ಚಿತ್ತಾಪುರ: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ಅವರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವು ಸತ್ಯಕ್ಕೆ ದೂರವಾಗಿದ್ದು, ಇದು ಕೇವಲ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪಿತೂರಿಯಾಗಿದೆ ಎಂದು ಮುತ್ಯಾ ರವರ ಭಕ್ತರು ಹಾಗೂ ಕೋಲಿ ಸಮಾಜದ ಯುವ ಮುಖಂಡರಾದ ಆಕಾಶ ಬೆನಕನಳ್ಳಿ ಹೇಳಿಕೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರುಸಂಬಂಧಿಕರ ವಿಡಿಯೋ ದುರುಪಯೋಗ
ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾದ ವಿಡಿಯೋವು ಮಲ್ಲಿಕಾರ್ಜುನ ಮುತ್ಯಾ ಅವರ ಹತ್ತಿರದ ಸಂಬಂಧಿ ಬಾಲಕಿಯದ್ದಾಗಿದ್ದು, ಅದು ಬಹಳ ಹಳೆಯದಾಗಿದೆ. ಕುಟುಂಬದೊಳಗಿನ ಭಿನ್ನಾಭಿಪ್ರಾಯಗಳನ್ನು ಬೀದಿಗೆ ತಂದು, ವಿಡಿಯೋವನ್ನು ತಪ್ಪಾಗಿ ಬಿಂಬಿಸಿ ವೈರಲ್ ಮಾಡುವ ಮೂಲಕ ಸಮಾಜದಲ್ಲಿ ಅಶಾಂತಿ ಮೂಡಿಸಲು ಕೆಲವರು ಯತ್ನಿಸುತ್ತಿದ್ದಾರೆ. ಮುತ್ಯಾ ಅವರು ಯಾವುದೇ ಅಶಿಸ್ತಿನ ಅಥವಾ ಕಾನೂನು ಬಾಹಿರ ಕೃತ್ಯ ಎಸಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
"ಮಲ್ಲಿಕಾರ್ಜುನ ಮುತ್ಯಾ ಅವರ ಮೇಲೆ ನಮಗೆ ಅಪಾರ ಗೌರವವಿದೆ. ಅವರ ಭಕ್ತ ಸಮೂಹ ದೊಡ್ಡದಿದೆ. ಇಂತಹ ಸುಳ್ಳು ಸುದ್ದಿಗಳನ್ನು ಹರಡಿ ಭಕ್ತರ ಭಾವನೆಗಳಿಗೆ ಧಕ್ಕೆ ತರುತ್ತಿರುವುದು ಖಂಡನೀಯ. ಈ ಪಿತೂರಿಯ ಹಿಂದೆ ಯಾರಿದ್ದಾರೆ ಎಂಬುದು ತನಿಖೆಯಿಂದ ಹೊರಬರಬೇಕಿದೆ," ಎಂದು ಆಗ್ರಹಿಸಿದರು.
"ಭಕ್ತಾದಿಗಳು ಯಾವುದೇ ಕಾರಣಕ್ಕೂ ಧೃತಿಗೆಡಬಾರದು ಅಥವಾ ಆತಂಕಕ್ಕೆ ಒಳಗಾಗಬಾರದು. ಸಮಾಜದಲ್ಲಿ ಶಾಂತಿ ಕಾಪಾಡುವುದು ನಮ್ಮ ಆದ್ಯತೆ. ಸತ್ಯಕ್ಕೆ ಜಯ ಸಿಗಲಿದೆ ಎಂಬ ನಂಬಿಕೆ ನಮಗಿದೆ. ಭಕ್ತರಲ್ಲಿ ಒಳ್ಳೆಯ ಸಂದೇಶವಿರಲಿ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ," ಎಂದು ಆಕಾಶ ಬೆನಕನಳ್ಳಿ ಮನವಿ ಮಾಡಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ