ಸ್ವಾಸ್ಥ್ಯ ಸಮಾಜಕ್ಕಾಗಿ ವ್ಯಸನಗಳಿಂದ ದೂರವಿರಿ: ಪಿಎಸ್ಐ ರೇಣುಕಾ ಕರೆ

ಚಿತ್ತಾಪುರ: "ದೇಶದ ನಿಜವಾದ ಸಂಪತ್ತು ಮಾನವ ಸಂಪತ್ತು. ಎಲ್ಲಾ ಸಂಪನ್ಮೂಲಗಳಿದ್ದರೂ ಉತ್ತಮ ಆರೋಗ್ಯವಂತ ಮಾನವ ಸಂಪನ್ಮೂಲ ಇಲ್ಲದಿದ್ದರೆ ಎಲ್ಲವೂ ವ್ಯರ್ಥ. ಆದ್ದರಿಂದ ಆರೋಗ್ಯವಂತ ಸಮಾಜದ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಮಾದಕ ವ್ಯಸನಗಳಿಂದ ದೂರವಿರಬೇಕು" ಎಂದು ವಾಡಿ ಕ್ರೈಂ ಪಿಎಸ್ಐ ರೇಣುಕಾ ಉಡಗಿ ಅವರು ಕರೆ ನೀಡಿದರು.

ಮತ ಕ್ಷೇತ್ರವಾದ ರಾವೂರಿನ ಶ್ರೀ ಸಚ್ಚಿದಾನಂದ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ‘ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ’ ಅಂಗವಾಗಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು "ಓದುವ ವಯಸ್ಸಿನಲ್ಲಿ ತಪ್ಪು ಚಟಗಳಿಗೆ ದಾಸರಾಗಿ ಅಮೂಲ್ಯವಾದ ಬದುಕನ್ನು ಹಾಳು ಮಾಡಿಕೊಳ್ಳಬೇಡಿ. ಬದುಕನ್ನೇ ನಾಶಮಾಡುವ ಮಾದಕ ವ್ಯಸನಗಳಿಂದ ದೂರವಿದ್ದು, ಉತ್ತಮರ ಸಂಗ ಮಾಡಿ. ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳುವುದರೊಂದಿಗೆ ಪೌಷ್ಟಿಕ ಆಹಾರ ಸೇವಿಸಿ ನಿಮ್ಮ ಶೈಕ್ಷಣಿಕ ಬದುಕನ್ನು ಯಶಸ್ವಿಗೊಳಿಸಿಕೊಳ್ಳಿ" ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

 "ಇತ್ತೀಚಿನ ದಿನಗಳಲ್ಲಿ ಪ್ರಾಥಮಿಕ, ಪ್ರೌಢ ಮತ್ತು ಕಾಲೇಜು ಹಂತದ ವಿದ್ಯಾರ್ಥಿಗಳು ವಿವಿಧ ವ್ಯಸನಗಳಿಗೆ ಬಲಿಯಾಗುತ್ತಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ಇಂತಹ ವ್ಯಸನಗಳ ವಿರುದ್ಧ ಪ್ರತಿಯೊಬ್ಬರೂ ಹೋರಾಡಬೇಕಿದೆ ಹಾಗೂ ಸಮಾಜದಲ್ಲಿ ಜಾಗೃತಿ ಮೂಡಿಸಬೇಕಿದೆ. ಈ ಪವಿತ್ರ ಕಾರ್ಯಕ್ಕೆ ಸಾರ್ವಜನಿಕರೆಲ್ಲರೂ ಕೈಜೋಡಿಸಬೇಕು" ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಶಿಕ್ಷಕ ಸಿದ್ದಲಿಂಗ ಬಾಳಿ ಅವರು ಮಾದಕ ವ್ಯಸನಗಳ ದುಷ್ಪರಿಣಾಮಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿಯಾದ ರಾಜೇಶ್ವರಿ, ಶಿವಪ್ಪ, ಆರೀಫ್ ಹಾಗೂ ಶಾಲೆಯ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Jtv kannada

ಜನತೆಯ ಸುದ್ದಿ ವಾಹಿನಿ, ನೇರ ದಿಟ್ಟ ನಿರಂತರ.

إرسال تعليق

أحدث أقدم