ಜುಡೋ ಬಂಜಾರಾ ಫೌಂಡೇಶನ್ ಅಧ್ಯಕ್ಷರಾಗಿ ಯುವರಾಜ ರಾಠೋಡ ನೇಮಕ.

ಚಿತ್ತಾಪುರ: ಜುಡೋ ಬಂಜಾರಾ ಫೌಂಡೇಶನ್ (ರಿ) ಸಂಘಟನೆಯ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ವಲಯ ಅಧ್ಯಕ್ಷರಾಗಿ ಯುವರಾಜ ತಂದೆ ಕಿಶನ ರಾಠೋಡ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

ಈ ಕುರಿತು ಜುಡೋ ಬಂಜಾರಾ ಫೌಂಡೇಶನ್‌ನ ಕಲಬುರಗಿ ಜಿಲ್ಲಾಧ್ಯಕ್ಷರಾದ ರಾಜು ಪವಾರ್ ಅವರು ನೇಮಕಾತಿ ಪತ್ರ ನೀಡಿದ್ದಾರೆ.

ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಯುವರಾಜ ರಾಠೋಡ ಅವರು ಜಿಲ್ಲಾ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ಸಹಯೋಗದೊಂದಿಗೆ ಸಂಘಟನೆಯ ಬಲವರ್ಧನೆಗೆ ಸಕ್ರಿಯವಾಗಿ ಶ್ರಮಿಸಬೇಕೆಂದು ಸೂಚಿಸಲಾಗಿದೆ. ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಯಶಸ್ವಿಯಾಗಿ ಕಾರ್ಯನಿರ್ವಹಿಸಲಿ ಎಂದು ಜಿಲ್ಲಾ ಘಟಕದ ಪದಾಧಿಕಾರಿಗಳು ಶುಭ ಹಾರೈಸಿದ್ದಾರೆ.

Jtv kannada

ಜನತೆಯ ಸುದ್ದಿ ವಾಹಿನಿ, ನೇರ ದಿಟ್ಟ ನಿರಂತರ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು