ಎಎಪಿ ಜಿಲ್ಲಾಧ್ಯಕ್ಷರಾಗಿ ಜಗದೀಶ್ ಸಾಗರ ನೇಮಕ: ಅಧಿಕೃತ ಆದೇಶ.

ಚಿತ್ತಾಪುರ: ಆಮ್ ಆದ್ಮಿ ಪಾರ್ಟಿಯ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಜಗದೀಶ್ ಸಾಗರ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಪಕ್ಷದ ರಾಜ್ಯಾಧ್ಯಕ್ಷರು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು, ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಹಾಗೂ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹಾನಿ ಅವರು ಜಂಟಿ ಪ್ರಕಟಣೆಯಲ್ಲಿ ಈ ನೇಮಕಾತಿ ಆದೇಶವನ್ನು ಹೊರಡಿಸಿದ್ದು, ಕಲಬುರಗಿ ಜಿಲ್ಲೆಯಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಜವಾಬ್ದಾರಿಯನ್ನು ಸಾಗರ ಅವರಿಗೆ ವಹಿಸಲಾಗಿದೆ.

ಜಿಲ್ಲಾ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆಮ್ ಆದ್ಮಿ ಪಾರ್ಟಿಯ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವುದು, ಸ್ಥಳೀಯ ಜ್ವಲಂತ ಸಮಸ್ಯೆಗಳು ಹಾಗೂ ಸಾರ್ವಜನಿಕರ ಹಕ್ಕುಗಳಿಗಾಗಿ ಹೋರಾಟ ನಡೆಸುವುದು ನೂತನ ಅಧ್ಯಕ್ಷರ ಪ್ರಮುಖ ಆದ್ಯತೆಯಾಗಲಿದೆ. ಶೀಘ್ರದಲ್ಲೇ ತಾಲೂಕು ಮತ್ತು ಗ್ರಾಮ ಮಟ್ಟಗಳಲ್ಲಿ ನೂತನ ಪದಾಧಿಕಾರಿಗಳ ಸಮಿತಿ ರಚಿಸಿ, ಯುವಕರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವ ಮೂಲಕ ಎಎಪಿಗೆ ಹೊಸ ಚೈತನ್ಯ ತುಂಬಲಾಗುವುದು ಎಂದು ರಾಜ್ಯ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Jtv kannada

ಜನತೆಯ ಸುದ್ದಿ ವಾಹಿನಿ, ನೇರ ದಿಟ್ಟ ನಿರಂತರ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು