ದಂಡೋತಿ ಜಿ.ಪಂ. ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ಗೆ ಇಬ್ರಾಹಿಂ ಕೋಳದ್ ದಿಗ್ಗಾಂವ ಮನವಿ.

ಚಿತ್ತಾಪುರ: ತಾಲೂಕಿನ ದಂಡೋತಿ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಬಲ ಆಕಾಂಕ್ಷಿಯಾಗಿದ್ದು, ಮುಂಬರುವ ಚುನಾವಣೆಯಲ್ಲಿ ತಮಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ಅಲ್ಪಸಂಖ್ಯಾತರ ಮೋರ್ಚಾ ತಾಲೂಕು ಅಧ್ಯಕ್ಷ ಇಬ್ರಾಹಿಂ ಕೋಳದ್ ದಿಗ್ಗಾಂವ ಅವರು ಪಕ್ಷದ ತಾಲೂಕು ಹಾಗೂ ಜಿಲ್ಲಾ ಮುಖಂಡರಲ್ಲಿ ಮನವಿ ಮಾಡಿದ್ದಾರೆ.

ಪಟ್ಟಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಅಲ್ಪಸಂಖ್ಯಾತರಿಗೆ ಇಲ್ಲಿಯವರೆಗೆ ಅವಕಾಶ ನೀಡಲಾಗಿಲ್ಲ. ತಮಗೆ ಸಾರ್ವಜನಿಕ ಸೇವೆ ಮಾಡುವ ಉದ್ದೇಶವಿರುವುದರಿಂದ ಈ ಬಾರಿ ತಾವೂ ಸ್ಪರ್ಧೆಯ ಆಕಾಂಕ್ಷಿಯಾಗಿದ್ದು, ತಮಗೆ ಅವಕಾಶ ನೀಡಬೇಕೆಂದು ಕೋರಿದರು.

ರಾಜಕೀಯದ ಅರಿವು ಬಂದಾಗಿನಿಂದಲೂ ತಾವು ಬಿಜೆಪಿಯಲ್ಲಿದ್ದು, ಇಲ್ಲಿಯವರೆಗೆ ಪಕ್ಷದ ಸಂಘಟನೆ ಹಾಗೂ ಜನರ ಸೇವೆಯನ್ನು ಪ್ರಾಮಾಣಿಕವಾಗಿ ಮಾಡಿಕೊಂಡು ಬಂದಿರುವುದಾಗಿ ತಿಳಿಸಿದರು. ಮುಂದೆಯೂ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶವಿದ್ದು, ಜೀವನದ ಕೊನೆಯ ಉಸಿರಿರುವವರೆಗೂ ಬಿಜೆಪಿಯಲ್ಲೇ ಇರುವುದಾಗಿ ಸ್ಪಷ್ಟಪಡಿಸಿದರು.

ಪಕ್ಷಕ್ಕೆ ತಾವು ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ದಂಡೋತಿ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ತಮಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ಇಬ್ರಾಹಿಂ ಕೋಳದ್ ದಿಗ್ಗಾಂವ ಅವರು ಮುಖಂಡರಲ್ಲಿ ವಿನಂತಿಸಿಕೊಂಡಿದ್ದಾರೆ.

Jtv kannada

ಜನತೆಯ ಸುದ್ದಿ ವಾಹಿನಿ, ನೇರ ದಿಟ್ಟ ನಿರಂತರ.

إرسال تعليق

أحدث أقدم