ಚಿತ್ತಾಪುರ: ರಾಜ್ಯ ಸಚಿವ ಸಂಪುಟದಲ್ಲಿ ಸಚಿವರಾಗಿ ಅತ್ಯುತ್ತಮ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಹೆಮ್ಮೆಯ ನಾಯಕ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನವನ್ನು ನೀಡಬೇಕು ಎಂದು ಮಾದಿಗ ಸಮಾಜದ ಯುವ ಮುಖಂಡ ಹಾಗೂ ದಲಿತ ಸಂಘರ್ಷ ಸಮಿತಿ (ಭೀಮಘರ್ಜನೆ) ರಾಜ್ಯ ಸಂಘಟನಾ ಸಂಚಾಲಕ ನಾಗೇಶ ಹಲಗಿ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಿಯಾಂಕ್ ಖರ್ಗೆ ಅವರು ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಯುವ ಸಮುದಾಯಕ್ಕೆ ಸ್ಫೂರ್ತಿಯಾಗಿರುವ ಅವರಿಗೆ ಡಿಸಿಎಂ ಹುದ್ದೆ ನೀಡುವುದು ಸೂಕ್ತ ಎಂದಿದ್ದಾರೆ.
ಅವರು ಸಚಿವರಾಗಿ ಕೈಗೊಂಡಿರುವ ಜನಪರ ಹಾಗೂ ಪ್ರಗತಿಪರ ಕೆಲಸಗಳು ಇಡೀ ರಾಜ್ಯಕ್ಕೆ ಮಾದರಿಯಾಗಿವೆ. ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗಕ್ಕೆ ಮತ್ತಷ್ಟು ಬಲ ತುಂಬಲು ಮತ್ತು ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಅವರಿಗೆ ಡಿಸಿಎಂ ಸ್ಥಾನ ನೀಡುವುದು ಅತ್ಯಗತ್ಯವಾಗಿದೆ. ದಲಿತ, ಶೋಷಿತ ಹಾಗೂ ಯುವ ಸಮುದಾಯದ ಧ್ವನಿಯಾಗಿರುವ ಖರ್ಗೆ ಅವರಿಗೆ ಉನ್ನತ ಸ್ಥಾನಮಾನ ನೀಡುವ ಮೂಲಕ ಸರ್ಕಾರ ಸಾಮಾಜಿಕ ನ್ಯಾಯ ಎತ್ತಿಹಿಡಿಯಬೇಕು ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ