ಜನತೆಯ ಸುದ್ದಿ ವಾಹಿನಿ

ಮಂಗಳವಾರ, ಜೂನ್ 2, 2026

ಕಾಲುದಾರಿ ಬಂದ್: ಜೂನ್ 8 ಕ್ಕೆ ಬೃಹತ್ ಪ್ರತಿಭಟನೆ.

ಚಿತ್ತಾಪುರ: ತಾಲೂಕಿನ ವಾಡಿ ಪಟ್ಟಣದ ರೈಲು ನಿಲ್ದಾಣದ ಹತ್ತಿರದಿಂದ ಹನುಮಾನ ನಗರ, ವಿಜಯ ನಗರ, ಇಂದಿರಾ ನಗರ ಸೇರಿದಂತೆ ನಾಲ್ಕೈದು ಬಡಾವಣೆಗಳಿಗೆ ಸಂಪರ್ಕಿಸುವ ಕಾಲುದಾರಿಯನ್ನು ರೈಲ್ವೆ ಸಿಬ್ಬಂದಿ ಏಕಾಏಕಿ ತಡೆದಿರುವುದಕ್ಕೆ ಸ್ಥಳೀಯ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರೈಲ್ವೆ ಇಲಾಖೆಯ ಈ ಕ್ರಮವನ್ನು ಖಂಡಿಸಿ ಬಿಜೆಪಿ, ಮಾದಿಗ ದಂಡೋರ ಹೋರಾಟ ಸಮಿತಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸಂಘಟನೆಗಳು ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿವೆ.

​ಈ ಕುರಿತು ಸ್ಥಳೀಯ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಅವರು ರೈಲು ನಿಲ್ದಾಣದ ಪ್ರಬಂಧಕರಾದ ಸಿ.ಎಚ್. ರಾಮಕೃಷ್ಣ ಅವರ ಮುಖಾಂತರ ರೈಲ್ವೆ ಮೇಲಾಧಿಕಾರಿಗಳಿಗೆ ಪತ್ರ ರವಾನಿಸಿ, ಇಲಾಖೆಯ ನಿರ್ಧಾರದ ವಿರುದ್ಧ ತೀವ್ರ ಆಸಮಾಧಾನ ವ್ಯಕ್ತಪಡಿಸಿ ಪತ್ರದ ವಿವರಗಳನ್ನು ಹಂಚಿಕೊಳ್ಳುತ್ತಾ ಮಾತನಾಡಿದ ವೀರಣ್ಣ ಯಾರಿ ಅವರು, "ವಾಡಿ ಪಟ್ಟಣವು ರೈಲ್ವೆ ಇಲಾಖೆಗೆ ಸಾಕಷ್ಟು ಆದಾಯ ಮತ್ತು ಸಂಪನ್ಮೂಲಗಳನ್ನು ಒದಗಿಸುವ ಪ್ರಮುಖ ಕೇಂದ್ರವಾಗಿದೆ. ಆದರೆ ಇಲಾಖೆಯು ನಿರಂತರವಾಗಿ ಜನರಿಗೆ ತೊಂದರೆ ನೀಡುತ್ತಾ ಬಂದಿದೆ. ಪಟ್ಟಣವು ರೈಲ್ವೆ ಹಳಿಗಳಿಂದ ಆವೃತವಾಗಿದ್ದು, ಹಳಿಯ ಮತ್ತೊಂದು ಭಾಗದಲ್ಲಿರುವ ನಾಲ್ಕೈದು ಬಡಾವಣೆಗಳಲ್ಲಿ ಸುಮಾರು 15 ರಿಂದ 20 ಸಾವಿರ ಜನರು ವಾಸಿಸುತ್ತಿದ್ದಾರೆ. ರೈಲು ನಿಲ್ದಾಣದ ಆರಂಭದಿಂದಲೂ ಜನರಿಗೆ ಅನುಕೂಲಕರವಾಗಿದ್ದ ಪಾದಚಾರಿ ಮಾರ್ಗವನ್ನು ಇದ್ದಕ್ಕಿದ್ದಂತೆ ಮುಚ್ಚಿರುವುದರಿಂದ ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರು ಸಂಚರಿಸಲು ತೀವ್ರ ತೊಂದರೆ ಅನುಭವಿಸುವಂತಾಗಿದೆ" ಎಂದು ಬೇಸರ ವ್ಯಕ್ತಪಡಿಸಿದರು.
"ಬಡಾವಣೆಗಳ ಜನರ ಅನುಕೂಲಕ್ಕಾಗಿ ಮೇಲ್ಸೇತುವೆ (FOB) ಮತ್ತು ಕೆಳಸೇತುವೆ (Underpass) ನಿರ್ಮಿಸುವಂತೆ ನಾವು ಪದೇ ಪದೇ ಸಂಬಂಧಿಸಿದ ಎಲ್ಲಾ ಮೇಲಾಧಿಕಾರಿಗಳಿಗೆ ವಿನಂತಿಯ ಮನವಿ ಪತ್ರಗಳನ್ನು ಸಲ್ಲಿಸಿದ್ದೇವೆ. ಆದರೂ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ. ಈಗ ಇದ್ದ ಕಾಲುದಾರಿಯನ್ನೂ ಬಂದ್ ಮಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ."

— ಅರ್ಜುನ ಕಟ್ಡಿಮನಿ,
ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಕ್ಷಣಾ ವೇದಿಕೆ ವಾಡಿ.


​ರೈಲ್ವೆ ಇಲಾಖೆಯು ತಕ್ಷಣವೇ ಈ ಸಮಸ್ಯೆಗೆ ಪರ್ಯಾಯ ಮಾರ್ಗವನ್ನು ಸೂಚಿಸಿ, ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಇಲ್ಲದಿದ್ದರೆ ಬರುವ ಜೂನ್ 8 ರಂದು ಸಾರ್ವಜನಿಕರೊಂದಿಗೆ ರೈಲ್ವೆ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ರೈಲ್ವೆ ಮೇಲಾಧಿಕಾರಿಗಳಿಗೆ ಸಲ್ಲಿಸಿದ ಪತ್ರದ ಮೂಲಕ ಎಚ್ಚರಿಕೆ ನೀಡಲಾಗಿದೆ.

ಈ ಸಂದರ್ಭದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಪುರಸಭೆ ಮಾಜಿ ಸದಸ್ಯರಾದ ಕಿಶನ ಜಾಧವ, ಅಂಬದಾಸ ಜಾಧವ, ಮಾದಿಗ ದಂಡೋರ ಹೋರಾಟ ಸಮಿತಿ ಜಿಲ್ಲಾ ಉಪಾಧ್ಯಕ್ಷ ಜಗದೀಶ ಮುಕ್ಕನಾಳ, ಪ್ರಧಾನ ಕಾರ್ಯದರ್ಶಿ ರಾಜೇಶ್ ಕಾಂಬಳೆ, ಮುಖಂಡರಾದ ಮಹಾಂತೇಶ ಬಿರಾದಾರ, ಪಂಡಿತ್ ಪವಾರ, ಹಾಜಪ್ಪ ಅರಸಣಗಿ, ಗೋವಿಂದ ಚವ್ಹಾಣ, ರಾಮಾಂಜನೇಯ ದದಾಸರಿ, ದೇವೇಂದ್ರ, ವಿಜಯ ಜಾನ್ ಸೇರಿದಂತೆ ಪ್ರಮುಖರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ನೀಡಲು ನಾಗೇಶ ಹಲಗಿ ಒತ್ತಾಯ.

ಚಿತ್ತಾಪುರ: ರಾಜ್ಯ ಸಚಿವ ಸಂಪುಟದಲ್ಲಿ ಸಚಿವರಾಗಿ ಅತ್ಯುತ್ತಮ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಹೆಮ್ಮೆಯ ನಾಯಕ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ...