ಸೇಡಂ ಉಪವಿಭಾಗದ ಉಪ ಕೃಷಿ ನಿರ್ದೇಶಕರಾದ ಆನಂದಕುಮಾರ್ ಹಾಗೂ ತಾಲೂಕಿನ ಜಂಟಿ ಕೃಷಿ ನಿರ್ದೇಶಕರಾದ ಸಂಜೀವ ಕುಮಾರ್ ಮಾನ್ಕರ್ ಅವರ ನೇತೃತ್ವದಲ್ಲಿ ಕೃಷಿ ಅಧಿಕಾರಿಗಳಾದ ರವಿಂದ್ರ, ಕುಮಾರ ಮತ್ತು ಇತರ ಅಧಿಕಾರಿಗಳನ್ನೊಳಗೊಂಡ ತಂಡವು ಮೇ 29, ರಂದು ಪಟ್ಟಣದ ವಿವಿಧ ರಸಗೊಬ್ಬರ ಮತ್ತು ಬಿತ್ತನೆ ಬೀಜ ಮಾರಾಟ ಮಳಿಗೆಗಳಿಗೆ ಆಕಸ್ಮಿಕ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಪ್ರತಿಯೊಂದು ಕೃಷಿ ಪರಿಕರ ಮಾರಾಟ ಮಳಿಗೆಯಲ್ಲೂ ಕಡ್ಡಾಯವಾಗಿ ದರ ಪಟ್ಟಿ ಹಾಗೂ ದಾಸ್ತಾನು (Stock) ವಿವರಗಳನ್ನು ಒಳಗೊಂಡ ಬೋರ್ಡ್ ಅನ್ನು ರೈತರಿಗೆ ಕಾಣಿಸುವಂತೆ ಪ್ರದರ್ಶಿಸಬೇಕು.ರಸಗೊಬ್ಬರ ಮಾರಾಟ ಮಾಡುವಾಗ ನೈಜ ಗೋದಾಮು ದಾಸ್ತಾನು ಮತ್ತು ಪಿ.ಓ.ಎಸ್ (POS) ಯಂತ್ರದಲ್ಲಿನ ದಾಸ್ತಾನು ತಾಳೆಯಾಗಬೇಕು. ರೈತರಿಗೆ ಕಡ್ಡಾಯವಾಗಿ ಪಿ.ಓ.ಎಸ್ ಯಂತ್ರದ ಮೂಲಕವೇ ರಸಗೊಬ್ಬರ ವಿತರಿಸಬೇಕು ಹಾಗೂ ನ್ಯಾನೋ ಯೂರಿಯಾ ಮತ್ತು ನ್ಯಾನೋ ಡಿ.ಎ.ಪಿ ಬಳಕೆಯ ಬಗ್ಗೆ ಸೂಕ್ತ ಮಾಹಿತಿ ನೀಡಬೇಕು. ಬಿತ್ತನೆ ಬೀಜಗಳು, ರಸಗೊಬ್ಬರಗಳು ಹಾಗೂ ಕೀಟನಾಶಕಗಳನ್ನು ಸರ್ಕಾರ ನಿಗದಿಪಡಿಸಿದ ದರದಲ್ಲೇ ಮಾರಾಟ ಮಾಡಬೇಕು. ಯಾವುದೇ ಕಾರಣಕ್ಕೂ ಹೆಚ್ಚಿನ ದರ ವಸೂಲಿ ಮಾಡಬಾರದು.ಹೆಚ್ಚಿನ ದರ ವಸೂಲಿ ಮಾಡಿದರೆ ಪರವಾನಗಿ ರದ್ದು.
"ರೈತರಿಂದ ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುವುದು ಅಥವಾ ಕೃತಕ ಅಭಾವ ಸೃಷ್ಟಿಸುವುದು ಕಂಡುಬಂದಲ್ಲಿ ಅಂತಹ ಮಾರಾಟಗಾರರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಷ್ಟೇ ಅಲ್ಲದೆ, ಅವರ ವ್ಯಾಪಾರ ಪರವಾನಗಿಯನ್ನು (License) ತಕ್ಷಣದಿಂದಲೇ ರದ್ದುಗೊಳಿಸಲಾಗುವುದು" ಎಂದು ಅಧಿಕಾರಿಗಳು ಈ ಸಂದರ್ಭದಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ