ಕೆಸಿಎಲ್ ಫ್ಯಾಕ್ಟರಿ ಬಳಿ ಸಾರಿಗೆ ಬಸ್ ನಿಲ್ಲಿಸಲು ಆಗ್ರಹ.

ಚಿತ್ತಾಪುರ: ಪಟ್ಟಣದ ಬಸ್ ನಿಲ್ದಾಣದಿಂದ ದಿಗ್ಗಾಂವ ಗ್ರಾಮಕ್ಕೆ ನಿತ್ಯ ಸಂಚರಿಸುವ ಸರ್ಕಾರಿ ಸಾರಿಗೆ ಬಸ್‌ಗಳನ್ನು ಮಾರ್ಗ ಮಧ್ಯದ 'ದಿಗ್ಗಾಂವ ಕ್ರಾಸ್, ಕೆಸಿಎಲ್ ಫ್ಯಾಕ್ಟರಿ' ಬಳಿ ಕಡ್ಡಾಯವಾಗಿ ನಿಲ್ಲಿಸುವಂತೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹೋರಾಟ ಸಮಿತಿ ತಾಲ್ಲೂಕು ಘಟಕದ ವತಿಯಿಂದ ಬಸ್ ಡಿಪೋ ವ್ಯವಸ್ಥಾಪಕರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಾಣಗೊಂಡಿರುವ 320 ಮನೆಗಳಲ್ಲಿ ಅನೇಕ ಕುಟುಂಬಗಳು ವಾಸಿಸುತ್ತಿದ್ದು, ಈ ಭಾಗದಲ್ಲಿ ನಿತ್ಯ ನೂರಾರು ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ಸಂಚರಿಸುತ್ತಾರೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಸ್‌ಗಾಗಿ ರಸ್ತೆಬದಿಯಲ್ಲಿ ನಿಂತು ಕೈ ತೋರಿಸಿದರೂ ಬಸ್‌ಗಳು ನಿಲ್ಲಿಸದೆ ತೆರಳುತ್ತಿರುವುದರಿಂದ, ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ. ಅಲ್ಲದೆ ಹಿರಿಯ ನಾಗರಿಕರು, ಮಹಿಳೆಯರು ಹಾಗೂ ಕಾರ್ಮಿಕರು ತೀವ್ರ ಕಿರುಕುಳ ಅನುಭವಿಸುವಂತಾಗಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಂಡು, ದಿಗ್ಗಾಂವ ಕ್ರಾಸ್ ಕೆಸಿಎಲ್ ಫ್ಯಾಕ್ಟರಿ ಹತ್ತಿರ ಬಸ್‌ಗಳು ನಿಲ್ಲುವಂತೆ ವ್ಯವಸ್ಥೆ ಮಾಡಬೇಕೆಂದು ಸಮಿತಿಯ ಅಧ್ಯಕ್ಷ ಲಕ್ಷ್ಮೀಕಾಂತ ತಾಂಡೂರಕರ್ ಅವರು ವಿನಂತಿಸಿದ್ದಾರೆ.

Jtv kannada

ಜನತೆಯ ಸುದ್ದಿ ವಾಹಿನಿ, ನೇರ ದಿಟ್ಟ ನಿರಂತರ.

إرسال تعليق

أحدث أقدم