ಭಾನುವಾರ, ಮಾರ್ಚ್ 8, 2026

ಹಕ್ಕುಪತ್ರದ ಕನಸು ನನಸು: ಶ್ರಮಕ್ಕೆ ಸಂದ ಜಯ.

ಚಿತ್ತಾಪುರ: ಕ್ಷೇತ್ರದ ಸ್ಟೇಷನ್ ತಾಂಡಾದ ನಿವಾಸಿಗಳ ದಶಕಗಳ ಕಾಲದ ಬೇಡಿಕೆಯಾಗಿದ್ದ ಮನೆಗಳ ಹಕ್ಕುಪತ್ರ ವಿತರಣೆಯ ಕಾರ್ಯವು ಕೊನೆಗೂ ಯಶಸ್ವಿಯಾಗಿ ನೆರವೇರಿದೆ. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ಸುಮಾರು ಸಾವಿರಕ್ಕೂ ಹೆಚ್ಚು ಮನೆಗಳಿಗೆ ಹಕ್ಕುಪತ್ರಗಳನ್ನು ವಿತರಿಸುವ ಮೂಲಕ ನಿವಾಸಿಗಳ ಬದುಕಿನಲ್ಲಿ ಹೊಸ ಭರವಸೆ ಮೂಡಿಸಲಾಗಿದೆ.

ಪುರಸಭೆ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷರಾದ ಜಗದೀಶ್ ಡಿ. ಚವ್ಹಾಣ್ ಅವರ ನಿರಂತರ ಪರಿಶ್ರಮ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರ ಮಾರ್ಗದರ್ಶನದಿಂದ ಈ ಕಾರ್ಯ ಸಾಧ್ಯವಾಗಿದೆ.

ಎಐಸಿಸಿ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿಶೇಷ ಕಾಳಜಿಯಿಂದ ಈ ಯೋಜನೆ ಜಾರಿಗೆ ಬಂದಿದೆ.ಹಲವು ವರ್ಷಗಳಿಂದ ಸರ್ಕಾರಿ ಜಾಗದಲ್ಲಿ ವಾಸವಿದ್ದರೂ ಹಕ್ಕುಪತ್ರವಿಲ್ಲದೆ ನಿವಾಸಿಗಳು ಬ್ಯಾಂಕ್ ಸಾಲ, ಸರ್ಕಾರಿ ಸೌಲಭ್ಯ ಹಾಗೂ ಖಾತೆ ಬದಲಾವಣೆಯಂತಹ ಸೌಲಭ್ಯಗಳಿಂದ ವಂಚಿತರಾಗಿದ್ದರು. ಈಗ ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕಿದೆ. ಸಾವಿರಾರು ಕುಟುಂಬಗಳ ಪರವಾಗಿ ಜಗದೀಶ್ ಡಿ. ಚವ್ಹಾಣ್ ಅವರು ರಾಜ್ಯ ಸರ್ಕಾರಕ್ಕೆ ಹಾಗೂ ನಾಯಕರಿಗೆ ಧನ್ಯವಾದ ಅರ್ಪಿಸಿದ್ದಾರೆ.


"ನಾನು ಪಟ್ಟ ಪರಿಶ್ರಮಕ್ಕೆ ಇಂದು ಪ್ರತಿಫಲ ಸಿಕ್ಕಿದೆ. ತಾಂಡಾದ ಬಡ ಜನರ ಮುಖದಲ್ಲಿ ನಗು ನೋಡುತ್ತಿರುವುದು ಸಂತಸ ತಂದಿದೆ. ಇದು ನಮ್ಮ ನೆಚ್ಚಿನ ನಾಯಕರಾದ ಪ್ರಿಯಾಂಕ್ ಖರ್ಗೆ ಅವರ ಆಶೀರ್ವಾದದ ಬಲದಿಂದ ಮಾತ್ರ ಸಾಧ್ಯವಾಗಿದೆ."

— ಜಗದೀಶ್ ಡಿ. ಚವ್ಹಾಣ್, ಮಾಜಿ ಅಧ್ಯಕ್ಷರು, ಪುರಸಭೆ ಸ್ಥಾಯಿ ಸಮಿತಿ ಚಿತ್ತಾಪುರ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಭ್ರಮದಿಂದ ಜರುಗಿದ ಶ್ರೀ ಆಶಾಪುರ ಆಂಜನೇಯ ಸ್ವಾಮಿ ರಥೋತ್ಸವ ಹಾಗೂ ದೀಪೋತ್ಸವ

ಗುರುಮಿಟ್ಕಲ್: ಸುತ್ತಲಿನ ನಾಲ್ಕು ಗ್ರಾಮಗಳ ಮಧ್ಯದಲ್ಲಿರುವ ಕಾರಣಿಕ ಕ್ಷೇತ್ರ ಹಾಗೂ ಭಕ್ತರ ಆರಾಧ್ಯ ದೈವ ಶ್ರೀ ಆಶಾಪುರ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರ...