ಉತ್ತಮ ಸಾಧಕಿ' ಪ್ರಶಸ್ತಿ ಗೌರವ: ಸಂಘದಿಂದ ಹರ್ಷ

ಚಿತ್ತಾಪುರ: ಪಟ್ಟಣದ ಪ್ರಜಾ ಸೌಧದ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ, ಶಿಕ್ಷಣ ಇಲಾಖೆಯ ಭೀಮನಳ್ಳಿ ಕ್ಲಸ್ಟರ್‌ನ ಸಿಆರ್‌ಪಿ ವಿಜಯಲಕ್ಷ್ಮಿ ಹೊಸಮನಿ ಅವರಿಗೆ 'ಉತ್ತಮ ಸಾಧಕಿ' ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸರಕಾರಿ ಮತ್ತು ಅರೆ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಚಿಂಚನಸೂರ್ ಹಾಗೂ ಪದಾಧಿಕಾರಿಗಳು ತೀವ್ರ ಹರ್ಷ ವ್ಯಕ್ತಪಡಿಸಿದ್ದಾರೆ.

ಅವರ ಕರ್ತವ್ಯನಿಷ್ಠೆ, ಪರಿಶ್ರಮ, ಪ್ರಾಮಾಣಿಕ ಸೇವೆ ಹಾಗೂ ಉತ್ತಮ ಕಾರ್ಯನಿರ್ವಹಣೆಗೆ ಸಂದ ಈ ಗೌರವವು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ ಎಂದು ನಾಯಕರು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿದ ತಹಸೀಲ್ದಾರ್ ನಾಗಯ್ಯ ಹಿರೇಮಠ ಹಾಗೂ ಪ್ರೋತ್ಸಾಹ ಮತ್ತು ಸಹಕಾರ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ಅವರಿಗೆ ಸಂಘದ ವತಿಯಿಂದ ಕೃತಜ್ಞತೆಗಳನ್ನು ಸಲ್ಲಿಸಲಾಗಿದೆ.

Jtv kannada

ಜನತೆಯ ಸುದ್ದಿ ವಾಹಿನಿ, ನೇರ ದಿಟ್ಟ ನಿರಂತರ.

إرسال تعليق

أحدث أقدم