ಬುಧವಾರ, ಏಪ್ರಿಲ್ 1, 2026

ಏಪ್ರಿಲ್ 4ಕ್ಕೆ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರ.

ಚಿತ್ತಾಪುರ: ಪಟ್ಟಣದ ಕಂಬಳೇಶ್ವರ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಸೋಮಶೇಖರ ಶಿವಾಚಾರ್ಯರ 59ನೇ ಜನ್ಮದಿನದ ಅಂಗವಾಗಿ, ಸಾರ್ವಜನಿಕರಿಗಾಗಿ ಬೃಹತ್ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸೆ ಹಾಗೂ ಉಚಿತ ಕನ್ನಡಕ ವಿತರಣಾ ಶಿಬಿರವನ್ನು ಆಯೋಜಿಸಲಾಗಿದೆ.

ಯಾದಗಿರಿಯ ವೇದಾ ಕಣ್ಣಿನ ಆಸ್ಪತ್ರೆ ಹಾಗೂ ಕಲಬುರಗಿಯ ದೃಷ್ಟಿ ಕಣ್ಣಿನ ಆಸ್ಪತ್ರೆಯ ಸಹಯೋಗದೊಂದಿಗೆ, ಏಪ್ರಿಲ್ 4 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 3:00 ಗಂಟೆಯವರೆಗೆ ಪಟ್ಟಣದ ಕಂಬಳೇಶ್ವರ ಕಲ್ಯಾಣ ಮಂಟಪದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಆಯೋಜಕರಾದ ಮಲ್ಲು ಇಂದೂರ ಹಾಗೂ ನಾಗರೆಡ್ಡಿ ಗೋಪಸೇನ್ ಅವರು ತಿಳಿಸಿದ್ದಾರೆ.

ಕಂಬಳೇಶ್ವರ ಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನುರಿತ ವೈದ್ಯರಿಂದ ಕಣ್ಣಿನ ಪರೀಕ್ಷೆಯ ಜೊತೆಗೆ ಬಿಪಿ (ರಕ್ತದೊತ್ತಡ) ಮತ್ತು ಶುಗರ್ (ಮಧುಮೇಹ) ತಪಾಸಣೆಯನ್ನೂ ಮಾಡಲಾಗುವುದು.ಅರ್ಹ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣೆ ಹಾಗೂ ಅಗತ್ಯವಿರುವವರಿಗೆ ಶಸ್ತ್ರಚಿಕಿತ್ಸೆಯ ವ್ಯವಸ್ಥೆ ಮಾಡಲಾಗುವುದು.ಅಂದು ಸಂಜೆ 5:00 ಗಂಟೆಗೆ ಕಂಬಳೇಶ್ವರ ಶ್ರೀಗಳ 59ನೇ ಜನ್ಮ ದಿನೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ

"ತಾಲ್ಲೂಕಿನ ಸಾರ್ವಜನಿಕರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಉಚಿತ ಆರೋಗ್ಯ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು." 

— ಮಲ್ಲು ಇಂದೂರ ಹಾಗೂ ನಾಗರೆಡ್ಡಿ ಗೋಪಸೇನ್, ಆಯೋಜಕರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈಶ್ವರ ಖಂಡ್ರೆ ಅವರಿಗೆ ತಾಲ್ಲೂಕು ವೀರಶೈವ ಸಮಾಜದಿಂದ ಸನ್ಮಾನ.

ಚಿತ್ತಾಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರನ್ನು ಚಿತ್ತಾಪುರ ತಾಲ್ಲೂಕು ವೀರಶ...