ಪಟ್ಟಣದ ಬಸವೇಶ್ವರ ವಿದ್ಯಾ ಸಂಸ್ಥೆಯಲ್ಲಿ ರೇವಣಸಿದ್ದಪ್ಪ ಕಾಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸ್ನಾತಕೋತ್ತರ ಹಾಗೂ ಸಂಶೋಧನಾ ಕೇಂದ್ರ ಹಾಗೂ ಗುಲ್ಬರ್ಗ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 2025-26ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ (NSS) ವಾರ್ಷಿಕ ವಿಶೇಷ ಶಿಬಿರದ 4ನೇ ದಿನದ ಗ್ರಾಮೀಣ ಅಭಿವೃದ್ಧಿಯಲ್ಲಿ ಸ್ತ್ರೀಶಕ್ತಿಯ ಪಾತ್ರ' ಎಂಬ ವಿಷಯದ ಕುರಿತು ನಡೆದ ವಿಶೇಷ ಉಪನ್ಯಾಸ ಮಾಲೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸ್ತ್ರೀಶಕ್ತಿ ಸಂಘಗಳ ಮೂಲಕ ಮಹಿಳೆಯರು ಇಂದು ಸ್ವಾವಲಂಬಿಗಳಾಗುತ್ತಿದ್ದು, ಹಳ್ಳಿಗಳ ಸಮಗ್ರ ಅಭಿವೃದ್ಧಿಗೆ ಶಕ್ತಿಯಾಗಿ ನಿಂತಿದ್ದಾರೆ," ಎಂದು ತಿಳಿಸಿದರು.
ಮತ್ತೊಬ್ಬ ಮುಖ್ಯ ಅತಿಥಿ, ಉದಯಕಾಲ ವರದಿಗಾರ ಜಗದೇವ ಕುಂಬಾರ ಅವರು ಮಾತನಾಡಿ, "ಗ್ರಾಮೀಣಾಭಿವೃದ್ಧಿ ಎಂದರೆ ಕೇವಲ ರಸ್ತೆ, ಚರಂಡಿ ನಿರ್ಮಾಣವಲ್ಲ; ಅದು ಮಹಿಳೆಯರ ಬೌದ್ಧಿಕ ಮತ್ತು ಆರ್ಥಿಕ ಸುಧಾರಣೆಯನ್ನೂ ಒಳಗೊಂಡಿದೆ. ಸ್ತ್ರೀಶಕ್ತಿ ಗುಂಪುಗಳು ಗ್ರಾಮೀಣ ಭಾಗದ ಅರ್ಥವ್ಯವಸ್ಥೆಯ ಬೆನ್ನೆಲುಬಾಗಿವೆ," ಎಂದು ಅಭಿಪ್ರಾಯಪಟ್ಟರು.
ಉಪನ್ಯಾಸಕ ನರಸಪ್ಪ ಚಿನ್ನಕಟ್ಟಿ ಅವರು ವಿಶೇಷ ಉಪನ್ಯಾಸ ನೀಡಿ, ಶಿಬಿರಾರ್ಥಿಗಳಿಗೆ ಗ್ರಾಮೀಣಾಭಿವೃದ್ಧಿಯಲ್ಲಿ ಯುವಜನತೆ ಮತ್ತು ಸ್ತ್ರೀಶಕ್ತಿ ಹೇಗೆ ಕೈಜೋಡಿಸಬಹುದು ಎಂಬ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಸೂಗುರೇಶ್ವರ ವಹಿಸಿದ್ದರು. ವೇದಿಕೆಯಲ್ಲಿ ಅಗ್ನಿಶಾಮಕ ದಳದ ಠಾಣಾಧಿಕಾರಿ ನಾಗರಾಜ್, ಅಗ್ನಿಶಾಮಕ ಸಿಬ್ಬಂದಿಗಳಾದ ಕಾಶಿನಾಥ್, ಮಹಮ್ಮದ್ ಸಲೀಂ ಹಾಗೂ ಉಪನ್ಯಾಸಕ ರುದ್ರ ಕುಮಾರ್ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಅಧಿಕಾರಿಗಳಾದ ಉಪನ್ಯಾಸಕ ಮರೆಪ್ಪ ಮೇತ್ರಿ, ಮಲ್ಲಪ್ಪ ಮಾನೆಗರ್, ಡಾ. ಶಶಿಧರ್ ಯಡ್ರಾಮಿ, ಇದ್ದರು.
ಪೂಜಾ ಕಾರ್ಯಕ್ರಮವನ್ನು ನಿರೂಪಿಸಿದರು, ತುಳಸಿ ಸ್ವಾಗತಿಸಿದರು ಮತ್ತು ಗೌರಮ್ಮ ವಂದನಾರ್ಪಣೆ ಮಾಡಿದರು. ಶಿಬಿರದಲ್ಲಿ ನೂರಾರು ಎನ್‌ಎಸ್‌ಎಸ್ ಸ್ವಯಂಸೇವಕರು ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ