ಶುಕ್ರವಾರ, ಫೆಬ್ರವರಿ 6, 2026

ಭಾಗೋಡಿಯಲ್ಲಿ ಅಂಬಿಗರ ಚೌಡಯ್ಯ ಮೂರ್ತಿ ಅನಾವರಣ,

ಚಿತ್ತಾಪುರ: ತಾಲೂಕಿನ ಭಾಗೋಡಿ ಗ್ರಾಮದಲ್ಲಿ
ಕೋಲಿ ಸಮಾಜದ ವತಿಯಿಂದ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಅನಾವರಣ ಸಮಾರಂಭವನ್ನು ದಿ.8 ರಂದು ಬೆಳಗ್ಗೆ 10.30ಕ್ಕೆ ಅದ್ದೂರಿಯಾಗಿ ನಡೆಯಲಿದೆ ಎಂದು ಕೋಲಿ ಸಮಾಜದ ಮುಖಂಡ ದೇವೇಂದ್ರ ನಾಟೀಕಾರ, ಭಾಗೋಡಿ ಅಧ್ಯಕ್ಷ ದೇವಿಂದ್ರ ಹಾಸಬಾ, ತಾಲೂಕು ಕಾರ್ಯದರ್ಶಿ ಶರಣು ಅರಣಕಲ್, ಯುವ ಅಧ್ಯಕ್ಷ ಮಲ್ಲಿಕಾರ್ಜುನ ಅಲ್ಲೂರಕರ್ ಅವರು ಜಂಟಿಯಾಗಿ ಹೇಳಿದರು.

ಪಟ್ಟಣದ ಅಂಬಿಗರ ಚೌಡಯ್ಯ ಸಮುದಾಯ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 12ನೇ ಶತಮಾನದ ನಿಜಶರಣ ಅಂಬಿಗರ ಚೌಡಯ್ಯನವರ ವಚನಗಳ ಪ್ರಚಾರಕ್ಕಾಗಿ ಹಾಗೂ ಕೋಲಿ ಸಮಾಜದ ಸಂಘಟನೆಗಾಗಿ ಮತ್ತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಗ್ರಾಮದಲ್ಲಿ ಎಲ್ಲರೂ ಒಗ್ಗೂಡಿ ಮೂರ್ತಿ ಅನಾವರಣ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ, ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಂಧುಗಳು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರೆ

ಪೂಜ್ಯ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ನರಸಿಪುರ, ತೊನಸನಳ್ಳಿ ಶ್ರೀ ಡಾ. ಮಲ್ಲಣ್ಣಪ್ಪ ಮಹಾಸ್ವಾಮಿಗಳು, ಗುರುಮಠಕಲ್ ಶ್ರೀ ಶಾಂತವೀರ ಗುರು ಮುರಘರಾಜೇಂದ್ರ ಮಹಾಸ್ವಾಮಿಗಳು, ಪೂಜ್ಯ ಮಲ್ಲಿಕಾರ್ಜುನ ಮುತ್ಯಾ ಮಹಲರೋಜಾ, ಪೂಜ್ಯ ಪರಶುರಾಮ ಮುತ್ಯಾ ಭಾಗೋಡಿ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವಿಧಾನ ಪರಿಷತ್‌ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರು ಉದ್ಘಾಟಿಸುವರು, ನಿಜ ಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ ಅವರು ಧ್ವಜಾರೋಹಣ ನೆರವೇರಿಸುವರು ಎಂದು ಹೇಳಿದರು.

ಪಿಎಲ್‌'ಡಿ ಬ್ಯಾಂಕ್‌ ಅಧ್ಯಕ್ಷ ಭೀಮಣ್ಣ ಸಾಲಿ, ಕೆಪಿಸಿಸಿ ಸದಸ್ಯ ನಾಗರಡ್ಡಿ ಪಾಟೀಲ ಕರದಾಳ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ ಮರಗೋಳ ಅವರು ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವರು. ಕೆಪಿಸಿಸಿ ಕಾರ್ಯದರ್ಶಿ ರಾಜಗೋಪಾಲ ರೆಡ್ಡಿ, ರಾಜ್ಯ ಅಪೇಕ್ಸ್‌ ಬ್ಯಾಂಕ್ ನಿರ್ದೇಶಕ ಸುನೀಲ ದೊಡ್ಡಮನಿ, ಉದ್ಯಮಿ ಶಿವರಾಯ ಕಮಕನೂರ ಅವರು ಮಾತಾ ಮಾಣಿಕೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವರು. ಕೂಡು ಒಕ್ಕಲಿಗ ಸಮಾಜದ ರಾಜ್ಯಾಧ್ಯಕ್ಷ ಶಿವರಾಜ ಪಾಟೀಲ ಕಲಗುರ್ತಿ, ಕುರುಬ ಸಮಾಜದ ತಾಲೂಕು ಅಧ್ಯಕ್ಷ ಬಸವರಾಜ ಹೊಸಳ್ಳಿ, ಉದ್ಯಮಿ ಯಲ್ಲಾಲಿಂಗ ಪೂಜಾರಿ ಅವರು ದಿ.ವಿಠಲ್ 
ಹೇರೂರು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವರು.

 ರಾಯಚೂರು ಕೃಷಿ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಡಾ. ಮಹಾಂತಗೌಡ ಎಸ್. ಪಾಟೀಲ, ಅಂಬಿಗರ ಚೌಡಯ್ಯ ಜಯಂತ್ಯೋತ್ಸವ ಸಮಿತಿ ಜಿಲ್ಲಾಧ್ಯಕ್ಷ ಜಯಪ್ರಕಾಶ ಕಮಕನೂರ, ಜಿಪಂ ಮಾಜಿ ಸದಸ್ಯ ಅರವಿಂದ ಚವ್ಹಾಣ, ಕೋಲಿ ಕಬ್ಬಲಿಗ ಎಸ್‌.ಟಿ.ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಲಚ್ಚಪ್ಪ ಜಮಾದಾರ, ಬಿಜೆಪಿ ರಾಜ್ಯ ಹಿಂದುಳಿದ ಮೋರ್ಚಾ ಕಾರ್ಯದರ್ಶಿ ಅವ್ವಣ್ಣ ಮ್ಯಾಕೇರಿ, ಜಿಲ್ಲಾಧ್ಯಕ್ಷ ರವಿರಾಜ ಕೋರವಿ, ತಾಲೂಕು ಅಧ್ಯಕ್ಷ ಶಿವಕುಮಾರ ಯಾಗಾಪೂರ ಅವರು ಜ್ಯೋತಿ ಬೆಳಗಿಸುವರು, ಕೋಲಿ ಸಮಾಜ ಹಿರಿಯ ಮುಖಂಡ ರಾಜೇಂದ್ರಪ್ಪ ಅರಣಕಲ್‌ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕೋಲಿ ಸಮಾಜದ ಯುವ ಅಧ್ಯಕ್ಷ ರಾಜೇಶ್‌ ಹೊಳಿಕಟ್ಟಿ, ಮುಖಂಡರಾದ ದೇವಿಂದ್ರ ಡೋಣಗಾಂವ, ನಾಗರಾಜ ಬೆಣ್ಣೂರ, ಶರಣಪ್ಪ ಹಾಸಬಾ, ಕಾಮೇಶ್, ಸಂತೋಷ ನದಿಮುಲ್‌, ನಾಗರಾಜ ಹಾಸಬಾ, ಕಾಶಿನಾಥ ಭಂಗಿ ಸೇರಿದಂತೆ ಇತರರು ಇದ್ದರು.

ಬಜೆಟ್‌ಗೆ ಮುಖಂಡ ರಾಮತೀರ್ಥ ಮೆಚ್ಚುಗೆ.


ಚಿತ್ತಾಪುರ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 9ನೇ ಬಾರಿಗೆ ಬಜೆಟ್ ಮಂಡಿಸುವಲ್ಲಿ ಯಶಸ್ವಿ ಹೆಜ್ಜೆ ಇಟ್ಟಿದ್ದಾರೆ ಎಂದು ಬಿಜೆಪಿ ಮುಖಂಡ ಅಯ್ಯಪ್ಪ ರಾಮತೀರ್ಥ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿದ ಅವರು, ಈ ಬಾರಿ ಕರ್ಬಾಟಕ ರಾಜ್ಯಕ್ಕೆ 2 ಹೈಸ್ಪೀಡ್ ರೈಲು ಘೋಷಿಸಿದ್ದಾರೆ. ದೇಶದ ಸಮಗ್ರ ಅಭಿವೃದ್ಧಿಗಾಗಿ ರಕ್ಷಣಾ, ಗೃಹ, ಕೃಷಿ ಸಾರಿಗೆ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ಶಿಕ್ಷಣ, ವಿಮೆ, ಪ್ರವಾಸೋದ್ಯಮ, ಕೈಗಾರಿಕೆ ಹಾಗೂ ಎಐ ಆಧುನಿಕ ತಂತ್ರಜ್ಞಾನಕ್ಕೆ ಒತ್ತು ನೀಡಿರುವುದು ಹಾಗು ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಿರುವುದು ಸಂತಸ.ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಉತ್ತೇಜನಕ್ಕಾಗಿ 10 ಸಾವಿರ ಕೋಟಿ, ಬಯೋ ಫಾರ್ಮ ಗೆ 10 ಸಾವಿರ ಕೋಟಿ, ಚಾಂಪಿಯಾನಿಗಳಿಗಾಗಿ 10 ಸಾವಿರ ಕೋಟಿ ಮೀಸಲಿಟ್ಟಿದ್ದಾರೆ.

ಕ್ರೀಡಾಪಟುಗಳಿಗೆ ಖೇಲ್ ಇಂಡಿಯಾ ಯೋಜನೆ ಘೋಷಣೆ, ಎಸ್‌ಎಚ್‌ ಇ ಮಾರ್ಟ್ ಗಳ ಮೂಲಕ ಮಹಿಳಾ ಸಬಲೀಕರಣ, ಮುಂದಿನ 5 ವರ್ಷದಲ್ಲಿ 20 ಹೊಸ ಜಲಮಾರ್ಗ ನಿರ್ಮಾಣದ ಯೋಜನೆ ಕಾರ್ಯ ನಡೆಯಲಿದೆ ಎಂದಿದ್ದಾರೆ.

ಅತಿವೃಷಿಯಿಂದ ತತ್ತರಿಸಿದ ದೇಶದ ರೈತ, ಕೃಷಿ ಸಾಲ ಮನ್ನಾ ಮಾಡಬಹುದೆಂದು ನಿರೀಕ್ಷೆ ಮಾಡಲಾಗಿದ್ದು, ಅದು ಈಡೇರಲಿಲ್ಲ ಎಂಬ ತುಸು ನಿರಾಶೆಯ ಬೆನ್ನಲ್ಲೇ ಕರಾವಳಿ ಭಾಗದ ರೈತರು ಬೆಳೆಯುವ ಗೋಡಂಬಿ, ಕೋಕೋ, ತೆಂಗು ಮುಂತಾದ ಬೆಳೆಗಳಿಗೆ ಕೇಂದ್ರದ ಬೆಂಬಲದ ಅಭಯಹಸ್ತ ಹಾಗೂ ಸ್ವಾವಲಂಬಿ ಬದುಕು ರೈತನಿಗೆ ಸಂಧಾನ ತಂದಿದೆ. ತಂಬಾಕು, ಮದ್ಯದಂತಹ ಹಾನಿಕಾರಕ ಮಾದಕ ದ್ರವ್ಯಗಳ ಮೇಲೆ ಹೆಚ್ಚಿನ ಸುಂಕ ವಿಧಿಸಿ 17 ಕ್ಯಾನ್ಸರ್ ಔಷಧಿಗಳ ಸುಂಕ ವಿನಾಯ್ತಿ ನೀಡಿದ್ದು, ಅದರಲ್ಲಿ 7 ಔಷಧಗಳ ಮೇಲೆ ತೆರಿಗೆಯನ್ನೇರದ್ದು ಮಾಡಿದ್ದು ಉತ್ತಮ. ಹೀಗೆ ಬಜೆಟ್ ನಲ್ಲಿ ಹಲವಾರು ಉಪಯುಕ್ತ ಯೋಜನೆ ನೀಡಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಚಿವ ಸಂತೋಷ್ ಲಾಡ್ ನಾಲಿಗೆ ಹಿಡಿತವಿರಲಿ: ಮುರಳಿಕುಮಾರ.

ಚಿತ್ತಾಪುರ: ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಕಾರ್ಮಿಕ ಇಲಾಖೆಯ ಸಚಿವರಾದ ಸಂತೋಷ ಲಾಡ್‌ ರವರು ಬಾರ್ಬರ್ ಅಂದರೆ ಹಜಾಮ ಎಂಬ ಹಡಪದ ಸಮಾಜದ ನಿಷೇಧಿತ ಪದ ಬಳಸಿ ಅಸಂಘಟಿತ ವಲಯದ ಕಾರ್ಮಿಕರಾದ ಕ್ಷೌರಿಕರಿಗೆ ಅವಮಾನಿಸಿದ್ದಾರೆ ಜವಾಬ್ದಾರಿಯುತ ಸಚಿವರು ಶಾಸಕರುಗಳೆ ನಿಷೇಧಿತ ಪದ ಬಳಸಿ ಅನುಮಾನಿಸುತ್ತಿದ್ದಾರೆ.

ತಕ್ಷಣ ಕ್ಷಮೆಯಾಚಿಸಬೇಕು ವಿಧಾನ ಸಭೆ ಅಧಿವೇಶನದಲ್ಲಿ ಕಾನೂನು ಜಾರಿಗೆ ತರುವ ಕುರಿತು ಚರ್ಚಿಸಲಿ ಎಂದು ಹಡಪದ ಸಮಾಜದ ನಗರ ಅಧ್ಯಕ್ಷ ಮುರಳಿಕುಮಾರ ಸಾತನೂರ ಪತ್ರಿಕೆ ಮುಖಾಂತರ ಒತ್ತಾಯಿಸಿದ್ದಾರೆ.

ಶುಕ್ರವಾರ, ಜನವರಿ 30, 2026

ನೂತನ ಅಧ್ಯಕ್ಷರಾಗಿ ಅಣ್ಣಾರಾಯ ಇವಣಿ ನೇಮಕ.

ಚಿತ್ತಾಪುರ: ನಾಡು-ನುಡಿ ಹಾಗೂ ಸರ್ಕಾರಿ ಕನ್ನಡ ಶಾಲೆಗಳ ಸಂರಕ್ಷಣೆಗಾಗಿ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ “ಕನ್ನಡ ಶಾಲೆ ಉಳಿಸಿ-ಬೆಳೆಸಿ” ಅಭಿಯಾನದ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಅಣ್ಣಾರಾಯ ಇವಣಿ ಅವರನ್ನು ನೇಮಕ ಮಾಡಲಾಗಿದೆ ಎಂದು ಅಭಿಯಾನದ ರಾಜ್ಯಾಧ್ಯಕ್ಷ ಉನೈಸ್ ಪೆರಾಜೆ ತಿಳಿಸಿದ್ದಾರೆ.

ಕನ್ನಡ ಶಾಲೆಗಳ ಉಳಿವಿಗಾಗಿ ಜನಜಾಗೃತಿ ಮೂಡಿಸುವುದು, ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದು ಹಾಗೂ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವ ಪವಿತ್ರ ಉದ್ದೇಶದೊಂದಿಗೆ ಈ ಅಭಿಯಾನವು ರಾಜ್ಯಮಟ್ಟದಲ್ಲಿ ಕಾರ್ಯಾಚರಿಸುತ್ತಿದೆ. ಸಂಘಟನೆಯ ರಾಜ್ಯ ನಾಯಕರು ಹಾಗೂ ಕಾರ್ಯಕರ್ತರ ಒಮ್ಮತದ ನಿರ್ಧಾರದಂತೆ ಅಣ್ಣಾರಾಯ ಇವಣಿ ಅವರಿಗೆ ಈ ಮಹತ್ವದ ಜವಾಬ್ದಾರಿಯನ್ನು ಹಸ್ತಾಂತರಿಸಲಾಗಿದೆ.

ನೂತನ ಅಧ್ಯಕ್ಷ ಅಣ್ಣಾರಾಯ ಇವಣಿ ಮಾತನಾಡಿ "ಕನ್ನಡ ಶಾಲೆಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ನಾಡು-ನುಡಿ ಉಳಿಸುವ ಈ ಹೋರಾಟದಲ್ಲಿ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಹಾಗೂ ಕನ್ನಡಪರ ಸಂಘಟನೆಗಳನ್ನು ಒಗ್ಗೂಡಿಸಿಕೊಂಡು ಕಲಬುರಗಿ ಜಿಲ್ಲೆಯನ್ನು ರಾಜ್ಯದಲ್ಲೇ ಮಾದರಿಯಾಗಿ ರೂಪಿಸಲಾಗುವುದು. ಜಿಲ್ಲೆಯ ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ನಿರಂತರವಾಗಿ ಶ್ರಮಿಸುತ್ತೇನೆ," ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಂಗಳವಾರ, ಜನವರಿ 27, 2026

ಕ್ರಿಕೆಟ್ ಎಲ್ಲರಿಗೂ ಅಚ್ಚುಮೆಚ್ಚಿನ ಕ್ರೀಡೆ: ಮತ್ತಿಮುಡು.

ಚಿತ್ತಾಪುರ: ಹಲವು ಕ್ರೀಡೆಗಳಲ್ಲಿಯೇ ಕ್ರಿಕೆಟ್ ಚಿಕ್ಕವರಿಂದ ಹಿಡಿದು ದೊಡ್ಡವರವರೆಗೆ ಎಲ್ಲರಿಗೂ ಅಚ್ಚುಮೆಚ್ಚಿನ ಕ್ರೀಡೆ ಎಂದು ತಾಲೂಕು ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಗುಂಡು ಮತ್ತಿಮುಡು ಹೇಳಿದರು.

ತಾಲೂಕಿನ ಕಾಟಮ್ಮದೇವರಹಳ್ಳಿ ಗ್ರಾಮದಲ್ಲಿ ಶ್ರೀ ರೇಣುಕಾ ಪರಮೇಶ್ವರಿ (ಯಲ್ಲಮ್ಮತಾಯಿ) 74ನೇ ಜಾತ್ರಾ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಕ್ರಿಕೆಟ್‌ ಪಂದ್ಯಾವಳಿಯ ಅಂತಿಮ ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡಾ ಮೈದಾನ ಕೊರತೆ ಇದ್ದರೂ ಗ್ರಾಮೀಣ ಭಾಗದಲ್ಲಿ ಕ್ರೀಡಾಪಟುಗಳಿಗೆ ಕೊರತೆ ಇಲ್ಲ. ಪ್ರತಿಭೆಗಳು ಹಳ್ಳಿಯಿಂದಲೇ ಹೊರಬರುತ್ತವೆ ಹೀಗಾಗಿ ಯಾರೂ ಹಿಂಜರಿಯಬಾರದು ಆತ್ಮವಿಶ್ವಾಸದಿಂದಲೇ ಭಾಗವಹಿಸಬೇಕು ಎಂದು ಹೇಳಿದರು.

ಯುವ ಮುಖಂಡ ಮದನ್ ಯಾಗಾಪೂರ ಮಾತನಾಡಿ, ಯಾವುದೇ ಕ್ರೀಡೆಯಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ ಆದರೆ ಇಲ್ಲಿ ಭಾಗವಹಿಸುವುದು ಮುಖ್ಯ. ಗೆದ್ದವರು ಹಿಗ್ಗಬಾರದು, ಸೋತವರು ಕುಗ್ಗಬಾರದು ಎಂದು ಕಿವಿಮಾತು ಹೇಳಿದರು.

ಮುಖ್ಯ ಅತಿಥಿಗಳಾಗಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷ ಶಿವುಕುಮಾರ ಯಾಗಾಪೂರ, ಬಿಜೆಪಿ ಯುವ ಅಧ್ಯಕ್ಷ ದೇವರಾಜ್‌ ತಳವಾರ,ಪತ್ರಕರ್ತರಾದ ಕಾಶಿನಾಥ ಗುತ್ತೇದಾರ ರವಿಶಂಕರ್ ಬುರ್ಲಿ, ಗ್ರಾಪಂ ಸದಸ್ಯರಾದ ಕೆಂಚಪ್ಪ ಪೂಜಾರಿ, ದೇವಣ್ಣ ಹಳ್ಳಿ, ಶರಣು ಜಿಡಗಿ, ಶ್ರೀನಿವಾಸ ಯಾಗಾಪೂರ, ಅರುಣಕುಮಾರ ಯಾಗಾಪೂರ, ಮೋನು ಚವ್ಹಾಣ, ಶರಣು ಬುಸ್ಸಾ, ಬಸವರಾಜ ಸಂಗಾವಿ ಸೇರಿದಂತೆ ಇತರರು ಇದ್ದರು. ರಾಮು ಭೋವಿ ನಿರೂಪಿಸಿದರು.

ಗಣರಾಜ್ಯೋತ್ಸವ ಭಾರತೀಯರ ಪಾಲಿಗೆ ಹಬ್ಬ: ತಹಸೀಲ್ದಾ‌ರ್

ಚಿತ್ತಾಪುರ: ವಿಶ್ವದ ಅತ್ಯಂತ ದೊಡ್ಡ, ಲಿಖಿತ ರೂಪದಲ್ಲಿದ್ದ ಭಾರತದ ಸಂವಿಧಾನ ಪ್ರಜಾಪ್ರಭುತ್ವ ರಾಷ್ಟ್ರವಾಗಿ ರೂಪಿಸಿದ ಗಣರಾಜ್ಯೋತ್ಸವ ಭಾರತೀಯರ ಪಾಲಿನ ಹಬ್ಬವಾಗಿದೆ ಎಂದು ತಹಸೀಲ್ದಾ‌ರ್ ನಾಗಯ್ಯ ಹಿರೇಮಠ ಹೇಳಿದರು.

ಪಟ್ಟಣದ ಪ್ರಜಾ ಸೌಧದ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 1950 ಜನವರಿ 26 ರಂದು ಭಾರತೀಯರೆಲ್ಲರೂ ಹೆಮ್ಮೆಯಿಂದ ಆಚರಿಸುವ ದಿನ. ರಾಜಪ್ರಭುತ್ವವನ್ನ ತ್ಯಜಿಸಿ ಪ್ರಜಾಪ್ರಭುತ್ವಕ್ಕೆ ಬದಲಾದ ದಿನ. ಹೀಗಾಗಿ ಪ್ರತಿಯೊಬ್ಬ ಭಾರತೀಯನಿಗೂ ಈ ದಿನ ಅತ್ಯಂತ ಮಹತ್ವದ ದಿನವಾಗಿದೆ ಎಂದು ಹೇಳಿದರು

ಗಣರಾಜ್ಯೋತ್ಸವ ದಿನದಂದೇ ಸಂವಿಧಾನ ಜಾರಿಗೆ ಬಂದ ದಿನವನ್ನು ಗೌರವಿಸುವ ಅಭೂತಪೂರ್ವ ದಿನವಾಗಿದೆ ಎಂದರು. ಬೇರೆ ದೇಶಗಳಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಆದರೆ ಸಂಸದೀಯ ಪ್ರಜಾಪ್ರಭುತ್ವ ಹೊಂದಿದ ಭಾರತ ಸದೃಢವಾಗಿದೆ. ದೇಶದ ಆಡಳಿತ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಪತ್ರಿಕಾ ರಂಗ ನಾಲ್ಕು ಅಂಗಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ಉಪನ್ಯಾಸಕರಾಗಿ ಸರ್ಕಾರಿ ಡಿಗ್ರಿ ಕಾಲೇಜಿನ ಪ್ರಾಧ್ಯಾಪಕ ಡಾ.ಸಂಗಪ್ಪ ಮಾಮನ ಶೆಟ್ಟಿ ಮಾತನಾಡಿ, ಭಾರತವು ವಿಶ್ವದಲ್ಲೇ ಅತಿ ದೊಡ್ಡ ಲಿಖಿತ ಸಂವಿಧಾನವನ್ನು ಹೊಂದಿದ್ದು, 1947 ರಲ್ಲಿ ಸ್ವಾತಂತ್ರ್ಯ ಸಿಕ್ಕಿದರೂ ಕೂಡ ನಮ್ಮ ದೇಶವು ಸಂವಿಧಾನವನ್ನು ಹೊಂದಿರಲಿಲ್ಲ. 26 ಜನವರಿ 1950 ರಂದು ಸಂವಿಧಾನವನ್ನು ಸ್ಥಾಪನೆ ಮಾಡಿದ ದಿನವಾಗಿದ್ದು, ಇದರ ಗೌರವಾರ್ಥವಾಗಿ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.

ಪಿಎಲ್‌'ಡಿ ಬ್ಯಾಂಕ್‌ ಅಧ್ಯಕ್ಷ ಭೀಮಣ್ಣ ಸಾಲಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಶರಣಪ್ಪ ಮಂಠಾಳೆ ಅವರು ಮಾತನಾಡಿದರು. ತಹಸೀಲ್ದಾ‌ರ್ ನಾಗಯ್ಯ ಹಿರೇಮಠ ಅವರು ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ, ಕ್ರೀಡೆಗಳಲ್ಲಿ ಸಾಧನೆಗೈದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಕೃಷಿಕ ಸಮಾಜದ ಅಧ್ಯಕ್ಷ ನಾಗರೆಡ್ಡಿ ಗೋಪಸೇನ್, ಗ್ರೇಡ್ 2 ತಹಸೀಲ್ದಾರ್ ರಾಜಕುಮಾರ್ ಮರತೂರಕ‌ರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಅಕ್ರಂ ಪಾಷಾ, ಪಿಎಸ್‌ಐ ಮಂಜುನಾಥ ರೆಡ್ಡಿ, ಅರಣ್ಯಾಧಿಕಾರಿ ವಿಜಯಕುಮಾರ್ ಬಡಿಗೇರ್, ಎಇಇ ಮಹ್ಮದ್ ಇಸ್ಮಾಯಿಲ್, ಕೃಷಿ ಅಧಿಕಾರಿ ಸಂಜೀವಕುಮಾರ ಮಾನಕರೆ, ಅಬಕಾರಿ ಅಧಿಕಾರಿ ವನೀತಾ ಸೀತಾಳೆ, ಕವಿತಾ, ತಮ್ಮನ್ನಾ ಕೌಸರ್, ಅಶ್ವತ್ಥನಾರಾಯಣ, ದೇವಿಂದ್ರರೆಡ್ಡಿ ದುಗನೂರ, ಬಾಬು ಕಾಶಿ, ರಾಜಣ್ಣ ಕರದಾಳ, ಸಾಬಣ್ಣ ದೊಡ್ಡಮನಿ, ನಾಗಯ್ಯ ಗುತ್ತೇದಾರ ಕರದಾಳ, ರಾಮಲಿಂಗ ಬಾನ‌ರ್, ಪ್ರಹ್ಲಾದ ವಿಶ್ವಕರ್ಮ, ರಮೇಶ್ ಬೆಟಗೇರಿ ಸೇರಿದಂತೆ ಇತರರು ಇದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು, ಡಾ.ಶಂಕರ ಕಣ್ಣಿ ನಿರೂಪಿಸಿದರು.

ಮಕ್ಕಳ ಭವಿಷ್ಯಕ್ಕೆ ಕೈಜೋಡಿಸಿದ ಸಚಿವ ಪ್ರಿಯಾಂಕ್ ಖರ್ಗೆ.

ಚಿತ್ತಾಪುರ: ಸಚಿವರು ತಮ್ಮ ವೈಯಕ್ತಿಕ ಹಣದಿಂದ ಎಸ್‌.ಎಸ್‌.ಎಲ್‌.ಸಿ. ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ಪಠ್ಯಪುಸ್ತಕ ಆಧಾರಿತ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡ 35,000 ಪುಸ್ತಕಗಳನ್ನು ವಿತರಿಸುವ ಮಹತ್ವದ ಕಾರ್ಯಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ ನೀಡಿದ್ದಾರೆ.

ಗಣರಾಜ್ಯೋತ್ಸವ ದಿನದಂದು ಕಲಬುರಗಿಯಲ್ಲಿ ಸಾಂಕೇತಿಕವಾಗಿ ಐವರು ವಿದ್ಯಾರ್ಥಿಗಳಿಗೆ ಈ ಮಾದರಿ ಪ್ರಶ್ನೆ ಪತ್ರಿಕೆ ಕೈಪಿಡಿಗಳನ್ನು ವಿತರಿಸಲಾಯಿತು. ಈ ಕ್ರಮವು ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತೆಗೆ ಬಹುಪಯೋಗಿಯಾಗಲಿದೆ ಎಂದು ಶಿಕ್ಷಣ ವಲಯದವರು ಅಭಿಪ್ರಾಯಪಟ್ಟಿದ್ದಾರೆ.

ತಾಲೂಕಿನ ಎಲ್ಲಾ ಸರ್ಕಾರಿ ಪ್ರೌಢ ಶಾಲೆಗಳ ಎಸ್‌.ಎಸ್‌.ಎಲ್‌.ಸಿ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಒಟ್ಟು 4,800 ಮಾದರಿ ಪ್ರಶ್ನೆ ಪತ್ರಿಕೆ ಪುಸ್ತಕಗಳನ್ನು ವಿತರಿಸಲಾಗಿದೆ. ಈಗಾಗಲೇ ತಾಲೂಕಿನ ಶೇಕಡಾ 95ರಷ್ಟು ಶಾಲೆಗಳಿಗೆ ಈ ಪುಸ್ತಕಗಳನ್ನು ವಿತರಿಸಲಾಗಿದೆ. ಉಳಿದ ಶಾಲೆಗಳಿಗೂ ಶೀಘ್ರದಲ್ಲೇ ಪುಸ್ತಕ ವಿತರಣೆ ಪೂರ್ಣಗೊಳ್ಳಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ತಿಳಿಸಿದ್ದಾರೆ.


ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ಕ್ಷೇತ್ರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅವರು ನೀಡುತ್ತಿರುವ ಈ ಸಹಕಾರ ಶ್ಲಾಘನೀಯವಾಗಿದೆ ಎಂದು ಶಿಕ್ಷಕರು ಹಾಗೂ ಪಾಲಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭಾನುವಾರ, ಜನವರಿ 25, 2026

ನಾಗಾವಿ ನಕ್ಷತ್ರ' ಗ್ರಂಥ ಲೋಕಾರ್ಪಣೆ; ಕುಟುಂಬಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸಾಂತ್ವನ"


ಚಿತ್ತಾಪುರ: "ಪತ್ರಕರ್ತರು ಅಪ್ರಾಮಾಣಿಕರಾದರೆ ಸಮಾಜದಲ್ಲಿ ಅರಾಜಕತೆ ಸೃಷ್ಟಿಯಾಗುತ್ತದೆ" ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.

ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ 'ದಿ. ನಾಗಯ್ಯ ಸ್ವಾಮಿ ಅಲ್ಲೂರ ಗೆಳೆಯರ ಬಳಗ' ಆಯೋಜಿಸಿದ್ದ 'ನಾಗಾವಿ ನಕ್ಷತ್ರ' ಸಂಸ್ಮರಣ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು ನಾಗಯ್ಯ ಸ್ವಾಮಿ ಅಲ್ಲೂರ ಅವರ ವ್ಯಕ್ತಿತ್ವಕ್ಕೆ ಶ್ಲಾಘನೆ
ದಿ. ನಾಗಯ್ಯ ಸ್ವಾಮಿ ಅವರ ಪ್ರಾಮಾಣಿಕತೆಯನ್ನು ಸ್ಮರಿಸಿದರು.

ನಿಷ್ಠಾವಂತ ಬರಹಗಾರ: ನಾಗಯ್ಯ ಸ್ವಾಮಿ ಅವರು ಕೇವಲ ಪತ್ರಿಕಾರಂಗಕ್ಕೆ ಸೀಮಿತವಾಗದೆ ಸಾಂಸ್ಕೃತಿಕ ಮತ್ತು ಸಾಹಿತ್ಯ ಲೋಕದಲ್ಲಿ ನಿಷ್ಠಾವಂತ ಬರಹಗಾರರಾಗಿ ಗುರುತಿಸಿಕೊಂಡಿದ್ದರು.
ಸಮಾಜಮುಖಿ ಚಿಂತಕ: ಜನರಿಗಾಗಿ ಮತ್ತು ಮಕ್ಕಳಿಗಾಗಿ ಅವರು ಮಾಡಿದ ಸೇವೆ ಅವರನ್ನು ಒಬ್ಬ ಶಿಕ್ಷಣ ಪ್ರೇಮಿಯನ್ನಾಗಿ ರೂಪಿಸಿತ್ತು.
ಪ್ರಾಮಾಣಿಕತೆಯ ಮಾದರಿ: ಅವರು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದಾಗ ಸಾಹಿತ್ಯ ಸಮ್ಮೇಳನದ ಪ್ರತಿಯೊಂದು ಖರ್ಚು-ವೆಚ್ಚದ ವಿವರವನ್ನು ನಿಖರವಾಗಿ ನೀಡುವ ಮೂಲಕ ತಮ್ಮ ನಿಷ್ಠೆಯನ್ನು ಮೆರೆದಿದ್ದರು.
ಕುಟುಂಬಕ್ಕೆ ಭರವಸೆ ಮತ್ತು ಆರ್ಥಿಕ ನೆರವು
ನಾಗಯ್ಯ ಸ್ವಾಮಿ ಅವರ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿದ ಸಚಿವರು, ವೇದಿಕೆಯಲ್ಲಿದ್ದ ಅವರ ಕುಟುಂಬದವರಿಗೆ ಧೈರ್ಯ ತುಂಬಿದರು.
ವೈಯಕ್ತಿಕ ನೆರವು: ಗೆಳೆಯರ ಬಳಗ ಮಾತ್ರವಲ್ಲದೆ, ವೈಯಕ್ತಿಕವಾಗಿಯೂ ತಾವು ಕುಟುಂಬಕ್ಕೆ ಸಹಾಯ ಮಾಡುವುದಾಗಿ ಭರವಸೆ ನೀಡಿದರು.
ಗ್ರಂಥಾಲಯಗಳಿಗೆ ಪುಸ್ತಕ ಖರೀದಿ: ಕಾಂಗ್ರೆಸ್ ಮುಖಂಡ ನಾಗರೆಡ್ಡಿ ಪಾಟೀಲ ಕರದಳ್ಳಿ ಅವರ ಮನವಿಯಂತೆ, 'ನಾಗಾವಿ ನಕ್ಷತ್ರ' ಸಂಸ್ಮರಣ ಗ್ರಂಥವನ್ನು ಗ್ರಾಮೀಣಾಭಿವೃದ್ಧಿ ಇಲಾಖೆಯ ವ್ಯಾಪ್ತಿಯ ಎಲ್ಲಾ ಗ್ರಂಥಾಲಯಗಳಿಗೆ ಖರೀದಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಧನಸಹಾಯ: ಇದೇ ಸಂದರ್ಭದಲ್ಲಿ ಗೆಳೆಯರ ಬಳಗದಿಂದ ಸಂಗ್ರಹಿಸಲಾದ 1.90 ಲಕ್ಷ ರೂ. ಮೊತ್ತದ ಚೆಕ್ ಅನ್ನು ಸಚಿವರು ಕುಟುಂಬದವರಿಗೆ ಹಸ್ತಾಂತರಿಸಿದರು.
"ನಾಗಯ್ಯ ಸ್ವಾಮಿ ಅವರು ನಿಜವಾದ ಅರ್ಥದಲ್ಲಿ ನಕ್ಷತ್ರವಾಗಿದ್ದರು. ಅವರನ್ನು ಅನುಸರಿಸುವವರು ಕೂಡ ಅವರಂತೆಯೇ ಹೊಳೆಯುತ್ತಾರೆ," ಎಂದು ಸಚಿವರು ಕೊಂಡಾಡಿದರು.

ಈ ಸಂದರ್ಭದಲ್ಲಿ ಪೂಜ್ಯಶ್ರೀ ಅಭಿನವ ಮುನೀಂದ್ರ ಶಿವಾಚಾರ್ಯರು, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾ ಅಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ, ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳ್ಳೊಂಡಿಗಿ,ನಾಗರೆಡ್ಡಿ ಪಾಟೀಲ್, ಲಿಂಗಾರೆಡ್ಡಿ ಗೌಡ ಭಾಸರೆಡ್ಡಿ, ಭೀಮಣ್ಣ ಸಾಲಿ, ವೀರಭದ್ರ ಗುರಮಿಟಕಲ್, ವೀರೇಂದ್ರ ಕೊಲ್ಲೂರ್, ಲಿಂಗಪ್ಪ ಮಲ್ಕನ್, ಭವಾನಿ ಸಿಂಗ್ ಠಾಕೂರ್, ಶಿವಾನಂದ ನಾಲವಾರ ನರಸಪ್ಪ ಚಿನ್ನಕಟ್ಟಿ, ಕಾಶಿರಾಯ ಕಲಾಲ್, ಸಂಗಮೇಶ್ ರೋಣದ, ಮಲ್ಲಿಕಾರ್ಜುನ್ ಕಾಳಗಿ, ಜಗನಗೌಡ ಪಾಟೀಲ್, ಶೇಖರ್ ಕಾಶಿ, ಮಲ್ಲಿಕಾರ್ಜುನ್ ಬೆಣ್ಣೂರಕರ್, ನಾಗಯ್ಯ ಗುತ್ತೇದಾರ್, ವೀರಸಂಗಪ್ಪ ಸುಲೇಗಾವ್, ರಾಮಲಿಂಗ ಬಾನರ್, ಬಸವರಾಜ್ ಚಿನ್ಮಳಿ, ಮಲ್ಲಿಕಾರ್ಜುನ್ ಎಮ್ಮೆನೂರ್, ಶರಣು ಡೋಣಗಾಂವ್, ಸೇರಿದಂತೆ ಇತರರು ಇದ್ದರು.

ಸರ್ಕಾರಿ ನೌಕರರ ಧ್ವನಿಯಾಗಿರುವೆ: ಪ್ರಿಯಾಂಕ್ ಖರ್ಗೆ.

ಚಿತ್ತಾಪುರ: ರಾಜ್ಯದ ವಿಧಾನಸಭೆಯಲ್ಲಿ ನಾನು
ಸರ್ಕಾರಿ ನೌಕರರ ಧ್ವನಿಯಾಗಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಕರ್ನಾಟಕ ರಾಜ್ಯ ಸರ್ಕಾರಿ/ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಠ ಪಂಗಡ ನೌಕರರ ಸಂಘ ಚಿತ್ತಾಪುರ ಶಾಖೆಯ ಪದಾಧಿಕಾರಿಗಳ ಪದಗ್ರಹಣ ಹಾಗೂ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ “ಸೇವಾ ರತ್ನ ಪ್ರಶಸ್ತಿ” ಪ್ರಧಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ನೌಕರರ ಸಮಸ್ಯೆಗಳಿಗೆ ಮತ್ತು ಬೇಡಿಕೆಗಳ ಬಗ್ಗೆ ನಮ್ಮ ಸರ್ಕಾರ ಸ್ಪಂದಿಸಿ ಈಡೇರಿಸಲು ಬದ್ಧವಾಗಿದೆ ಎಂದರು.
ಜನಸಾಮಾನ್ಯರ ಸೇವೆಗೆ ನಾವು ಹಾಗೂ ಸರ್ಕಾರಿ ನೌಕರರು ಸದಾ ಸಿದ್ಧವಾಗಿರಬೇಕು. ಜನರ ಸ್ವಾಭಿಮಾನದ ಬದುಕು ಹಾಗೂ ಜೀವನಮಟ್ಟ ಸುಧಾರಣೆಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಸುವ ಪ್ರಾಮಾಣಿಕ ಸೇವೆ ಸಲ್ಲಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಫೌಝಿಯಾ ತರನುಮ್, ಎಸ್ಪಿ ಅದ್ದೂರು ಶ್ರೀನಿವಾಸಲು, ಜಿಪಂ ಸಿಇಒ ಭಂವರಸಿಂಗ್ ಮೀನಾ, ಕೆಪಿಸಿಸಿ ಸದಸ್ಯ ನಾಗರಡ್ಡಿ ಪಾಟೀಲ ಕರದಾಳ, ಪಿಎಲ್'ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ತಹಶೀಲ್ದಾ‌ರ್ ನಾಗಯ್ಯ ಹಿರೇಮಠ, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ಗಂಗಾ ಪರಮೇಶ್ವರಿ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ಅಮರೇಶ್ವರಿ ಚಿಂಚನಸೂರ, ಮನೂ‌ರ್ ಆಸ್ಪತ್ರೆಯ ಸಂಸ್ಥಾಪಕ ಡಾ.ಫಾರೂಕ್, ಸಂಘದ ರಾಜ್ಯಾಧ್ಯಕ್ಷ ಮಹೇಶ ಸಿ. ಹುಬಳಿ, ಗೌರವಾಧ್ಯಕ್ಷ ವಿಠಲ ಗೋಳಾ, ಕಾರ್ಯಾಧ್ಯಕ್ಷ ಜೈ ಭೀಮ್, ರಾಜ್ಯ ಪ್ರಧಾನ ಕರ್ಯಾದರ್ಶಿ ಸುಧಾಕರ ಎಸ್. ಜಡಗಿ, ರಾಜ್ಯ ಪರಿಷತ್ ಸದಸ್ಯ ಸಂತೋಷ ಸಲಗರ, ಬೆಂಗಳೂರು ನಗರ ಸಂಘದ ಅಧ್ಯಕ್ಷ ಶ್ರೀಧರ ಕೋಟ್ರೇ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ರೇವಣಸಿದ್ದಪ್ಪ ರೋಣದ್, ವಿಜಯಲಕ್ಷ್ಮೀ, ಕವಿತಾ ದೇವಿಂದ್ರಪ್ಪ ದೊರಿ, ಶಾಂತಮಲ್ಲಪ್ಪ ಪಾಟೀಲ, ಗೌತಮಿ ಹಿರೊಳ್ಳಿ, ಸುನೀತಾ, ಜಯಶ್ರೀ, ಮಹೇಶ್ವರಿ, ಗೀತಾ ಸೇರಿದಂತೆ ಇತರರು ಇದ್ದರು.

ಪೂಜ್ಯ ವರಜ್ಯೋತಿ ಬಂತೇಜಿ ಅಣದೂರ ದಿವ್ಯಸಾನಿದ್ಯ ವಹಿಸಿದ್ದರು, ಸಂಘದ ತಾಲೂಕು ಅಧ್ಯಕ್ಷ ಅರುಣಕುಮಾರ ಎಸ್. ಚಿಂಚನಸೂರ ಅಧ್ಯಕ್ಷತೆ ವಹಿಸಿದ್ದರು. ಮನೋವಿಜ್ಞಾನಿ ಡಾ. ದಿಲೀಪಕುಮಾರ ನವಲೆ ಕಲಬುರಗಿ ಉಪನ್ಯಾಸ ನೀಡಿದರು.
ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು ಸಾಧಕರನ್ನು ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು ಹಾಗೂ ಎಸ್.ಎಸ್.ಎಲ್.ಸಿ./ ಪಿ.ಯು.ಸಿ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪುರಸ್ಕಾರ, ಡಾ. ಬಿ.ಆರ್. ಅಂಬೇಡ್ಕರ ರವರ ಕುರಿತು ಪ್ರಬಂಧ ಸ್ಪರ್ದೆ, ಭಾಷಣ ಹಾಗೂ ರಸಪ್ರಶ್ನೆ ಸ್ಪರ್ದೆಯಲ್ಲಿ ವಿಜೇತರಾದ ಕಾಲೇಜು ವಸತಿ ನಿಲಯದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಸಿದ್ದಾರ್ಥ್ ಚಿಮ್ಮಾಇದಲಾಯಿ ಪ್ರಾರ್ಥಿಸಿದರು, ಶಿವಶರಣಪ್ಪ ಮಂಠಾಳೆ ಪ್ರಾಸ್ತಾವಿಕವಾಗಿ ಮಾತನಾಡಿದರು, ಶರಣಪ್ಪ ಕಟ್ಟಿ ಸ್ವಾಗತಿಸಿದರು, ಶಿವಾನಂದ ನಾಲವಾರ ನಿರೂಪಿಸಿದರು, ಸದಾಶಿವ ದೊಡ್ಡಮನಿ ವಂದಿಸಿದರು. ಕಾರ್ಯಕ್ರಮದ ಮುನ್ನ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಮರೆವಣಿಗೆ ಪ್ರಾರಂಭವಾಗಿ ಬಸವೇಶ್ವರ ಕಲ್ಯಾಣ ಮಂಟಪದವರೆಗೆ ನಡೆಯಿತು.

ಗುರುವಾರ, ಜನವರಿ 22, 2026

ಬಿಜೆಪಿ ಕಚೇರಿಯಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ.

ಚಿತ್ತಾಪುರ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ನಿಜಶರಣ ಅಂಬಿಗರ ಚೌಡಯ್ಯ ನವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಅವರು ಭಾವಚಿತ್ರಕ್ಕೆ ಪೂಜೆ ಮಾಡಿ ಗೌರವ ನಮನಗಳು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರಕರ್, ಒಬಿಸಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ್, ನಗರಾಧ್ಯಕ್ಷ ಆನಂದ ಪಾಟೀಲ ನರಿಬೋಳ, ಮಂಡಲ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಇಟಗಿ, ನಾಗರಾಜ ಹೂಗಾರ, ಮುಖಂಡರಾದ ತಮ್ಮಣ್ಣ ಡಿಗ್ಗಿ, ಸುರೇಶ್ ಬೆನಕನಳ್ಳಿ, ಶಾಂತಕುಮಾ‌ರ್ ಮಳಖೇಡ, ದಶರಥ ದೊಡ್ಡಮನಿ, ಮೌನೇಶ್ ಭಂಕಲಗಿ, ವಿಶ್ವನಾಥ ಅಫಜಲಪುರ, ಶರಣು ಸಿದ್ರಾಮಗೋಳ, ಹನುಮಾನ್ ವ್ಯಾಸ್, ರಾಜು ರಾಠೋಡ ಸೇರಿದಂತೆ ಇತರರು ಇದ್ದರು,

ಪ್ರಜಾ ಸೌಧದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಚಿತ್ತಾಪುರ: ಪ್ರಜಾ ಸೌಧದ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಬುಧವಾರ ನಿಜಶರಣ ಅಂಬಿಗರ ಚೌಡಯ್ಯ ನವರ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಯಿತು.

ತಹಸೀಲ್ದಾ‌ರ್ ನಾಗಯ್ಯ ಹಿರೇಮಠ ಅವರು ಭಾವಚಿತ್ರಕ್ಕೆ ಪೂಜೆ ಮಾಡಿ ಗೌರವ ನಮನಗಳು ಸಲ್ಲಿಸಿದರು. ಈ ಸಂದರ್ಭದಲ್ಲಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷರಾದ ಶಿವುಕುಮಾರ ಯಾಗಾಪೂರ, ನಿಂಗಣ್ಣ ಹೆಗಲೇರಿ, ಪಿಎಲ್'ಡಿ ಬ್ಯಾಂಕ್‌ ಅಧ್ಯಕ್ಷ ಭೀಮಣ್ಣ ಸಾಲಿ, ಉಪಾಧ್ಯಕ್ಷ ವೀರುಪಾಕ್ಷಪ್ಪ ಗಡ್ಡದ, ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ, ಪಿಎಸ್‌ಐ ಮಂಜುನಾಥ ರೆಡ್ಡಿ, ಯುವ ಅಧ್ಯಕ್ಷರಾದ ರಾಜೇಶ ಹೊಳಿಕಟ್ಟಿ, ಮಲ್ಲಿಕಾರ್ಜುನ ಅಲ್ಲೂರಕರ್, ನಗರಾಧ್ಯಕ್ಷ ಪ್ರಭು ಹಲಕರ್ಟಿ, ಯುವ ಕಾಂಗ್ರೆಸ್‌ ಅಧ್ಯಕ್ಷ ದೇವು ಯಾಬಾಳ, ಮುಖಂಡರಾದ ಹಣಮಂತ ಸಂಕನೂರ, ರಾಮಲಿಂಗ ಬಾನ‌ರ್, ಬಸವರಾಜ ಚಿನ್ನಮಳ್ಳಿ, ತಮ್ಮಣ್ಣ ಡಿಗ್ಗಿ, ಸಾಬಣ್ಣ ಭರಾಟೆ, ಬಸಣ್ಣ ತಳವಾರ, ದಶರಥ ದೊಡ್ಡಮನಿ, ಗುಂಡು ಐನಾಪೂರ, ಶರಣು ಡೋಣಗಾಂವ, ಸಂತೋಷ ಇವಣಿ, ಸಾಬಣ್ಣ ಡಿಗ್ಗಿ, ಕಾಶಪ್ಪ ಡೋಣಗಾಂವ, ಭೀಮಾಶಂಕರ ಹೊಳಿಕಟ್ಟಿ, ರಾಜಾಹುಲಿ, ಲಕ್ಷ್ಮೀಕಾಂತ ಸಾಲಿ, ಕಿಶನ್ ಮೂಕೆ, ಶರಣು ಸಿದ್ರಾಮಗೋಳ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...