ಚಿತ್ತಾಪುರ: ವಿಶ್ವದ ಅತ್ಯಂತ ದೊಡ್ಡ, ಲಿಖಿತ ರೂಪದಲ್ಲಿದ್ದ ಭಾರತದ ಸಂವಿಧಾನ ಪ್ರಜಾಪ್ರಭುತ್ವ ರಾಷ್ಟ್ರವಾಗಿ ರೂಪಿಸಿದ ಗಣರಾಜ್ಯೋತ್ಸವ ಭಾರತೀಯರ ಪಾಲಿನ ಹಬ್ಬವಾಗಿದೆ ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು.
ಪಟ್ಟಣದ ಪ್ರಜಾ ಸೌಧದ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 1950 ಜನವರಿ 26 ರಂದು ಭಾರತೀಯರೆಲ್ಲರೂ ಹೆಮ್ಮೆಯಿಂದ ಆಚರಿಸುವ ದಿನ. ರಾಜಪ್ರಭುತ್ವವನ್ನ ತ್ಯಜಿಸಿ ಪ್ರಜಾಪ್ರಭುತ್ವಕ್ಕೆ ಬದಲಾದ ದಿನ. ಹೀಗಾಗಿ ಪ್ರತಿಯೊಬ್ಬ ಭಾರತೀಯನಿಗೂ ಈ ದಿನ ಅತ್ಯಂತ ಮಹತ್ವದ ದಿನವಾಗಿದೆ ಎಂದು ಹೇಳಿದರು
ಗಣರಾಜ್ಯೋತ್ಸವ ದಿನದಂದೇ ಸಂವಿಧಾನ ಜಾರಿಗೆ ಬಂದ ದಿನವನ್ನು ಗೌರವಿಸುವ ಅಭೂತಪೂರ್ವ ದಿನವಾಗಿದೆ ಎಂದರು. ಬೇರೆ ದೇಶಗಳಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಆದರೆ ಸಂಸದೀಯ ಪ್ರಜಾಪ್ರಭುತ್ವ ಹೊಂದಿದ ಭಾರತ ಸದೃಢವಾಗಿದೆ. ದೇಶದ ಆಡಳಿತ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಪತ್ರಿಕಾ ರಂಗ ನಾಲ್ಕು ಅಂಗಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
ಉಪನ್ಯಾಸಕರಾಗಿ ಸರ್ಕಾರಿ ಡಿಗ್ರಿ ಕಾಲೇಜಿನ ಪ್ರಾಧ್ಯಾಪಕ ಡಾ.ಸಂಗಪ್ಪ ಮಾಮನ ಶೆಟ್ಟಿ ಮಾತನಾಡಿ, ಭಾರತವು ವಿಶ್ವದಲ್ಲೇ ಅತಿ ದೊಡ್ಡ ಲಿಖಿತ ಸಂವಿಧಾನವನ್ನು ಹೊಂದಿದ್ದು, 1947 ರಲ್ಲಿ ಸ್ವಾತಂತ್ರ್ಯ ಸಿಕ್ಕಿದರೂ ಕೂಡ ನಮ್ಮ ದೇಶವು ಸಂವಿಧಾನವನ್ನು ಹೊಂದಿರಲಿಲ್ಲ. 26 ಜನವರಿ 1950 ರಂದು ಸಂವಿಧಾನವನ್ನು ಸ್ಥಾಪನೆ ಮಾಡಿದ ದಿನವಾಗಿದ್ದು, ಇದರ ಗೌರವಾರ್ಥವಾಗಿ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.
ಪಿಎಲ್'ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಶರಣಪ್ಪ ಮಂಠಾಳೆ ಅವರು ಮಾತನಾಡಿದರು. ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರು ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ, ಕ್ರೀಡೆಗಳಲ್ಲಿ ಸಾಧನೆಗೈದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಕೃಷಿಕ ಸಮಾಜದ ಅಧ್ಯಕ್ಷ ನಾಗರೆಡ್ಡಿ ಗೋಪಸೇನ್, ಗ್ರೇಡ್ 2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಅಕ್ರಂ ಪಾಷಾ, ಪಿಎಸ್‌ಐ ಮಂಜುನಾಥ ರೆಡ್ಡಿ, ಅರಣ್ಯಾಧಿಕಾರಿ ವಿಜಯಕುಮಾರ್ ಬಡಿಗೇರ್, ಎಇಇ ಮಹ್ಮದ್ ಇಸ್ಮಾಯಿಲ್, ಕೃಷಿ ಅಧಿಕಾರಿ ಸಂಜೀವಕುಮಾರ ಮಾನಕರೆ, ಅಬಕಾರಿ ಅಧಿಕಾರಿ ವನೀತಾ ಸೀತಾಳೆ, ಕವಿತಾ, ತಮ್ಮನ್ನಾ ಕೌಸರ್, ಅಶ್ವತ್ಥನಾರಾಯಣ, ದೇವಿಂದ್ರರೆಡ್ಡಿ ದುಗನೂರ, ಬಾಬು ಕಾಶಿ, ರಾಜಣ್ಣ ಕರದಾಳ, ಸಾಬಣ್ಣ ದೊಡ್ಡಮನಿ, ನಾಗಯ್ಯ ಗುತ್ತೇದಾರ ಕರದಾಳ, ರಾಮಲಿಂಗ ಬಾನರ್, ಪ್ರಹ್ಲಾದ ವಿಶ್ವಕರ್ಮ, ರಮೇಶ್ ಬೆಟಗೇರಿ ಸೇರಿದಂತೆ ಇತರರು ಇದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು, ಡಾ.ಶಂಕರ ಕಣ್ಣಿ ನಿರೂಪಿಸಿದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ