ಚಿತ್ರಕಲಾ ಸ್ಪರ್ಧೆ: ಅಕ್ಷತಾಗೆ ತೃತೀಯ ಸ್ಥಾನ, ವಿಭಾಗ ಮಟ್ಟಕ್ಕೆ ಆಯ್ಕೆ

ಚಿತ್ತಾಪುರ: ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (MDRS) ವಿದ್ಯಾರ್ಥಿನಿ ಅಕ್ಷತಾ ತಂದೆ: ಸಿದ್ದರಾಮ ತೃತೀಯ ಸ್ಥಾನ ಪಡೆದು, ವಿಭಾಗ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದುಕೊಂಡಿದ್ದಾರೆ.

ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ, ಅಂತರ್ಜಲ ನಿರ್ದೇಶನಾಲಯ ಬೆಂಗಳೂರು, ಹಿರಿಯ ಭೂ ವಿಜ್ಞಾನಿ ಜಿಲ್ಲಾ ಅಂತರ್ಜಲ ಕಚೇರಿ ಕಲಬುರಗಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ಇವರ ಸಂಯುಕ್ತ ಆಶ್ರಯದಲ್ಲಿ ಕಲಬುರಗಿಯ ಸರ್ಕಾರಿ ಕನ್ಯಾ ಪ್ರೌಢಶಾಲೆಯ ಆವರಣದಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

‘ನೀರಿದ್ದರೆ ನಾಳೆ’ ಘೋಷವಾಕ್ಯದಡಿ ‘ನಮ್ಮ ಭೂಮಿ, ನಮ್ಮ ನೀರು, ನಮ್ಮ ಶಕ್ತಿ’ ಎಂಬ ವಿಷಯದ ಕುರಿತು 8 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಅಕ್ಷತಾ ತಮ್ಮ ಅಪೂರ್ವ ಕಲಾಕೃತಿಯ ಮೂಲಕ ಈ ಸಾಧನೆ ಮಾಡಿದ್ದಾರೆ.

ಯಶಸ್ಸಿನೊಂದಿಗೆ ದಿನಾಂಕ ಸೆಪ್ಟೆಂಬರ್ 11 ರಂದು ರಾಯಚೂರಿನಲ್ಲಿ ನಡೆಯಲಿರುವ ವಿಭಾಗ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಅವರು ಭಾಗವಹಿಸಲಿದ್ದಾರೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಪ್ರಾಂಶುಪಾಲರಾದ ಬಸವರಾಜ್ ಅವಂಟಿ, ಚಿತ್ರಕಲಾ ಶಿಕ್ಷಕರಾದ ನಟರಾಜ್ ಎಂ. ಶಿಲ್ಪಿ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ, ಮುಂದಿನ ಸ್ಪರ್ಧೆಗೆ ಶುಭ ಕೋರಿದ್ದಾರೆ.

Jtv kannada

ಜನತೆಯ ಸುದ್ದಿ ವಾಹಿನಿ, ನೇರ ದಿಟ್ಟ ನಿರಂತರ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು