ಕದ್ದರಗಿ ಸರ್ಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಚಿತ್ತಾಪುರ: ತಾಲ್ಲೂಕಿನ ಕದ್ದರಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ದಿನಾಚರಣೆಯ ಅಂಗವಾಗಿ ಶಾಲಾ ಆವರಣದಲ್ಲಿ ವಿವಿಧ ಸಸಿಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಶಾಲೆಯ ಮುಖ್ಯಗುರುಗಳಾದ ಶಿವಶರಣಪ್ಪ ಅವರು ಪರಿಸರ ದಿನಾಚರಣೆಯ ಮಹತ್ವ ಹಾಗೂ ಪ್ರತಿಯೊಬ್ಬರೂ ಗಿಡ-ಮರಗಳನ್ನು ಬೆಳೆಸುವ ಅಗತ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ಮನವರಿಕೆ ಮಾಡಿಕೊಟ್ಟರು.

"ಪರಿಸರವನ್ನು ರಕ್ಷಿಸುವುದು ಕೇವಲ ಒಂದು ದಿನದ ಆಚರಣೆಯಾಗಬಾರದು. ನಾವು ನೆಡುವ ಪ್ರತಿಯೊಂದು ಸಸಿಯನ್ನು ಮರದಂತೆ ಪೋಷಿಸಿ ಬೆಳೆಸಿದಾಗ ಮಾತ್ರ ಇಂತಹ ದಿನಾಚರಣೆಗಳಿಗೆ ನಿಜವಾದ ಅರ್ಥ ಸಿಗುತ್ತದೆ," ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಶ್ರೀಮತಿ ನಾಗಮ್ಮ ಕುಂಬಾರ, ಸೋಪಣ್ಣಗೌಡ, ಅತಿಥಿ ಶಿಕ್ಷಕ ಜಗದೇವ ಕುಂಬಾರ ಹಾಗೂ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಗಿಡಗಳಿಗೆ ನೀರುಣಿಸುವ ಮೂಲಕ ಪರಿಸರ ಸಂರಕ್ಷಣೆಯ ಸಂಕಲ್ಪ ಮಾಡಿದರು.

Jtv kannada

ಜನತೆಯ ಸುದ್ದಿ ವಾಹಿನಿ, ನೇರ ದಿಟ್ಟ ನಿರಂತರ.

إرسال تعليق

أحدث أقدم