ತಾಲೂಕು ಮಟ್ಟದ ಚೆಸ್ ಸ್ಪರ್ಧೆ: ಜಿಲ್ಲಾ ಮಟ್ಟಕ್ಕೆ ಆಯ್ಕೆ

ಚಿತ್ತಾಪುರ: ಇಲ್ಲಿನ ತಾಲೂಕು ಮಟ್ಟದ ಕ್ರೀಡಾಕೂಟದ ಅಂಗವಾಗಿ ಆಯೋಜಿಸಲಾಗಿದ್ದ ಚೆಸ್ ಸ್ಪರ್ಧೆಯಲ್ಲಿ ಮೋರಾರ್ಜಿ ದೇಸಾಯಿ ವಸತಿ ಶಾಲೆ (ಚಿತ್ತಾಪುರ ಟೌನ್ ಎಸ್ ಸಿ 182) ವಿದ್ಯಾರ್ಥಿಗಳು ಅದ್ಭುತ ಸಾಧನೆ ಮಾಡುವ ಮೂಲಕ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಪ್ರವೀಣ್ ಕುಮಾರ್ ರಂಗಪ್ಪ ಪ್ರಥಮ ಬಹುಮಾನ ಪಡೆದುಕೊಂಡರೆ, ಸಚಿನ್ ತಂದೆ ಭೀಮರಾಯ ದ್ವಿತೀಯ ಬಹುಮಾನ ಗಳಿಸಿದ್ದಾರೆ. ಅದೇ ರೀತಿ 9ನೇ ತರಗತಿಯ ವಿದ್ಯಾರ್ಥಿನಿಯರಾದ ಅರ್ಚನಾ ತಂದೆ ಚಂದ್ರಪ್ಪ ಹಾಗೂ ವೈಷ್ಣವಿ ತಂದೆ ವಿಜಯಕುಮಾರ್ ಬಿರಾದಾರ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರತಿಭೆ ಪ್ರದರ್ಶಿಸಿದ ಈ ನಾಲ್ಕೂ ವಿದ್ಯಾರ್ಥಿಗಳು ಇದೀಗ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಪ್ರಾಂಶುಪಾಲರಾದ ಶ್ರೀ ಬಸವರಾಜ್ ಅವಂಟಿ, ದೈಹಿಕ ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮಿ ಡಿ. ಗೋನಾಲ್ ಸೇರಿದಂತೆ ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ, ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲೂ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿ ಶಾಲೆಗೆ ಕೀರ್ತಿ ತರಲಿ ಎಂದು ಹಾರೈಸಿದ್ದಾರೆ.

Jtv kannada

ಜನತೆಯ ಸುದ್ದಿ ವಾಹಿನಿ, ನೇರ ದಿಟ್ಟ ನಿರಂತರ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು