ಯೋಜನೆಗಳ ಲಾಭ ಜನಸಾಮಾನ್ಯರಿಗೆ ತಲುಪಿಸಿ: ಭೀಮಣ್ಣ ಸಾಲಿ ಕರೆ.

ಚಿತ್ತಾಪುರ: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಪಂಚ್ ಗ್ಯಾರಂಟಿ ಯೋಜನೆಗಳ ಲಾಭವನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸವನ್ನು ಪ್ರತಿಯೊಬ್ಬರೂ ಮಾಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಕರೆ ನೀಡಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ 'ಪಂಚ್ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ'ದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಂಚ್ ಗ್ಯಾರಂಟಿ ಯೋಜನೆಗಳ ಲಾಭವು ಮನೆ ಮನೆಗೆ ತಲುಪುವ ನಿಟ್ಟಿನಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಇದೇ ವೇಳೆ ಮಾತನಾಡಿದ ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಅವರು, "ಪಂಚ್ ಗ್ಯಾರಂಟಿ ಸಮಿತಿಗೆ ನಾಮನಿರ್ದೇಶನಗೊಂಡ ಸದಸ್ಯರು ತಮ್ಮ ಅಧಿಕಾರಾವಧಿಯಲ್ಲಿ ಉತ್ತಮ ಕೆಲಸ ಮಾಡಬೇಕು. ಜನಸಾಮಾನ್ಯರಿಗೆ ಈ ಯೋಜನೆಗಳ ಪ್ರಯೋಜನ ದೊರಕುವಂತೆ ನೋಡಿಕೊಳ್ಳುವುದು ಪ್ರಮುಖ ಕರ್ತವ್ಯವಾಗಿದೆ. ಸ್ಥಾನಮಾನ ಚಿಕ್ಕದಿರಲಿ ಅಥವಾ ದೊಡ್ಡದಿರಲಿ, ನೀಡಿದ ಜವಾಬ್ದಾರಿಯನ್ನು ನಿಷ್ಠೆಯಿಂದ ಹಾಗೂ ಪ್ರಾಮಾಣಿಕವಾಗಿ ನಿರ್ವಹಿಸುವುದು ಅತ್ಯಗತ್ಯ" ಎಂದು ಕಿವಿಮಾತು ಹೇಳಿದರು.

ಪಂಚ್ ಗ್ಯಾರಂಟಿ ಸಮಿತಿ ಸದಸ್ಯರಿಗೆ ಸನ್ಮಾನ:
ಕಾರ್ಯಕ್ರಮದಲ್ಲಿ ಪಂಚ್ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಬೊಮ್ಮನಹಳ್ಳಿಕರ್, ಸದಸ್ಯರಾದ ವೆಂಕಟೇಶ್ ಕುಲಕರ್ಣಿ ಅಲ್ಲೂರ (ಕೆ), ರವೀಂದರೆಡ್ಡಿ ಭಂಕಲಗಿ, ಸೋಮಶೇಖರ ಟೋಕಾಪೂರ, ವಿನ್ಕುಮಾರ್ ಜೈಪಾಲ ದೊಡ್ಡಮನಿ, ರಮೇಶ್ ಹಡಪದ ಕೊಳ್ಳೂರ, ಮಹಮ್ಮದ ಇಸಾಕ್ ಅಬ್ದುಲ್ ನಬಿ ದಂಡೋತಿ, ಸುರೇಶ ಗುತ್ತೇದಾರ ಕರದಾಳ, ಶರಣಬಸಪ್ಪ ಅರಣಕಲ್ ಭಾಗೋಡಿ, ಸಿದ್ಧಲಿಂಗ ಮುಗಟಿ ಮರಗೋಳ ಹಾಗೂ ಸುಭಾಶ್ಚಂದ್ರ ಪವಾರ ದಿಗಾಂವ ಅವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಶಿವರುದ್ರ ಭೀಂಳ್ಳಿ, ತಾಪಂ ಮಾಜಿ ಅಧ್ಯಕ್ಷ ಜಗನ್ನಾಥಗೌಡ ರಾಮತೀರ್ಥ, ಯುವ ಕಾಂಗ್ರೆಸ್ ಅಧ್ಯಕ್ಷ ದೇವು ಯಾಬಾಳ, ಸಿದ್ದಣ್ಣಗೌಡ ಆರ್.ಡಿ, ಶಿವಯೋಗಿ ರಾವೂರ, ಲಕ್ಷ್ಮೀಕಾಂತ ಸಾಲಿ, ಇಸ್ಮಾಯಿಲ್ ಕಮರವಾಡಿ, ನಾಗೇಂದ್ರ ಚಪಾಟ್ಲೆ, ವಿಶ್ವನಾಥ ಹಾದಿಮನಿ, ಪ್ರಭು ಹಲಕರ್ಟಿ, ಶರಣಪ್ಪ ಕೋರವಾರ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ವಿಠಲ್ ಕಟ್ಟಿಮನಿ ಕಾರ್ಯಕ್ರಮ ನಿರೂಪಿಸಿದರೆ, ಸಂಜಯ್ ಬುಳಕರ್ ವಂದಿಸಿದರು.

Jtv kannada

ಜನತೆಯ ಸುದ್ದಿ ವಾಹಿನಿ, ನೇರ ದಿಟ್ಟ ನಿರಂತರ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು