ಶನಿವಾರ, ಮಾರ್ಚ್ 7, 2026

ಚಿತ್ತಾಪುರ: ₹1069 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ; ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ.

ಚಿತ್ತಾಪುರ: ಪಟ್ಟಣದ ಮಳಖೇಡ ರಸ್ತೆಯ ಸೇಂದಿ ಡಿಪೋ ಮೈದಾನದಲ್ಲಿ ಭಾನುವಾರ ಆಯೋಜಿಸಲಾಗಿರುವ ಬೃಹತ್ ಅಡಿಗಲ್ಲು ಹಾಗೂ ಉದ್ಘಾಟನಾ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ವೀಕ್ಷಿಸಿದರು.

​ಕ್ಷೇತ್ರದ ಇತಿಹಾಸದಲ್ಲೇ ಅತೀ ದೊಡ್ಡ ಮೊತ್ತದ ಎನ್ನಲಾದ ಅಂದಾಜು ₹1069 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಈ ಸಂದರ್ಭದಲ್ಲಿ ಚಾಲನೆ ದೊರೆಯಲಿದೆ.
​ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಮುಖ್ಯಮಂತ್ರಿಗಳು.ಡಿ.ಕೆ. ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವರು​ ಡಾ. ಶರಣಪ್ರಕಾಶ ಪಾಟೀಲ್, ಸೇರಿದಂತೆ ಹಲವು ಶಾಸಕರು, ಎಂಎಲ್‌ಸಿಗಳು ಹಾಗೂ ಮಾಜಿ ಸಚಿವರು ಭಾಗವಹಿಸಲಿದ್ದಾರೆ.

​ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸುವ ನಿರೀಕ್ಷೆಯಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರು ವೇದಿಕೆ ನಿರ್ಮಾಣ, ಸಾರ್ವಜನಿಕರ ಆಸನ ವ್ಯವಸ್ಥೆ ಹಾಗೂ ಊಟದ ಸ್ಥಳಗಳನ್ನು ಖುದ್ದಾಗಿ ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

​ಉಪಸ್ಥಿತರಿದ್ದ ಅಧಿಕಾರಿಗಳು ಮತ್ತು ಮುಖಂಡರು:
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜಿಪಂ ಸಿಇಒ ಭಂವರಸಿಂಗ್ ಮೀನಾ, ಎಸ್ ಪಿ ಅಡ್ಡರು ಶ್ರೀನಿವಾಸಲು, ಡಿವೈಎಸ್ಪಿ ಶಂಕರಗೌಡ ಪಾಟೀಲ ಹಾಜರಿದ್ದರು.ಕಾಂಗ್ರೆಸ್ ಮುಖಂಡರಾದ ಭೀಮಣ್ಣ ಸಾಲಿ, ಶಿವಾನಂದ ಪಾಟೀಲ, ರಮೇಶ್‌ ಮರಗೋಳ, ನಾಗರೆಡ್ಡಿ ಪಾಟೀಲ ಕರದಾಳ, ಸುನೀಲ್ ದೊಡ್ಡಮನಿ, ಚಂದ್ರಶೇಖರ ಕಾಶಿ, ಮುಕ್ತಾರ್ ಪಟೇಲ್, ನಾಗಯ್ಯ ಗುತ್ತೇದಾರ, ಮನ್ಸೂರ್ ಪಟೇಲ್, ಎಂ.ಎ.ರಷೀದ್, ಜಯಪ್ರಕಾಶ್ ಕಮಕನೂರ, ಶಿವರಾಜ್ ಕಲಗುರ್ತಿ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಚಿತ್ತಾಪುರ: ₹1069 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ; ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ.

ಚಿತ್ತಾಪುರ: ಪಟ್ಟಣದ ಮಳಖೇಡ ರಸ್ತೆಯ ಸೇಂದಿ ಡಿಪೋ ಮೈದಾನದಲ್ಲಿ ಭಾನುವಾರ ಆಯೋಜಿಸಲಾಗಿರುವ ಬೃಹತ್ ಅಡಿಗಲ್ಲು ಹಾಗೂ ಉದ್ಘಾಟನಾ ಕಾರ್ಯಕ್ರಮದ ಪೂರ್ವ ಸಿದ್ಧತೆ...