು ಜಿಲ್ಲಾ ಅಧಿಕಾರಿಗಳ ಅನುಮತಿ ಮೆರೆಗೆ ಮುಂದೂಡಲಾಗಿದೆ ದಿನಾಂಕ 12 ಸೆಪ್ಟೆಂಬರ್ ರಂದು ಫಲಾನುಭವಿಗಳಿಗೆ ಮನೆಗಳ ಅಂಕಿ ಸಂಖ್ಯೆಗಳನ್ನು ನೀಡುವ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಕೊಳಗೇರಿ ಅಭಿವೃದ್ಧಿ ಮಂಡಳಿ ಇಲಾಖೆ ಅಧಿಕಾರಿಗಳು, ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರು, ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಕಲ್ಲಕ್, ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್ ಚವ್ಹಾಣ, ಉಪಾಧ್ಯಕ್ಷರು, ಸರ್ವ ಸದಸ್ಯರು ರಾಜಕೀಯ ಧುರೀಣರು ಸಹಭಾಗಿತ್ವದಲ್ಲಿ ಈ ಸಮಾರಂಭನಡೆಯಲಿದೆ. ವಸತಿ ಪಡೆದುಕೊಳ್ಳುವ ಪಟ್ಟಣದ ಫಲಾನುಭವಿಗಳು ಸಮಾರಂಭದಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದ್ದಾರೆ.