ಶುಕ್ರವಾರ, ಮಾರ್ಚ್ 6, 2026

ಚಿತ್ತಾಪುರ ನಕ್ಷೆ ಬದಲಿಸಲು ಪ್ರಿಯಾಂಕ್ ಖರ್ಗೆ ಪಣ: ₹1,085 ಕೋಟಿ ಅನುದಾನದ ಐತಿಹಾಸಿಕ ಸಮಾವೇಶ.

ಚಿತ್ತಾಪುರ: ಕ್ಷೇತ್ರದ ಇತಿಹಾಸದಲ್ಲೇ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಸುಮಾರು ರೂ. 1,085 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಹಾಗೂ ಲೋಕಾರ್ಪಣೆ ಸಮಾರಂಭವು ಮಾರ್ಚ್ 8ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಮಳಖೇಡ ರಸ್ತೆಯ ಸೇಂದಿ ಡಿಪೋ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಹಾಗೂ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ ತಿಳಿಸಿದರು.

​ಶುಕ್ರವಾರ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಐತಿಹಾಸಿಕ ಕಾರ್ಯಕ್ರಮವು ​ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮಾರಂಭಕ್ಕೆ ರಾಜ್ಯಸಭಾ ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷರು ​ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿಗಳಾದ ​ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ​ಡಿ.ಕೆ. ಶಿವಕುಮಾರ್, ಆಗಮಿಸಲಿದ್ದಾರೆ. ಜಿಲ್ಲೆಯ ಶಾಸಕರು ಹಾಗೂ ನಿಗಮ ಮಂಡಳಿ ಅಧ್ಯಕ್ಷರು ಉಪಸ್ಥಿತರಿರಲಿದ್ದು, ಸುಮಾರು 15 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ್ ಮರಗೋಳ ಮಾತನಾಡಿ, "ಸಚಿವ ಪ್ರಿಯಾಂಕ್ ಖರ್ಗೆ ಅವರು ಕ್ಷೇತ್ರದ ಅಭಿವೃದ್ಧಿಗೆ ಒಟ್ಟು 1,085 ಕೋಟಿ ಅನುದಾನ ತಂದಿದ್ದಾರೆ. ಇದರಲ್ಲಿ 1,000 ಕೋಟಿ ರೂ. ವೆಚ್ಚದ ಹೊಸ ಕಾಮಗಾರಿಗಳಿಗೆ ಅಡಿಗಲ್ಲು ಹಾಕಲಾಗುವುದು ಮತ್ತು 85 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗುವುದು," ಎಂದರು.

​ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಅವರು ಮಾತನಾಡಿ ​ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ 500 ಕೋಟಿ ರೂ. ಮೀಸಲು.​ದಂಡೋತಿ ಕಾಗಿಣಾ ನದಿ ಬ್ರಿಜ್ ಹಾಗೂ ಹೊನಗುಂಟಿ ಬ್ರಿಜ್ ಅಡಿಗಲ್ಲು.​ಸರ್ಕಾರಿ ಕನ್ಯಾ ಮಾದರಿ ಪ್ರಾಥಮಿಕ/ಪ್ರೌಢಶಾಲೆ ಹಾಗೂ ವಿಜ್ಞಾನ ಕೇಂದ್ರದ ಸ್ಥಾಪನೆ.
​ಪ್ರತಿಯೊಂದು ಗ್ರಾಮಕ್ಕೆ 1 ರಿಂದ 4 ಕೋಟಿ ರೂ.ವರೆಗಿನ ಅಭಿವೃದ್ಧಿ ಅನುದಾನ.​ಸಚಿವರು ಕ್ಷೇತ್ರದ ನಕ್ಷೆಯನ್ನೇ ಬದಲಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದು, ಹಳ್ಳಿ ಹಳ್ಳಿಗಳಿಂದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮುಖಂಡರು ಮನವಿ ಮಾಡಿದ್ದಾರೆ.

​ಸುದ್ದಿಗೋಷ್ಠಿಯಲ್ಲಿ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಸುನೀಲ್ ದೊಡ್ಡಮನಿ, ಜಿಪಂ ಮಾಜಿ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ, ಪ್ರಮುಖರಾದ ಶಿವರುದ್ರಪ್ಪ ಭೀಣ್ಣಿ, ಜಗಣ್ಣಗೌಡ ರಾಮತೀರ್ಥ, ನಾಗರೆಡ್ಡಿ ಗೋಪಸೇನ್, ವೀರುಪಾಕ್ಷಪ್ಪ ಗಡ್ಡದ್, ಚಂದ್ರಶೇಖರ ಕಾಶಿ, ಶಾಂತಣ್ಣ ಚಾಳೀಕಾರ, ನಾಗಯ್ಯ ಗುತ್ತೇದಾರ, ಮಲ್ಲಪ್ಪ ಹೊಸಮನಿ, ಶಿವರಾಜ್ ಕಲಗುರ್ತಿ, ಜಯಪ್ರಕಾಶ್ ಕಮಕನೂರ, ಕುಂದನ್ ಸಿಂಗ್, ದೇವು ಯಾಬಾಳ, ಸಂಜಯ ಬುಳಕರ್, ಶರಣು ಡೋಣಗಾಂವ, ರವಿಸಾಗರ ಹೊಸಮನಿ, ರಾಜಣ್ಣ ಕರದಾಳ, ವಿನ್ನುಕುಮಾರ ಜಡಿ, ಬಾಗು ದೊರೆ, ಸೂರಜ್ ಕಲ್ಲಕ್ ಸೇರಿದಂತೆ ಇತರರು ಇದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಬಂಜಾರ ಸಮಾಜದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ.

ಚಿತ್ತಾಪುರ: ಪಟ್ಟಣದ ಸೇಂದಿ ಡಿಪೋ ಮೈದಾನದಲ್ಲಿ ಮಾರ್ಚ್ 8ರಂದು ಬೆಳಿಗ್ಗೆ 11 ಗಂಟೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಸಮಾರಂಭ ಹಾಗೂ ಮನೆಗಳ ಹಕ...