ಚಿತ್ತಾಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2026-27ನೇ ಸಾಲಿನ ಸದಸ್ಯತ್ವ ನವೀಕರಣ ಹಾಗೂ ಹೊಸದಾಗಿ ಸದಸ್ಯತ್ವ ಪಡೆಯಲು ರಾಜ್ಯ ಸಮಿತಿಯ ನಿರ್ದೇಶನದ ಮೇರೆಗೆ ಕಲಬುರಗಿ ಜಿಲ್ಲಾ ಸಮಿತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ, ಪ್ರಧಾನ ಕಾರ್ಯದರ್ಶಿ ಭೀಮಾಶಂಕರ ಫಿರೋಜಾಬಾದ್ ಹಾಗೂ ರಾಜ್ಯ ಸಮಿತಿ ಸದಸ್ಯ ರಾಜಕುಮಾರ ಉದನೂರ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿತ್ತಾಪುರ ಸೇರಿ ಜಿಲ್ಲಾದ್ಯಾಂತ ಇರುವ ಪತ್ರಕರ್ತರು ಮಾರ್ಚ್ 10ರಿಂದ ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಅರ್ಜಿಗಳನ್ನು ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 20ರ ಸಂಜೆ 5:00 ಗಂಟೆ ಕಡೆಯ ದಿನವಾಗಿರುತ್ತದೆ.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ಅಗತ್ಯ ದಾಖಲೆಗಳಾದ ಹಿಂದಿನ ವರ್ಷದ ಸಂಘದ ಗುರುತಿನ ಚೀಟಿ (ನವೀಕರಣ ಮಾಡುವವರಿಗೆ).ಸಂಪಾದಕರು ಅಥವಾ ಸಂಬಂಧಪಟ್ಟ ಮಾಧ್ಯಮ ಸಂಸ್ಥೆಗಳು ನೀಡಿದ ಆದೇಶ/ನೇಮಕಾತಿ ಪ್ರತಿ.ಆಧಾರ್ ಕಾರ್ಡ್ ಪ್ರತಿ.ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು.ರೂ. 510/- ನಿಗದಿತ ಶುಲ್ಕ.
ಹೊಸದಾಗಿ ಸಂಘದ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಎಸ್‌ಎಸ್‌ಎಲ್‌ಸಿ (SSLC) ತೇರ್ಗಡೆಯಾದ ಪ್ರಮಾಣ ಪತ್ರವನ್ನು ಲಗತ್ತಿಸಬೇಕು. ಇದರ ಜತೆಗೆ, ಮಾಧ್ಯಮ ಕ್ಷೇತ್ರದಲ್ಲಿ ಕನಿಷ್ಠ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ ಅನುಭವ ಹೊಂದಿರುವ ಕುರಿತು ಸಂಬಂಧಪಟ್ಟ ಸಂಸ್ಥೆಗಳಿಂದ ದೃಢೀಕರಣ ಪತ್ರವನ್ನು ಒದಗಿಸುವುದು ಕಡ್ಡಾಯವಾಗಿದೆ ಎಂದು ರಾಜ್ಯ ಸಮಿತಿ ಸದಸ್ಯರಾದ ರಾಜಕುಮಾರ ಉದನೂರ ಸ್ಪಷ್ಟಪಡಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ