ಜನಗಣತಿ ಕಾರ್ಯ ನಿರ್ವಹಿಸಿದ ಶಿಕ್ಷಕರಿಗೆ ಗಳಿಕೆ ರಜೆ ಹಾಗೂ ಬಾಕಿ ಗೌರವಧನ ಬಿಡುಗಡೆಗೆ ಮನವಿ.

ಚಿತ್ತಾಪುರ: ಭಾರತದ ಜನಗಣತಿ ಕಾರ್ಯದಲ್ಲಿ ಮನೆಗಣತಿ ಕಾರ್ಯ ನಿರ್ವಹಿಸಿದ ಶಿಕ್ಷಕರಿಗೆ ಗಳಿಕೆ ರಜೆ (Earned Leave) ಮಂಜೂರು ಮಾಡಬೇಕು ಹಾಗೂ ಬಾಕಿ ಉಳಿದ ಗೌರವಧನವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ವತಿಯಿಂದ ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

೨೦೨೬ನೇ ಸಾಲಿನ ಬೇಸಿಗೆ ರಜೆಯ ಅವಧಿಯಲ್ಲಿ ಮನೆಗಣತಿ ಕಾರ್ಯ ನಿರ್ವಹಿಸಿದ ಶಿಕ್ಷಕರಿಗೆ ಈಗಾಗಲೇ ತರಬೇತಿ ವೆಚ್ಚ/ಹಣ ಜಮೆಯಾಗಿದ್ದು, ಇದಕ್ಕಾಗಿ ತಾಲೂಕು ಶಿಕ್ಷಕರ ಪರವಾಗಿ ತಹಸೀಲ್ದಾರ್ ಅವರಿಗೆ ಸಂಘದ ಪದಾಧಿಕಾರಿಗಳು ಧನ್ಯವಾದಗಳನ್ನು ತಿಳಿಸಿದರು.

ಅದೇ ರೀತಿ, ಗಣತಿದಾರರಾಗಿ ಹಾಗೂ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸಿದ ಶಿಕ್ಷಕರಿಗೆ ಬಾಕಿ ಇರುವ ಗೌರವಧನವನ್ನು ಶೀಘ್ರವೇ ಬಿಡುಗಡೆ ಮಾಡಬೇಕು. ಜೊತೆಗೆ ಬೇಸಿಗೆ ರಜೆಯಲ್ಲಿ ಕಾರ್ಯನಿರ್ವಹಿಸಿದ್ದಕ್ಕಾಗಿ ಹಾಜರಾತಿ ಪ್ರಮಾಣ ಪತ್ರ (Attendance Certificate) ನೀಡಿ ಗಳಿಕೆ ರಜೆ ಮಂಜೂರು ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಮನವಿಯಲ್ಲಿ ಕೋರಲಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿತ್ತಾಪುರ ತಾಲೂಕು ಅಧ್ಯಕ್ಷರಾದ ಶಿವಾನಂದ ಸಾಲವಾರ ಹಾಗೂ ಪ್ರಧಾನ ಕಾರ್ಯದರ್ಶಿಯಾದ ಶರಣಪ್ಪ ಐಕೂರ ಸೇರಿದಂತೆ ಸಂಘದ ಪ್ರಮುಖರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Jtv kannada

ಜನತೆಯ ಸುದ್ದಿ ವಾಹಿನಿ, ನೇರ ದಿಟ್ಟ ನಿರಂತರ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು