ಜನತೆಯ ಸುದ್ದಿ ವಾಹಿನಿ

ಸೋಮವಾರ, ಜೂನ್ 1, 2026

ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಹುದ್ದೆ ನೀಡಲು ಆನಂದ್ ಯರಗಲ್ ಆಗ್ರಹ

 

ಚಿತ್ತಾಪುರ: ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ಅತ್ಯುತ್ತಮ ಆಡಳಿತ ನೀಡುತ್ತಿರುವ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆ ನೀಡಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ಆನಂದ್ ಯರಗಲ್ ಒತ್ತಾಯಿಸಿದ್ದಾರೆ.

​ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಿಯಾಂಕ್ ಖರ್ಗೆ ಅವರು ಕೇವಲ ಕ್ಷೇತ್ರಕ್ಕೆ ಸೀಮಿತವಾಗದೆ ಇಡೀ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಯುವ ನಾಯಕತ್ವ, ದೂರದೃಷ್ಟಿ ಮತ್ತು ಆಡಳಿತಾತ್ಮಕ ದಕ್ಷತೆ ಹೊಂದಿರುವ ಅವರಿಗೆ ಡಿಸಿಎಂ ಹುದ್ದೆ ನೀಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

​"ಪ್ರಿಯಾಂಕ್ ಖರ್ಗೆ ಅವರು ಸಚಿವರಾಗಿ ಐಟಿ-ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದ್ದಾರೆ. ಕಲ್ಯಾಣ ಕರ್ನಾಟಕದ ಹಿಂದುಳಿದಿರುವಿಕೆಯನ್ನು ನೀಗಿಸಲು ಅವರ ಕೈ ಬಲಪಡಿಸುವುದು ಅಗತ್ಯವಾಗಿದೆ. ಹೀಗಾಗಿ ಹೈಕಮಾಂಡ್ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು."

ಆನಂದ್ ಯರಗಲ್, ಕಾಂಗ್ರೆಸ್ ಯುವ ಮುಖಂಡ


​ಖರ್ಗೆ ಅವರಿಗೆ ಉನ್ನತ ಜವಾಬ್ದಾರಿ ನೀಡುವುದರಿಂದ ಮುಂಬರುವ ದಿನಗಳಲ್ಲಿ ಪಕ್ಷ ಮತ್ತು ಸರ್ಕಾರ ಎರಡಕ್ಕೂ ಮತ್ತಷ್ಟು ಶಕ್ತಿ ಬರಲಿದ್ದು, ಇಡೀ ಭಾಗದ ಯುವಕರಿಗೆ ಮತ್ತು ಜನಸಾಮಾನ್ಯರಿಗೆ ಮತ್ತಷ್ಟು ಸೌಲಭ್ಯಗಳು ಸಿಗಲು ಸಹಕಾರಿಯಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ಸಹಾಯಕ ಕೃಷಿ ನಿರ್ದೇಶಕರ ದಿಢೀರ್ ಭೇಟಿ, ಪರಿಶೀಲನೆ

ಚಿತ್ತಾಪುರ: ತಾಲೂಕಿನ ರೈತರಿಗೆ ಗುಣಮಟ್ಟದ ಕೃಷಿ ಪರಿಕರಗಳು ಸರಿಯಾದ ದರದಲ್ಲಿ ಸಿಗುವಂತೆ ಮಾಡಲು ಮತ್ತು ಯಾವುದೇ ರೀತಿಯ ಕಪ್ಪು ಮಾರುಕಟ್ಟೆ ದಂಧೆಗೆ ಆಸ್ಪದ ನೀಡದಂತೆ ಕೃಷಿ ಇಲಾಖೆಯ ಉನ್ನತ ಅಧಿಕಾರಿಗಳ ತಂಡವು ಪಟ್ಟಣದ ವಿವಿಧ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ದಿಢೀರ್ ಭೇಟಿ ನೀಡಿ ಕಟ್ಟುನಿಟ್ಟಿನ ತಪಾಸಣೆ ನಡೆಸಿದೆ.

ಸೇಡಂ ಉಪವಿಭಾಗದ ಉಪ ಕೃಷಿ ನಿರ್ದೇಶಕರಾದ ಆನಂದಕುಮಾರ್ ಹಾಗೂ ತಾಲೂಕಿನ ಜಂಟಿ ಕೃಷಿ ನಿರ್ದೇಶಕರಾದ ಸಂಜೀವ ಕುಮಾರ್ ಮಾನ್ಕರ್ ಅವರ ನೇತೃತ್ವದಲ್ಲಿ ಕೃಷಿ ಅಧಿಕಾರಿಗಳಾದ ರವಿಂದ್ರ, ಕುಮಾರ ಮತ್ತು ಇತರ ಅಧಿಕಾರಿಗಳನ್ನೊಳಗೊಂಡ ತಂಡವು ಮೇ 29, ರಂದು ಪಟ್ಟಣದ ವಿವಿಧ ರಸಗೊಬ್ಬರ ಮತ್ತು ಬಿತ್ತನೆ ಬೀಜ ಮಾರಾಟ ಮಳಿಗೆಗಳಿಗೆ ಆಕಸ್ಮಿಕ ಭೇಟಿ ನೀಡಿ ಪರಿಶೀಲನೆ ನಡೆಸಿತು.

​ಪ್ರತಿಯೊಂದು ಕೃಷಿ ಪರಿಕರ ಮಾರಾಟ ಮಳಿಗೆಯಲ್ಲೂ ಕಡ್ಡಾಯವಾಗಿ ದರ ಪಟ್ಟಿ ಹಾಗೂ ದಾಸ್ತಾನು (Stock) ವಿವರಗಳನ್ನು ಒಳಗೊಂಡ ಬೋರ್ಡ್ ಅನ್ನು ರೈತರಿಗೆ ಕಾಣಿಸುವಂತೆ ಪ್ರದರ್ಶಿಸಬೇಕು.ರಸಗೊಬ್ಬರ ಮಾರಾಟ ಮಾಡುವಾಗ ನೈಜ ಗೋದಾಮು ದಾಸ್ತಾನು ಮತ್ತು ಪಿ.ಓ.ಎಸ್ (POS) ಯಂತ್ರದಲ್ಲಿನ ದಾಸ್ತಾನು ತಾಳೆಯಾಗಬೇಕು. ರೈತರಿಗೆ ಕಡ್ಡಾಯವಾಗಿ ಪಿ.ಓ.ಎಸ್ ಯಂತ್ರದ ಮೂಲಕವೇ ರಸಗೊಬ್ಬರ ವಿತರಿಸಬೇಕು ಹಾಗೂ ನ್ಯಾನೋ ಯೂರಿಯಾ ಮತ್ತು ನ್ಯಾನೋ ಡಿ.ಎ.ಪಿ ಬಳಕೆಯ ಬಗ್ಗೆ ಸೂಕ್ತ ಮಾಹಿತಿ ನೀಡಬೇಕು. ಬಿತ್ತನೆ ಬೀಜಗಳು, ರಸಗೊಬ್ಬರಗಳು ಹಾಗೂ ಕೀಟನಾಶಕಗಳನ್ನು ಸರ್ಕಾರ ನಿಗದಿಪಡಿಸಿದ ದರದಲ್ಲೇ ಮಾರಾಟ ಮಾಡಬೇಕು. ಯಾವುದೇ ಕಾರಣಕ್ಕೂ ಹೆಚ್ಚಿನ ದರ ವಸೂಲಿ ಮಾಡಬಾರದು.​ಹೆಚ್ಚಿನ ದರ ವಸೂಲಿ ಮಾಡಿದರೆ ಪರವಾನಗಿ ರದ್ದು.

"ರೈತರಿಂದ ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುವುದು ಅಥವಾ ಕೃತಕ ಅಭಾವ ಸೃಷ್ಟಿಸುವುದು ಕಂಡುಬಂದಲ್ಲಿ ಅಂತಹ ಮಾರಾಟಗಾರರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಷ್ಟೇ ಅಲ್ಲದೆ, ಅವರ ವ್ಯಾಪಾರ ಪರವಾನಗಿಯನ್ನು (License) ತಕ್ಷಣದಿಂದಲೇ ರದ್ದುಗೊಳಿಸಲಾಗುವುದು" ಎಂದು ಅಧಿಕಾರಿಗಳು ಈ ಸಂದರ್ಭದಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ದಾಸ್ತಾನು: ರಿಯಾಯಿತಿ ದರದಲ್ಲಿ ವಿತರಣೆ ಪ್ರಾರಂಭ

ಚಿತ್ತಾಪುರ: ತಾಲೂಕಿನಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆಯು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ತಾಲೂಕಿನ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಸಮರ್ಪಕವಾಗಿ ದಾಸ್ತಾನು ಮಾಡಲಾಗಿದೆ. ತಾಲೂಕಿನಲ್ಲಿ ಯಾವುದೇ ರೀತಿಯ ಬೀಜ ಮತ್ತು ರಸಗೊಬ್ಬರದ ಕೊರತೆ ಇರುವುದಿಲ್ಲ ಎಂದು ಸಹಾಯಕ ಕೃಷಿ ನಿರ್ದೇಶಕರಾದ ಸಂಜೀವಕುಮಾರ ಮಾನಕ‌ರ್ ಪ್ರಕಟಣೆಗೆ ತಿಳಿಸಿದ್ದಾರೆ.

ಜೂನ್ 1 ರಂದು ಚಿತ್ತಾಪುರದ ರೈತ ಸಂಪರ್ಕ ಕೇಂದ್ರದಲ್ಲಿ ಪ್ರಾಯೋಗಿಕವಾಗಿ ರೈತರಿಗೆ ತೊಗರಿ, ಹೆಸರು ಮತ್ತು ಉದ್ದು ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ರೈತರು ಇಲಾಖೆಯ ಸೌಲಭ್ಯಗಳನ್ನು ಪಡೆದುಕೊಂಡು, ಆಧುನಿಕ ಕೃಷಿ ಸಲಕರಣೆ ಹಾಗೂ ಉಪಕರಣಗಳನ್ನು ಬಳಸಿ ಆರ್ಥಿಕವಾಗಿ ಯಶಸ್ವಿಯಾಗಬೇಕು ಎಂದು ಕರೆ ನೀಡಿದರು.

ರೈತರಿಗೆ ಕೃಷಿ ಇಲಾಖೆಯ ಪ್ರಮುಖ ಸೂಚನೆಗಳು:

ರೈತರು ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳನ್ನು ಖರೀದಿಸುವಾಗ ಕಡ್ಡಾಯವಾಗಿ ಅಧಿಕೃತ ರಸೀದಿಯನ್ನು ಪಡೆಯಬೇಕು.ಬಿತ್ತನೆ ಮಾಡುವ ಮುನ್ನ ಕಡ್ಡಾಯವಾಗಿ ಬಿಜೋಪಚಾರ (Seed Treatment) ಮಾಡಿಯೇ ಬಿತ್ತನೆ ಮಾಡಬೇಕು.ಮುಂಗಾರು ಹಂಗಾಮಿನ ಸುರಕ್ಷತೆಗಾಗಿ ರೈತರು ಕಡ್ಡಾಯವಾಗಿ ಹವಾಮಾನ ಆಧಾರಿತ ಬೆಳೆ ವಿಮೆಯನ್ನು ಮಾಡಿಸಬೇಕು

ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳ ವಿತರಣೆ ವಿವರ (ಪ್ರತಿ ಕ್ವಿಂಟಾಲ್‌ಗೆ):

ತೊಗರಿ: ಪೂರ್ಣ ದರ ₹13,200. ಸಾಮಾನ್ಯ ರೈತರಿಗೆ ₹2,500 ರಿಯಾಯಿತಿ ಇದ್ದು, ರೈತರು ಪಾವತಿಸಬೇಕಾದ ದರ ₹10,700. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ (SC/ST) ರೈತರಿಗೆ ₹3,750 ರಿಯಾಯಿತಿ ಇದ್ದು, ಪಾವತಿಸಬೇಕಾದ ದರ ₹9,450.

ಹೆಸರು:ಪೂರ್ಣ ದರ ₹12,700. ಸಾಮಾನ್ಯ ರೈತರಿಗೆ ₹2,500 ರಿಯಾಯಿತಿ ಇದ್ದು, ರೈತರು ಪಾವತಿಸಬೇಕಾದ ದರ ₹10,200. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ರೈತರಿಗೆ ₹3,750 ರಿಯಾಯಿತಿ ಇದ್ದು, ಪಾವತಿಸಬೇಕಾದ ದರ ₹8,950.

ಉದ್ದು: ಪೂರ್ಣ ದರ ₹11,750. ಸಾಮಾನ್ಯ ರೈತರಿಗೆ ₹2,500 ರಿಯಾಯಿತಿ ಇದ್ದು, ರೈತರು ಪಾವತಿಸಬೇಕಾದ ದರ ₹9,250. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ರೈತರಿಗೆ ₹3,750 ರಿಯಾಯಿತಿ ಇದ್ದು, ಪಾವತಿಸಬೇಕಾದ ದರ ₹8,000.ಅರ್ಹ ರೈತರ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಈ ಸೌಲಭ್ಯವನ್ನು ಪಡೆದುಕೊಳ್ಳಲು ಕೋರಲಾಗಿದೆ

ಕಾರ್ಯಕ್ರಮದಲ್ಲಿ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಕೃಷಿ ಅಧಿಕಾರಿಗಳಾದ ರವಿಕುಮಾರ್, ಬಸವರಾಜ್, ಸಿದ್ದರಾಮ, ಇಲಾಖೆಯ ಸಿಬ್ಬಂದಿಗಳು ಹಾಗೂ ತಾಲೂಕಿನ ಪ್ರಮುಖ ರೈತರು ಉಪಸ್ಥಿತರಿದ್ದರು.

ಶ್ರೀನಿವಾಸ್ ಸಾಗರ್ ಅವರಿಗೆ ಎಂ.ಎಲ್.ಸಿ ಸ್ಥಾನ ನೀಡಲು ಒತ್ತಾಯ.

​ಚಿತ್ತಾಪೂರ: ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲದಿಂದ ಕಾಂಗ್ರೆಸ್ ಪಕ್ಷದ ತಳಮಟ್ಟದ ಬಲವರ್ಧನೆಗಾಗಿ ಯಾವುದೇ ಅಧಿಕಾರದ ಹಪಹಪಿಯಿಲ್ಲದೆ ನಿರಂತರವಾಗಿ ಶ್ರಮಿಸುತ್ತಾ ಬಂದಿರುವ ಹಿರಿಯ ಮುಖಂಡರಾದ ಶ್ರೀನಿವಾಸ್ ಸಾಗರ್ ಅವರಿಗೆ ಮುಂಬರುವ ವಿಧಾನ ಪರಿಷತ್ (MLC) ಚುನಾವಣೆಯಲ್ಲಿ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಬೇಕೆಂದು ಉಪ್ಪಾರ ಸಮಾಜ ಹಾಗೂ ಅವರ ಅಪಾರ ಬೆಂಬಲಿಗರು ಪಕ್ಷದ ಹೈಕಮಾಂಡ್ ಮತ್ತು ರಾಜ್ಯ ನಾಯಕರಲ್ಲಿ ಮನವಿ ಮಾಡಿದ್ದಾರೆ.

​ತಮ್ಮ ವಿದ್ಯಾರ್ಥಿ ದೆಸೆಯಿಂದಲೇ ಕಾಂಗ್ರೆಸ್ ಸಿದ್ಧಾಂತವನ್ನು ಮೈಗೂಡಿಸಿಕೊಂಡು ಬಂದಿರುವ ಶ್ರೀನಿವಾಸ್ ಸಾಗರ್ ರಾವೂರ ಅವರು ಸಮಾಜದ ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಜನರ ಏಳಿಗೆಗಾಗಿ ಸತತವಾಗಿ ಹೋರಾಡುತ್ತಾ ಬಂದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷದ ಸಂಘಟನೆಗೆ ಇವರು ನೀಡಿರುವ ಕೊಡುಗೆ ಅಪಾರವಾಗಿದೆ. ಹಿಂದುಳಿದ ವರ್ಗಗಳ ಪ್ರಮುಖ ಸಮುದಾಯವಾದ ಉಪ್ಪಾರ (ಪ್ರವರ್ಗ- 1) ಜಾತಿಗೆ ಸೇರಿರುವ ಇವರಿಗೆ ಈ ಬಾರಿ ವಿಧಾನ ಪರಿಷತ್ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯ ಎತ್ತಿ ಹಿಡಿಯಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ.

​​ಸುದೀರ್ಘ ರಾಜಕೀಯ ಮತ್ತು ಸಾಮಾಜಿಕ ಸೇವೆ:
ಶ್ರೀನಿವಾಸ್ ಜಗನ್ನಾಥಪ್ಪ ಸಾಗರ್ ಅವರು ಕಳೆದ 40 ವರ್ಷಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ್ದು, ಅವರ ಪ್ರಮುಖ ಕಾರ್ಯಚಟುವಟಿಕೆಗಳಾದ ​ಸಾಮಾಜಿಕ ನಾಯಕತ್ವ: 1980 ರಿಂದ ಕಲಬುರಗಿ ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷರಾಗಿ ಸಮುದಾಯದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.
​ಸ್ಥಳೀಯ ಸಂಸ್ಥೆಗಳ ಸೇವೆ: 1981 ರಲ್ಲಿ ರಾವೂರ್ ಗ್ರಾಮದ ವಿ.ಎಸ್.ಎಸ್.ಎಸ್.ಎನ್ ಸಹಕಾರ ಸಂಘಕ್ಕೆ ಅವಿರೋಧವಾಗಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ತದನಂತರ 1987 ರಿಂದ 1992 ರವರೆಗೆ ರಾವೂರ್ ಮಂಡಲ ಪಂಚಾಯತ್ ಸದಸ್ಯರಾಗಿ ಕಾಂಗ್ರೆಸ್ ಪಕ್ಷದಿಂದ ಸೇವೆ ಸಲ್ಲಿಸಿದ್ದಾರೆ. 1995 ರಲ್ಲಿ ರಾವೂರ್ ಕ್ಷೇತ್ರದಿಂದ ಚಿತ್ತಾಪುರ ತಾಲೂಕು ಪಂಚಾಯತ್ ಸಮಿತಿ ಸದಸ್ಯರಾಗಿ ಚುನಾಯಿತರಾಗಿದ್ದರು. ​ಕೃಷಿ ಮತ್ತು ಕಾರ್ಮಿಕರ ಪರ ಹೋರಾಟ: 1993 ರಲ್ಲಿ ಚಿತ್ತಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಸದಸ್ಯರಾಗಿ ಮತ್ತು 1984 ರಲ್ಲಿ ವಾಡಿ ಸಿಮೆಂಟ್ ಕಾರ್ಖಾನೆಯ ಭೂ ಸಂತ್ರಸ್ತರ ಪುನರ್ವಸತಿ ಸಂಘದ ಉಪಾಧ್ಯಕ್ಷರಾಗಿ ಭೂಮಿ ಕಳೆದುಕೊಂಡ ನೂರಾರು ಸ್ಥಳೀಯ ನಿವಾಸಿಗಳಿಗೆ ಉದ್ಯೋಗ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು.

​ಪಕ್ಷದ ಸಂಘಟನೆ: 1983-1990 ರವರೆಗೆ ಚಿತ್ತಾಪುರ ತಾಲೂಕು ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ, 1991-1995 ರವರೆಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ಹಾಗೂ 1995-2000 ರವರೆಗೆ ಚಿತ್ತಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಪಕ್ಷದ ಬಲವರ್ಧನೆಗೆ ಶ್ರಮಿಸಿದ್ದಾರೆ.

​ರಾಜ್ಯ ಮತ್ತು ರಾಷ್ಟ್ರ ಮಟ್ಟದ ಜವಾಬ್ದಾರಿಗಳು: 1993 ರಲ್ಲಿ ಕರ್ನಾಟಕ ರಾಜ್ಯ ಆಗ್ರೋ ಇಂಡಸ್ಟ್ರೀಸ್ ಕಾರ್ಪೊರೇಶನ್‌ನ ನಾಮನಿರ್ದೇಶಿತ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.​2005 ರಿಂದ 2008 ರವರೆಗೆ ಮತ್ತು ಪ್ರಸ್ತುತ 2022 ರಿಂದ ಕೆ.ಪಿ.ಸಿ.ಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ) ಸದಸ್ಯರಾಗಿ ಸಕ್ರಿಯರಾಗಿದ್ದಾರೆ.​2011 ರಲ್ಲಿ ಸಿಕಂದರಾಬಾದ್‌ನ ವಲಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ (Z.R.U.C.C) ಸದಸ್ಯರಾಗಿ ಮತ್ತು 2013 ರಿಂದ 2014 ರವರೆಗೆ ನವದೆಹಲಿಯ ರೈಲ್ವೆ ಬೋರ್ಡ್ ಪಿಎಸ್‍ಸಿ (ಪ್ರಯಾಣಿಕರ ಸೇವಾ ಸಮಿತಿ) ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.

​"ಅವರು ಇಡೀ ಜೀವನವನ್ನು ಕಾಂಗ್ರೆಸ್ ಪಕ್ಷದ ಏಳಿಗೆಗಾಗಿ ಮುಡಿಪಾಗಿಟ್ಟಿದ್ದಾರೆ. ಪಕ್ಷವು ಅವರ ನಿಷ್ಠೆ ಮತ್ತು ಸುದೀರ್ಘ ಸೇವೆಯನ್ನು ಗುರುತಿಸಿ ವಿಧಾನ ಪರಿಷತ್ ಸದಸ್ಯರನ್ನಾಗಿ (MLC) ನಾಮನಿರ್ದೇಶನ ಮಾಡಿದರೆ, ಕಲ್ಯಾಣ ಕರ್ನಾಟಕ ಭಾಗದ ಜನರ ಧ್ವನಿಯಾಗಿ ಮತ್ತು ಪಕ್ಷದ ಬಲವರ್ಧನೆಗೆ ಇನ್ನಷ್ಟು ಶಕ್ತಿಮೀರಿ ಶ್ರಮಿಸಲು ಸಾಧ್ಯವಾಗುತ್ತದೆ.

-ಜಾಫರ್ ಮೀಯಾ
ಕಾಂಗ್ರೆಸ್ ಮುಖಂಡರು ರಾವೂರ.
 
​ಪ್ರಾದೇಶಿಕ ಸಮತೋಲನ ಮತ್ತು ಹಿಂದುಳಿದ ವರ್ಗಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರು ಇವರ ಹೆಸರನ್ನು ಪರಿಗಣಿಸಬೇಕೆಂದು ಈ ಭಾಗದ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಪ್ರಬಲವಾಗಿ ಆಗ್ರಹಿಸಿದ್ದಾರೆ.

-ಆನಂದ ಯರಗಲ್
ಕಾಂಗ್ರೆಸ್ಶಯುವ ಮುಖಂಡರು ಚಿತ್ತಾಪೂರ 

ಹಿಂದುಳಿದವರು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಪರವಾಗಿ ಅವರು ನಿರಂತರವಾಗಿ ಧ್ವನಿ ಎತ್ತುತ್ತಾ ಬಂದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಅವರ ಕೊಡುಗೆ ಅಪಾರವಾಗಿದೆ. ಇಂತಹ ನಿಷ್ಠಾವಂತ ಮತ್ತು ಹಿರಿಯ ನಾಯಕರಿಗೆ ವಿಧಾನ ಪರಿಷತ್‌ನಲ್ಲಿ ಪ್ರಾತಿನಿಧ್ಯ ನೀಡುವುದು ನ್ಯಾಯ ಸಮ್ಮತವಾಗಿದೆ 

- ಯುನೂಸ್ ಪ್ಯಾರೆ,
ಕಾಂಗ್ರೆಸ್ ಮುಖಂಡರು ರಾವೂರ.

ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ನೀಡಲು ಹಡಪದ ಸಮಾಜ ಆಗ್ರಹ

ಚಿತ್ತಾಪುರ: ಕ್ಷೇತ್ರದ ಜನಪ್ರಿಯ ಶಾಸಕ ಹಾಗೂ ಹಾಲಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನವನ್ನು ನೀಡಬೇಕು ಎಂದು ಹಡಪದ ಸಮಾಜದ ತಾಲೂಕಾಧ್ಯಕ್ಷ ಹಾಗೂ ವಾಡಿ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಮೇಶ ಹಡಪದ ಮತ್ತು ತಾಲೂಕಾ ಪ್ರಧಾನ ಕಾರ್ಯದರ್ಶಿ ಕಲ್ಯಾಣಿ ಗುಂಡುಗುರ್ತಿ ಅವರು ಸರ್ಕಾರದ ಹೈಕಮಾಂಡ್ ಅನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಿಯಾಂಕ್ ಖರ್ಗೆ ಅವರು ಚಿತ್ತಾಪುರ ಕ್ಷೇತ್ರ ಸೇರಿದಂತೆ ಇಡೀ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಯುವ ನಾಯಕರಾಗಿರುವ ಅವರು ತಂತ್ರಜ್ಞಾನ, ಗ್ರಾಮೀಣಾಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯದ ಪರವಾಗಿ ದಕ್ಷತೆಯಿಂದ ಕೆಲಸ ಮಾಡುತ್ತಿದ್ದಾರೆ. ಅವರ ನಾಯಕತ್ವ ಮತ್ತು ಆಡಳಿತ ವೈಖರಿಯನ್ನು ಗುರುತಿಸಿ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂಬುದು ಕಾಂಗ್ರೆಸ್ ಪಕ್ಷದ ಹಡಪದ ಸಮಾಜದ ಮುಖಂಡರ ಆಶಯವಾಗಿದೆ ಎಂದು ತಿಳಿಸಿದ್ದಾರೆ.

"ಪ್ರಿಯಾಂಕ್ ಖರ್ಗೆ ಅವರು ಸಚಿವರಾಗಿ ಅತ್ಯುತ್ತಮ ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೆ ಡಿಸಿಎಂ ಸ್ಥಾನ ನೀಡುವುದರಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ಮತ್ತಷ್ಟು ಹೆಚ್ಚಿನ ಬಲ ಸಿಗಲಿದೆ ಮತ್ತು ಅಭಿವೃದ್ಧಿ ಕಾರ್ಯಗಳು ವೇಗವಾಗಿ ಸಾಗಲಿವೆ." 

— ರಮೇಶ ಹಡಪದ 
ಹಡಪದ ಸಮಾಜದ ತಾಲೂಕಾಧ್ಯಕ್ಷ ಹಾಗೂ ವಾಡಿ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಿತ್ತಾಪೂರ.

ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಹಾಗೂ ರಾಜ್ಯದ ಹಿರಿಯ ನಾಯಕರು ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ, ಪ್ರಿಯಾಂಕ್ ಖರ್ಗೆ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಅವರು ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಹುದ್ದೆ ನೀಡಲು ಆನಂದ್ ಯರಗಲ್ ಆಗ್ರಹ

  ಚಿತ್ತಾಪುರ: ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ಅತ್ಯುತ್ತಮ ಆಡಳಿತ ನೀಡುತ್ತಿರುವ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎ...