ಶಿಕ್ಷಕರ ದಿನಾಚರಣೆ' ಹಾಗೂ 'ಶಿಕ್ಷಕ ರತ್ನ' ಪ್ರಶಸ್ತಿ ಪ್ರದಾನ ಸಮಾರಂಭ

ಚಿತ್ತಾಪುರ: ಅನುದಾನ ರಹಿತ (ಖಾಸಗಿ) ಶಿಕ್ಷಣ ಸಂಸ್ಥೆ ಮತ್ತು ಆಡಳಿತ ಮಂಡಳಿಗಳ ಒಕ್ಕೂಟ ವತಿಯಿಂದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ "ಶಿಕ್ಷಕ ರತ್ನ" ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆಪ್ಟೆಂಬರ್ 19, ಶನಿವಾರದಂದು ಬೆಳಿಗ್ಗೆ 11:00 ಗಂಟೆಗೆ ಪಟ್ಟಣದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಒಕ್ಕೂಟದ ತಾಲೂಕು ಅಧ್ಯಕ್ಷ ಜಗದೇವ ದಿಗ್ಗಾಂವಕರ್ ಮತ್ತು ಕಾರ್ಯದರ್ಶಿ ರವಿ ಕುಲಕರ್ಣಿ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾವೂರಿನ ಶ್ರೀ ಸಿದ್ಧಲಿಂಗೇಶ್ವರ ಸಂಸ್ಥಾನ ಮಠದ ಶ್ರೀ ಮ.ನಿ.ಪ್ರ ಸಿದ್ಧಲಿಂಗ ಮಹಾ ಸ್ವಾಮಿಗಳು ಆಶೀರ್ವಚನ ನೀಡಲಿದ್ದು,  ಗೃಹ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಎಮ್. ಖರ್ಗೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಡಾ. ಸರ್ವಪಲ್ಲಿ ರಾಧಾಕೃಷ್ಣ ರವರ ಭಾವಚಿತ್ರಕ್ಕೆ ಪೂಜೆ ವಿಧಾನ ಪರಿಷತ್ ಸದಸ್ಯ  ಶುಶೀಲ ನಮೋಶಿ ಅವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ  ಡಿಡಿಪಿಐ ಶಂಕ್ರಮ್ಮ ಧವಳಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ, ಖ್ಯಾತ ವೈದ್ಯ ಹಾಗೂ ಸಮಾಜ ಸೇವಕ ಡಾ. ಫಾರೂಕ್ ಮಣ್ಣೂರ, ಉದ್ಯಮಿ ಶಿವರೆಡ್ಡಿಗೌಡ ಪಾಟೀಲ್ ಹಾಗೂ ಒಕ್ಕೂಟದ ಜಿಲ್ಲಾಧ್ಯಕ್ಷ ಸುನಿಲ ಹುಡಗಿ ಉಪಸ್ಥಿತರಿರಲಿದ್ದಾರೆ. ಅಲ್ಲದೆ, ಗೌರವ ಸಲಹೆಗಾರರಾದ ನಾಗರೆಡ್ಡಿ ಪಾಟೀಲ್ ಕರದಾಳ, ಲಿಂಗರೆಡ್ಡಿಗೌಡ ಬಾಸರೆಡ್ಡಿ ನಾಲ್ವಾರ, ಅಮರೇಶ್ವರಿ ಬಾಬುರಾವ ಚಿಂಚನಸೂರ ಹಾಗೂ ಡಾ. ಚಂದ್ರಶೇಖರ ಕಾಂತ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ತಾಲೂಕಿನ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು, ಆಡಳಿತ ಮಂಡಳಿಯವರು, ಶಿಕ್ಷಕ ವೃಂದ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕೋರಿದ್ದಾರೆ.

Jtv kannada

ಜನತೆಯ ಸುದ್ದಿ ವಾಹಿನಿ, ನೇರ ದಿಟ್ಟ ನಿರಂತರ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು