ಎಲ್ಲಾ ಗ್ರಾಮಗಳಲ್ಲಿ ಜೂನ್ 8 ರಂದು ವಿದ್ಯುತ್ ವ್ಯತ್ಯಯ.

ಚಿತ್ತಾಪುರ, ಜೂನ್ 7: ಚಿತ್ತಾಪುರ ತಾಲೂಕಿನ ಗ್ರಾಮಗಳಲ್ಲಿ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜೂನ್ 8, 2026ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (GESCOM) ತಿಳಿಸಿದೆ.

ಚಿತ್ತಾಪುರ 110/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿರುವುದರಿಂದ ಈ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ಚಿತ್ತಾಪುರ ತಾಲ್ಲೂಕಿನ ಎಲ್ಲಾ ಗ್ರಾಮಗಳಿಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿದ್ಯುತ್ ವ್ಯತ್ಯಯದ ಅವಧಿಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಈ ಕುರಿತು ಕಾರ್ಯನಿರ್ವಾಹಕ ಅಭಿಯಂತರರು (ವಿ), ಕಾರ್ಯ ಮತ್ತು ಪಾಲನೆ ಉಪ ವಿಭಾಗ-2, ಜಿ.ವಿ.ಪ್ರ.ನಿ. ಕಂಪನಿ, ಕಲಬುರಗಿ ಪ್ರಕಟಣೆ ಹೊರಡಿಸಿದ್ದಾರೆ.

Jtv kannada

ಜನತೆಯ ಸುದ್ದಿ ವಾಹಿನಿ, ನೇರ ದಿಟ್ಟ ನಿರಂತರ.

إرسال تعليق

أحدث أقدم