ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಸದೃಢತೆ ಸಾಧ್ಯ: ಬುಳಕರ್.

ಚಿತ್ತಾಪುರ: "ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢತೆ ಹೊಂದಲು ಸಾಧ್ಯವಾಗುತ್ತದೆ," ಎಂದು ಯುವ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಸಂಜಯ್ ಬುಳಕರ್ ಅಭಿಪ್ರಾಯಪಟ್ಟರು.

​ಪಟ್ಟಣದ ನಾಗಾವಿ ಕ್ಯಾಂಪಸ್‌ನ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಎಲ್.ಎಲ್.ಎಫ್ (ಲರ್ನಿಂಗ್ ಲಿಂಕ್ ಫೌಂಡೇಶನ್) ವತಿಯಿಂದ ಆಯೋಜಿಸಲಾಗಿದ್ದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು 
ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಅವರು 371 ಜೆ ಕಲಂ ಜಾರಿ ಮಾಡುವ ಮೂಲಕ ಭದ್ರ ಅಡಿಪಾಯ ಹಾಕಿದ್ದಾರೆ ಎಂದು ಸ್ಮರಿಸಿದರು. ಸಚಿವ ಪ್ರಿಯಾಂಕ್ ಖರ್ಗೆ ಅವರು ತಾಲೂಕಿನ ಗ್ರಾಮೀಣ ಯುವ ಪ್ರತಿಭೆಗಳಿಗಾಗಿ ಆಧುನಿಕ ಕ್ರೀಡಾಂಗಣಗಳನ್ನು ನಿರ್ಮಿಸಿದ್ದಾರೆ. ನಾಗಾವಿ ಹಾಗೂ ವಾಡಿ ಭಾಗದಲ್ಲಿ 'ಎಜುಕೇಷನ್ ಹಬ್' ನಿರ್ಮಾಣ ಮಾಡುವ ಮೂಲಕ ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ ಎಂದು ಶ್ಲಾಘಿಸಿದರು.

​ಸಭೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಿವಾನಂದ ನಾಲವಾರ ಮತ್ತು ಆದರ್ಶ ವಿದ್ಯಾಲಯದ ಮುಖ್ಯಗುರುಗಳಾದ ಸಂತೋಷಕುಮಾರ ಜಮಾದಾ‌ರ್ ಅವರು ಮಾತನಾಡಿ ಕ್ರೀಡಾಕೂಟಕ್ಕೆ ಶುಭ ಕೋರಿದರು. ​ಕಬಡ್ಡಿ, ವಾಲಿಬಾಲ್‌ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು. ವಿಜೇತರಿಗೆ ಪ್ರಥಮ ಹಾಗೂ ದ್ವಿತೀಯ ಬಹುಮಾನಗಳನ್ನು ಸಂಜಯ್ ಬುಳಕರ್ ಅವರ ವತಿಯಿಂದ ವಿತರಿಸಲಾಯಿತು.

Jtv kannada

ಜನತೆಯ ಸುದ್ದಿ ವಾಹಿನಿ, ನೇರ ದಿಟ್ಟ ನಿರಂತರ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು